ವಿದ್ಯಾರ್ಥಿನಿಲಯಕ್ಕೆ ಶೀಘ್ರ ಶಂಕುಸ್ಥಾಪನೆ
ಕೋಲಾರ: ನಗರದಲ್ಲಿ ಸುಸಜ್ಜಿತ ವಿದ್ಯಾರ್ಥಿನಿಲಯ ನಿರ್ಮಿಸಲು ಹಾಕಿಕೊಂಡಿರುವ ಯೋಜನೆಗೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದು ರಾಜ್ಯ ವಕ್ಕಲಿಗರ ಸಂಘದ ಅಧ್ಯಕ್ಷ ಅಪ್ಪಾಜಿಗೌಡ ತಿಳಿಸಿದರು.
ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಕೆಜಿಎಫ್ನ ಸಂಘದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಜಿಲ್ಲೆಗೆ ಆಗಮಿಸಿದ ಅವರನ್ನು ಅರಾಭಿಕೊತ್ತನೂರು ಗ್ರಾಮದಲ್ಲಿ ಸಂಘದ ನೂತನ ನಿರ್ದೇಶಕ ವಕ್ಕಲೇರಿ ರಾಮು ಮತ್ತು ಗ್ರಾಮಸ್ಥರು ಆತ್ಮೀಯವಾಗಿ ಸ್ವಾಗತಿಸಿದ ಸಂದರ್ಭದಲ್ಲಿ ಮಾತನಾಡಿ, ವಕ್ಕಲಿಗರ ವಿದ್ಯಾರ್ಥಿ ನಿಲಯಕ್ಕಾಗಿಯೇ 27 ಗುಂಟೆ ಜಮೀನು ಖರೀದಿಸಿರುವ ಮಾಹಿತಿ ಇದ್ದು, ಅದರಲ್ಲಿ 15 ಗುಂಟೆ ಜಮೀನಿನಲ್ಲಿ ಸುಸಜ್ಜಿತ ವಿದ್ಯಾರ್ಥಿ ಭವನ ಕಟ್ಟಡ ನಿರ್ಮಿಸಲುಶೀಘ್ರ ಕಾಮಗಾರಿಗೆ ಚಾಲನೆ ನೀಡುವುದಾಗಿ ಭರವಸೆ ನೀಡಿದರು.
ಸಂಘ ಯಾರೊಬ್ಬರ ಸ್ವತ್ತು ಅಲ್ಲ ಎಂದ ಅವರು, ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸಂಘದಿಂದ ವಿದ್ಯಾರ್ಥಿನಿಲಯ, ಶಾಲೆ ತೆರೆಯುವ ಉದ್ದೇಶವಿದ್ದು, ಈ ಕುರಿತು ಸಚಿವರಾದ ಡಿ.ಕೆ. ಶಿವಕುಮಾರ್ ಹಾಗೂ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಜಾಗ ನೀಡುವಂತೆ ಕೋರುವುದಾಗಿ ತಿಳಿಸಿದರು. ಸಂಘದಿಂದ ಪ್ರತಿ ಜಿಲ್ಲಾ ಕೇಂದ್ರದಲ್ಲೂ ವಿದ್ಯಾಸಂಸ್ಥೆ, ವಿದ್ಯಾರ್ಥಿ ನಿಲಯ, ಕಲ್ಯಾಣ ಮಂಟಪ ನಿರ್ಮಿಸುವ ಮೂಲಕ ಸಮಾಜಕ್ಕೆ ನೆರವಾಗಲು ನೂತನ ಕಾರ್ಯಕಾರಿ ಸಮಿತಿ ನಿರ್ಧರಿಸಿದೆ ಎಂದು ತಿಳಿಸಿದರು.
ಮೊದಲು ಕೇವಲ ಬೆಂಗಳೂರು ನಗರದಿಂದ 10 ಸಾವಿರ ಹಾಗೂ ಇಡೀ ರಾಜ್ಯದಿಂದ 21ಸಾವಿರ ಸದಸ್ಯರನ್ನು ನೊಂದಾಯಿಸಲಾಗಿತ್ತು, ಇದೀಗ ರಾಜ್ಯದಲ್ಲಿ ಒಟ್ಟಾರೆ 2.95 ಲಕ್ಷ ಸದಸ್ಯರನ್ನು ನೋಂದಾಯಿಸಲಾಗಿದೆ, ಮುಂದಿನ ತಿಂಗಳಿಂದಲೇ ಹೊಸ ಸದಸ್ಯರ ಸೇರ್ಪಡೆಗೂ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಜಿಲ್ಲೆಗೆ ನೂತನ ಅಧ್ಯಕ್ಷರನ್ನು ಸ್ವಾಗತಿಸಿದ ನಿರ್ದೇಶಕ ವಕ್ಕಲೇರಿ ರಾಮು, ಜಿಲ್ಲೆಯಲ್ಲೊಂದು ವಿದ್ಯಾಸಂಸ್ಥೆ, ವಿದ್ಯಾರ್ಥಿನಿಲಯವನ್ನು ಸ್ಥಾಪಿಸುವ ಮೂಲಕ ಸಮುದಾಯದ ಶೈಕ್ಷಣಿಕ ಪ್ರಗತಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.
ರಾಜ್ಯ ವಕ್ಕಲಿಗರ ಸಂಘದ ಕಾರ್ಯದರ್ಶಿ ಪ್ರೊ. ನಾಗರಾಜ್, ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಸಂಘದ ಸಿಇಒ ಹರೀಶ್ ಗೌಡ, ಉಪಾಧ್ಯಕ್ಷ ಅ. ದೇವೇಗೌಡ, ನಿರ್ದೇಶಕ ಸತೀಶ್, ಇಒ ಮುನಿಯಪ್ಪ ಮತ್ತಿತರರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ನಂಜುಂಡಪ್ಪ, ಸೊಣ್ಣೇಗೌಡ, ನಂಜುಂಡಪ್ಪ, ಕೆ.ಬಿ. ಮುನಿವೆಂಕಟಪ್ಪ, ಗ್ರಾಪಂ ಅಧ್ಯಕ್ಷ ನಾಗರಾಜ್, ಸದಸ್ಯರಾದ ಎ. ಶ್ರೀಧರ್, ಛತ್ರಕೋಡಿಹಳ್ಳಿ ಸುಧಾಕರಗೌಡ, ಎಪಿಎಂಸಿ ನಿರ್ದೇಶಕ ಚಂದ್ರೇಗೌಡ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

