ಬಾಗೇಪಲ್ಲಿ ರೋಗ ಮುಕ್ತ ಕ್ಷೇತ್ರ ಮಾಡುವುದೇ ನನ್ನ ಗುರಿ
ಬಾಗೇಪಲ್ಲಿ: ಬಾಗೇಪಲ್ಲಿಯನ್ನು ರೋಗ ಮುಕ್ತ ಕ್ಷೇತ್ರವನ್ನಾಗಿಸುವುದೇ ನನ್ನ ಮುಖ್ಯ ಗುರಿ ಎಂದು ಕೇಂದ್ರ ಸಚಿವ ಎಂ. ವೀರಪ್ಪ ಮೊಯ್ಲಿ ನುಡಿದರು.
ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲಾ ಆವರಣದಲ್ಲಿ ಸಂಯುಕ್ತ ಮತ್ತು ಸಾಮಾಜಿಕ ಅಡಿಯಲ್ಲಿ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ವತಿಯಿಂದ ಏರ್ಪಡಿಸಲಾಗಿದ್ದ 50 ಲಕ್ಷ ರು. ವೆಚ್ಚದಲ್ಲಿ ತಾಲೂಕಿನ 10 ಸರ್ಕಾರಿ ಬಾಲಕಿಯರ ಪ್ರೌಢಶಾಲೆಗಳಿಗೆ ಕುಡಿಯುವ ನೀರಿನ ಶುದ್ದೀಕರಣ ಘಟಕಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಸತತವಾಗಿ ಮಳೆಯಿಲ್ಲದೇ ಅಂತರ್ಜಲದ ಮಟ್ಟ ತೀವ್ರವಾಗಿ ಕುಸಿದಿರುವ ಪರಿಣಾಮವಾಗಿ ಈ ಭಾಗದಲ್ಲಿ ಫ್ಲೋರೈಡ್ ಅಂಶ ಹೆಚ್ಚಾಗಿದೆ. ಇದರಿಂದ ಈ ಭಾಗದಲ್ಲಿ ಹುಟ್ಟುವ ಮಕ್ಕಳು ಸೇರಿದಂತೆ ಅನೇಕ ಜನರು ಪ್ಲೋರೈಡ್ಮುಕ್ತ ಕುಡಿಯುವ ನೀರನ್ನು ಕುಡಿಯುವುದರಿಂದ ವಿವಿಧ ರೀತಿಯ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ.ಇದನ್ನು ಮನಗೊಂಡು ಇಂಡಿಯನ್ ಆಯಿಲ್ ಕಾರ್ಪೋರೇಷನ್ ರವರು ಸುಮಾರು 50ಲಕ್ಷ ರೂ.ಗಳ ವೆಚ್ಚದಲ್ಲಿ ಈ ಭಾಗದಲ್ಲಿ ಪ್ಲೋರೈಡ್ ಮುಕ್ತ ಶುದ್ಧ ಕುಡಿಯುವ ನೀರನ್ನು ಮೊದಲಿಗೆ ಶಾಲಾ ಮಕ್ಕಳಿಗೆ ಶುದ್ದ ಕುಡಿಯುವ ನೀರಿನ ಸೌಲಭ್ಯವನ್ನು ಒದಗಿಸುವ ನಿಟ್ಟಿನಲ್ಲಿ ತಾಲೂಕಿನ 10 ಸರ್ಕಾರಿ ಶಾಲೆಗಳಲ್ಲಿ ಶುದ್ಧೀಕರಣ ಘಟಕಗಳನ್ನು ಪ್ರಾರಂಭಿಸುವುದಾಗಿ ತಿಳಿಸಿದರು. ಉತ್ತಮವಾದಂತಹ ಕಾರ್ಯಕ್ರಮಗಳನ್ನು ಮಾಡುವಾಗ ಕೆಲವರು ಅಡ್ಡಿಪಡಿಸಲು ವಿವಿಧ ರೀತಿಯಲ್ಲಿ ಕಸರತ್ತು ಮಾಡುತ್ತಾರೆ. ಆದರೆ ನಾನು ಕೆಲವರ ಗೊಡ್ಡು ಬೆದರಿಕೆಗಳಿಗೆ ಬೆದರುವ ಇಲ್ಲವೇ ಅವರಿಗೆ ಉತ್ತರ ನೀಡುವಂತಹ ಅಗತ್ಯ ನನಗೆ ಇಲ್ಲ ಎಂದರು.
ಈ ಭಾಗದ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿ ಮತ್ತು ರೈತರ ಹಿತವೇ ಮುಖ್ಯವೇ ಹೊರತು ಕೇವಲ ಕೆಲವರನ್ನು ಸಂತೋಷಪಡಿಸಲು ಇಂತಹ ಕಾರ್ಯಕ್ರಮಗಳಿಂದ ದೂರ ಸರಿಯವ ಪ್ರಶ್ನೆಯೇ ಇಲ್ಲ, ಯಾರೇ ಅಡ್ಡಿಪಡಿಸಿದರೂ ಜನರಿಗೆ ಉಪಯೋಗವಾಗುವಂತಹ ಇಂತಹ ಕಾರ್ಯಕ್ರಮಗಳನ್ನು ಮುಂದುವರಿಸಿಯೇ ತೀರುವುದಾಗಿ ತಿಳಿಸಿದರು. ವಿಧಾನಸಭಾ ಉಪಾಧ್ಯಕ್ಷ ಎನ್.ಹೆಚ್. ಶಿವಶಂಕರರೆಡ್ಡಿ ,ಮಾಜಿ ಶಾಸಕ ಎನ್.ಸಂಪಂಗಿ, ತಾ.ಪಂ. ಅಧ್ಯಕ್ಷ ಮುನಿರತ್ನಮ್ಮ, ಜಿ.ಪಂ.ವ ುಖ್ಯಕಾರ್ಯನಿರ್ವಹಣಾಧಿಕಾರಿ ಲೀಲಾವತಿ, ಇಂಡಿಯನ್ ಆಯಿಲ್ ಕಾರ್ಪೋರೇಷನ್ ನಿರ್ದೇಶಕ ಕೆ.ಆರ್. ಅರೋರಾ, ಜಿ.ಪಂ.ಸದಸ್ಯ ಎಂ.ವಿ ಕೃಷ್ಣಪ್ಪ, ಅಮರಾವತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸರೆಡ್ಡಿ, ರಿಜ್ವಾನ್ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

