ಕೋಲಾರ

ಜಿಪಂ ಅವಿಶ್ವಾಸ ಗೊತ್ತುವಳಿ ಸಲ್ಲ: ಸೊಣ್ಣೇಗೌಡ ಆಗ್ರಹ

Published On :

ಶಿಡ್ಲಘಟ್ಟ: ಚಿಕ್ಕಬಳ್ಳಾಪುರ ಜಿಪಂ ಅಧ್ಯಕ್ಷರು-ಉಪಾಧ್ಯಕ್ಷರನ್ನು ಅಧಿಕಾರದಿಂದ ಇಳಿಸಲು ಸದಸ್ಯರು ಅವಿಶ್ವಾಸ ಗೊತ್ತುವಳಿ ಮಂಡಿಸಲು ಮುಂದಾಗಿರುವುದು ಖಂಡನೀಯ. ಅವಧಿ ಮುಗಿಯುವ ಮೊದಲೇ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಬದಲಾವಣೆ ಮಾಡುವುದು ಪ್ರಜಾಪ್ರಭುತ್ವ ಮೌಲ್ಯಗಳಿಗೆ ಮಸಿ ಬಳಿದಂತೆ ಎಂದು ಜಿಲ್ಲಾ ರೇಷ್ಮೆ ಬೆಳೆಗಾರರ ಹಿತರಕ್ಷಣಾ ವೇದಿಕೆ ಸಂಚಾಲಕ ಯಲುವಹಳ್ಳಿ ಸೊಣ್ಣೇಗೌಡ  ಆರೋಪಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಹೊಸ ಜಿಲ್ಲೆ ಈಗಾಗಲೇ ಹಿಂದುಳಿದಿದ್ದು, ಈ ರೀತಿಯ ಘಟನೆಗಳಿಂದ ಮತ್ತಷ್ಟು ಹಿಂದುಳಿಯುವುದರಲ್ಲಿ ಅನುಮಾನವಿಲ್ಲ. ವೈಯಕ್ತಿಕ ಹಿತಾಸಕ್ತಿಗಳಿಗಾಗಿ ಜಿಪಂ ಅಧ್ಯಕ್ಷರು-ಉಪಾಧ್ಯಕ್ಷರನ್ನು ಬದಲಿಸುವುದು ಸರಿಯಾದ ಕ್ರಮವಲ್ಲ. ಜಿಲ್ಲೆಯ ಜ್ವಲಂತ ಸಮಸ್ಯೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಮಾತನಾಡದ ಸದಸ್ಯರು ಅವಧಿಗಿಂತ ಮೊದಲೇ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಬದಲಾವಣೆ ಮಾಡುವ ಹುನ್ನಾರ ಏಕೆ ನಡೆಸುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ.
ಈ ಸಂಬಂಧ ಜನಸಾಮಾನ್ಯ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒ ಮಧ್ಯೆ ಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.