ಬಸ್ ನಿಲ್ದಾಣದ ದುರಸ್ತಿ ಕಾಮಗಾರಿಗೆ ಇಂದು ಚಾಲನೆ
ಕೆಜಿಎಫ್: ನಗರದ ಹೃದಯಭಾಗದಲ್ಲಿರುವ ಬಸ್ ನಿಲ್ದಾಣ ಹದೆಗೆಟ್ಟಿದ್ದು ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಇತ್ತು. ನಗರಸಭೆ ಬಸ್ ನಿಲ್ದಾಣದ ದುರಸ್ತಿಗೆ ಇದೀಗ ಮೋಕ್ಷ ದೊರೆತಿದೆ.
28 ರಂದು ಶುಕ್ರವಾರ ಬಸ್ ನಿಲ್ದಾಣದ ಕಾಮಗಾರಿ ಪ್ರಾರಂಭವಾಗಲಿದೆ. ಕಾಮಗಾರಿಗೆ ಚಾಲನೆ ನೀಡುವ ಹಿನ್ನಲೆಯಲ್ಲಿ ನಗರಸಭೆ ಪೌರಾಯುಕ್ತ ವಿ. ಬಾಲಚಂದ್ರ ಹಾಗೂ ಅಧಿಕಾರಿಗಳ ತಂಡ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ತಾತ್ಕಾಲಿಕವಾಗಿ ಖಾಸಗಿ ಬಸ್ಗಳು ನಗರಸಭಾ ಮೈದಾನದಿಂದ ತೆರಳಲಿದೆ ಹಾಗೂ ರಾಜ್ಯ ಸಾರಿಗೆ ಬಸ್ಗಳು ಸರ್ಕಾರಿ ಬಸ್ ನಿಲ್ದಾಣದಿಂದ ತೆರಳಲಿದೆ ಎಂದು ತಿಳಿಸಿದ ಪೌರಾಯುಕ್ತ ಬಾಲಚಂದ್ರ, 85 ಲಕ್ಷ ವೆಚ್ಚದಲ್ಲಿ ವ್ಯಾಪಾರ ಮಳಿಗೆ ಹಾಗೂ 1 ಕೋಟಿ ವೆಚ್ಚದಲ್ಲಿ ಬಸ್ ನಿಲ್ದಾಣ ಕಾಮಗಾರಿ ಜಾರಿಯಾಗಲಿದೆ. ಈ ಯೋಜನೆ ಜಾರಿಯಿಂದ ನಗರದ ಜನತೆಗೆ ಹೆಚ್ಚಿನ ಉಪಯೋಗವಾಗಲಿದ್ದು ಹಲವು ದಶಕಗಳ ಜನರ ಬೇಡಿಕೆ ಈಡೇರಿದಂತಾಗಿದೆ ಎಂದರು. ಈ ವೇಳೆ ನಗರಸಭಾ ಅಧಿಕಾರಿಗಳಾದ ನಂಜುಂಡಸ್ವಾಮಿ, ಸರಸ್ವತಿ, ಅಖಿಲಾಬಾನು, ಮೈಲಾರಸ್ವಾಮಿ, ಚಂದ್ರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

