ಕೋಲಾರ

ಮಹಿಳಾ ಸಹಾಯವಾಣಿ

Published On :

ಗೌರಿಬಿದನೂರು: ಮಹಿಳಾ ಮತ್ತು ಮಕ್ಕಳ ಇಲಾಖೆ ಪಟ್ಟಣದ ಕೋಟೆಯಲ್ಲಿರುವ ಅಸೆಡಾ ಸ್ವಸಹಾಯ ಸಂಸ್ಥೆಯ ಸಹಯೋಗದೊಂದಿಗೆ ಮಹಿಳಾ ಸಹಾಯವಾಣಿ ಸಾಂತ್ವನ ಕೇಂದ್ರವನ್ನು ವಿಧಾನಸಭಾ ಉಪ ಸಭಾಧ್ಯಕ್ಷ ಎನ್.ಎಚ್. ಶಿವಶಂಕರರೆಡ್ಡಿ ಪ್ರಾರಂಭಿಸಿದರು.
ಅಸೆಡಾ ಕಾರ್ಯಾಲಯದ ಸಮೀಪ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ಆಧುನಿಕ ಮಹಿಳೆ ಪುರುಷರಿಗೆ ಸಮಾನಗಿ ಎಲ್ಲಾ ಕ್ಷೇತ್ರಗಳಲ್ಲೂ ಮುಂದುವರಿಯುತ್ತಿದ್ದಾಳೆ ಎಂದರು.
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಮಹಿಳೆಯರು ಮುಂದಿದ್ದಾರೆ. ದುಡಿಯುವ ಮಹಿಳೆಯರಿಗೆ ಕೆಲಸದ ವೇಳೆ ಲೈಂಗಿಕ ಕಿರುಕುಳಗಳ ಪ್ರಕರಣಗಳು ಹೆಚ್ಚಾಗುತ್ತಿವೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವುದು ದುರಾದೃಷ್ಟಕರ ಎಂದರು.
ಮಹಿಳಾ ಮತ್ತು ಮಕ್ಕಳ ಇಲಾಖೆ ಉಪ ನಿರ್ದೇಶಕಿ ಸುರೇಖಾ ವಿಜಯ ಪ್ರಕಾಶ್, ತಹಸೀಲ್ದಾರ್ ಡಾ.ಎನ್. ಭಾಸ್ಕರ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎ.ಜಿ. ಸುಧಾಕರ್, ಸಿಡಿಪಿಒ ಜಯಲಕ್ಷಮ್ಮ, ತಾಪಂ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಪಾರ್ವತಮ್ಮ, ಬಿಇಒ ಬಯ್ಯಪರೆಡ್ಡಿ, ಇಒ ರೆಡ್ಡೆಪ್ಪ, ಪುರಸಭಾ ಸದಸ್ಯರಾದ ನರಸಿಂಹ ಮೂರ್ತಿ, ಜಿ. ಬಾಲಾಜಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.