ಕೋಲಾರ

ಗೊಂದಲದ ಗೂಡಾದ ನೀರು ಶುದ್ಧೀಕರಣ ಘಟಕದ ಶಂಕುಸ್ಥಾಪನಾ ಸಮಾರಂಭ

Published On :

ಬಾಗೇಪಲ್ಲಿ: ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲಾ ಆವರಣದಲ್ಲಿ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸುಮಾರು 50 ಲಕ್ಷ ರು. ವೆಚ್ಚದಲ್ಲಿ ತಾಲೂಕಿನ 10 ಸರ್ಕಾರಿ ಶಾಲೆಗಳಿಗೆ ಶುದ್ಧ ಕುಡಿಯುವ ನೀರಿನ ಶುದ್ಧೀಕರಣ ಘಟಕಗಳ ಶಂಕುಸ್ಥಾಪನಾ ಸಮಾರಂಭ ಗೊಂದಲದ ಗೂಡಾಗಿ ಪರಿಣಮಿಸಿದ ಘಟನೆ ಮಂಗಳವಾರ ನಡೆದಿದೆ.
ಪಟ್ಟಣದ ಶಾಲಾ ಆವರಣದಲ್ಲಿ ನಡೆಯುತ್ತಿದ್ದ ಸಮಾರಂಭಕ್ಕೆ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಬರುತ್ತಿದ್ದಂತೆ ರೈತ ಸಂಘದ ಮುಖಂಡರು ಸಚಿವರನ್ನು ಕಾರ್ಯಕ್ರಮದಲ್ಲಿ ಭಾಗವಹಿಸಲು ಅಡ್ಡಿಪಡಿಸಿದರೆ ಇನ್ನೊಂದು ಕಡೆ ಕಾರ್ಯಕ್ರಮ ಪ್ರಾರಂಭವಾಗುತ್ತಿದ್ದಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ನೂರಾರು ಕಾರ್ಯಕರ್ತರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಾಗೂ ದಲಿತರನ್ನು ಕಡೆಗಣಿಸುತ್ತಿದ್ದಾರೆಂದು ಆರೋಪಿಸಿ ಕಪ್ಪು ಪಟ್ಟಿಯನ್ನು ಪ್ರದರ್ಶನ ಮಾಡುವ ಮೂಲಕ ಪ್ರತಿಭಟಿಸಿದರು.
ಒಬ್ಬ ಕೇಂದ್ರ ಸಚಿವರ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳನ್ನು ಬಿಟ್ಟರೇ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿರಲಿಲ್ಲ. ಈ ಕಾರ್ಯಕ್ರಮಕ್ಕಾಗಿ ಹಾಕಲಾಗಿದ್ದ ಬಹುತೇಕ ಚೇರುಗಳು ಖಾಲಿಯಾಗಿದ್ದವು. ಕಾರ್ಯಕ್ರಮದಲ್ಲಿ ಈ ಕ್ಷೇತ್ರದ ಮಾಜಿ ಶಾಸಕರು ವೇದಿಕೆಯಲ್ಲಿ ಭಾಗವಹಿಸಿದ್ದರಿಂದ ಸ್ಥಳೀಯ ಹಾಲಿ ಶಾಸಕರು ಗೈರು ಹಾಜರಾಗಿದ್ದರು. ಇಂದಿನ ಸಮಾರಂಭ ಒಂದಲ್ಲ ಒಂದು ರೀತಿಯಲ್ಲಿ ಗೊಂದಲದ ಗೂಡಾಗಿತ್ತು.ಇದರಿಂದ ಸಚಿವರು ಮುಖದಲ್ಲಿ ಆತಂಕದ ಛಾಯೆ ಎದ್ದು ಕಾಣಿಸುತ್ತಿತ್ತು.
ವಿಫಲ ಆರೋಪ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಅತ್ಯಧಿಕ ಮತಗಳಿಂದ ಆಯ್ಕೆಯಾಗಿ 5 ವರ್ಷಗಳ ಅಧಿಕಾರದ ಅವದಿ ಮುಗಿಯುವ ಸಮಯ ಸಮೀಪಿಸುತ್ತಿದ್ದರೂ ರೈತರಿಗೆ ಯಾವುದೇ ರೀತಿಯಲ್ಲಿ ಶಾಶ್ವತ ಯೋಜನೆಗಳನ್ನು ಅನುಷ್ಠಾನಕ್ಕೆ ತರುವಲ್ಲಿ ವಿಫಲರಾಗಿದ್ದೀರಿ, ಕಳೆದ 5 ವರ್ಷಗಳಿಂದ ಬರಡು ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆ ಜಾರಿ ಮಾಡುವುದಾಗಿ ಭರವಸೆ ಈಡೇರಿಸಿಲ್ಲ. ಇದರ ಬದಲಿಗೆ ಎತ್ತಿನ ಹೊಳೆ ಯೋಜನೆ ಜಾರಿ ಮಾಡುವುದಾಗಿ, ಶಂಕುಸ್ಥಾಪನೆ ಮಾಡುವುದು ಸೇರಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುವ ಭರವಸೆ ಹಾಗೂ ವಿವಿಧ ಯೋಜನೆಗಳಿಗೆ ಶಂಖುಸ್ಥಾನ ಮಾಡುವುದರಲ್ಲಿಯೇ ಕಾಲಹರಣ ಮಾಡುತ್ತಿದ್ದೀರಿ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಅಧ್ಯಕ್ಷ ಬಿ. ನಾರಾಯಣ ಸ್ವಾಮಿ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಳ್ಳು ಭರವಸೆಗಳನ್ನು ಹಾಗೂ ಸುಳ್ಳು ಸುಳ್ಳು ಶಂಕುಸ್ಥಾಪನೆಗಳನ್ನು ಹಾಗೂ ರೈತರನ್ನು ವಂಚಿಸುವುದನ್ನು ಬಿಟ್ಟು ಈ ಭಾಗದ ಜನರ ಸಮಸ್ಯೆಗಳ ಕಡೆ ಗಮನ ಹರಿಸದೇ, ನೀರಾವರಿ ತಜ್ಞ ಡಾ. ಪರಮಶಿವಯ್ಯರವರ ವರಧಿ ಆಧಾರಿತ ಶಾಶ್ವತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಿ,ಕಾಮಗಾರಿಯನ್ನು ಪ್ರಾರಂಭಿಸಿದ ನಂತರವೇ ನಮ್ಮ ಕ್ಷೇತ್ರಕ್ಕೆ ಕಾಲಿಡಬೇಕು ಎಂದು ಆಗ್ರಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.