108 ಅಡಿ ಎತ್ತರದ ಶಿವಲಿಂಗ ದರ್ಶನ
ಕೆಜಿಎಫ್: ಮಹಾಶಿವರಾತ್ರಿ ಪ್ರಯುಕ್ತ ಕೆಜಿಎಫ್ ಕಮ್ಮಸಂದ್ರ ಗ್ರಾಮದ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ 108 ಅಡಿಗಳ ಎತ್ತರದ ಶಿವಲಿಂಗ ದರ್ಶನ ಹಾಗೂ ಶ್ರೀ ಮಂಜುನಾಥಸ್ವಾಮಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ದಕ್ಷಿಣ ಕರ್ನಾಟಕಕ್ಕೆ ಸುಪ್ರಸಿದ್ಧ ಪಡೆದಿರುವ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನಕ್ಕೆ ರಾಜ್ಯದ ವಿವಿಧ ಭಾಗಗಳೂ ಸೇರಿದಂತೆ ತಮಿಳುನಾಡು, ಆಂಧ್ರಪ್ರದೇಶ, ಕೇರಳ ಮುಂತಾದ ರಾಜ್ಯಗಳಿಂದ ಲಕ್ಷಾಂತರ ಭಕ್ತಾಧಿಗಳು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಮಹಾಶಿವರಾತ್ರಿ ಪ್ರಯುಕ್ತ ಕೋಟಿಲಿಂಗ ದೇವಸ್ಥಾನದಲ್ಲಿ ಗಣೇಶಾರಾಧನೆ, ವಿವಿಧ ಹೋಮಗಳು, ಭಜನೆ, ಸಂಗೀತ ಕಾರ್ಯಕ್ರಮ, ಕೀರ್ತನೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ, ಅನ್ನ ಸಂತಾರ್ಪಣೆ ಸೇರಿದಂತೆ ಇಂದು ರಾತ್ರಿ ಜಾಗರಣೆ ಮಾಡುವ ಪ್ರಯುಕ್ತ ಭಕ್ತಾಧಿಗಳಿಗೆ ವಿವಿಧ ಪೂಜೆ ಹಾಗೂ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದು ದೇವಸ್ಥಾನದ ಸಮಿತಿ ಮುಖ್ಯಸ್ಥರು ತಿಳಿಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲು ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಡಾ. ರೋಹಿಣಿಕಟೋಚ್ ಸೆಫಟ್ ಅವರ ನೇತೃತ್ವದಲ್ಲಿ ಹೆಚ್ಚಿನ ಪೊಲೀಸ್ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ದೇವಸ್ಥಾನದ ಸಂಸ್ಥಾಪಕರಾದ ಶಾಂಭಶಿವಮೂರ್ತಿಸ್ವಾಮೀಜಿ ಸೇರಿದಂತೆ ಜಿಲ್ಲಾಧಿಕಾರಿ ಡಿ.ಕೆ. ರವಿ, ಕೆಜಿಎಫ್ ಶಾಸಕಿ ವೈ. ರಾಮಕ್ಕ, ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಅವರ ಪುತ್ರಿ ರೂಪಕಲಾ ಶಶಿಧರ್, ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ, ಜಿಪಂ ಸದಸ್ಯ ಆ.ಮು. ಲಕ್ಷ್ಮೀನಾರಾಯಣ, ಆರ್. ನಾರಾಯಣರೆಡ್ಡಿ, ಮಾಜಿ ಶಾಸಕ ವೈ. ಸಂಪಂಗಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಭೇಟಿ ನೀಡಿ ದೇವರಿಗೆ ವಿಶ್ಷ ಪೂಜೆ ಸಲ್ಲಿಸಿ ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

