ಕೋಲಾರ

ಚಿಂತಾಮಣಿಯಲ್ಲಿ ಜೀತ ವಿಮುಕ್ತಿ ಕರ್ನಾಟಕ ಕಾರ್ಯಕರ್ತರ ಮನವಿ

Published On :

ಚಿಂತಾಮಣಿ: ಒಡಿಶಾ ಸರ್ಕಾರವು ಜೀತದಾಳುಗಳ ಕೈ ಕತ್ತರಿಸಿರುವ ಅಪರಾಧಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕರ್ನಾಟಕ ಜೀತದಾಳು ಮತ್ತು ಕೃಷಿ ಕಾರ್ಮಿಕರ ಒಕ್ಕೂಟ ತಾಲೂಕು ಶಾಖಾ ಘಟಕದ ವತಿಯಿಂದ ನೂರಾರು ಕಾರ್ಯಕರ್ತರು ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಜೀವಿಕ-ಜೀತ ವಿಮುಕ್ತಿ ಕರ್ನಾಟಕ, ಜೀತದಾಳು ಮತ್ತು ಕೃಷಿ ಕಾರ್ಮಿಕರ ಒಕ್ಕೂಟದ ವತಿಯಿಂದ ಇಂದು ತಾಲ್ಲೂಕು ಕಚೇರಿ ಮುಂಭಾಗದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ತಾಲೂಕು ಸಂಚಾಲಕರಾದ ಸರಸ್ವತಮ್ಮ ಮತ್ತು ರವೀಂದ್ರನಾಥ ನಾಯಕತ್ವದಲ್ಲಿ ಆಗ್ರಹಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಸರಸ್ವತಮ್ಮ, ಕಳೆದ ಡಿ.15ರಂದು ಒಡಿಶಾದಲ್ಲಿ ಜೀತದಾಳುಗಳ ಬಲಗೈಗಳನ್ನು ಕತ್ತರಿಸಿದ್ದಾರೆ. ಜೀವಿಕ ಹಕ್ಕೊತ್ತಾಯಗಳ ಬಗ್ಗೆ ಅಧಿಕಾರಿ ಹಾಗೂ ಜನಪ್ರತಿನಿಧಿಗಳು ನಿರ್ಲಕ್ಷ ತೋರುತ್ತಿದ್ದಾರೆ. ದೇಶದ ವಿವಿಧ ಭಾಗಗಳಲ್ಲಿ ಜೀತದಾಳುಗಳನ್ನು ಅಮಾನವೀಯವಾಗಿ ಬಳಸಿಕೊಳ್ಳಲಾಗುತ್ತಿದೆ. ಇಂತಹ ಪ್ರಕರಣಗಳನ್ನು ಪ್ರಚೋದಿಸುವ ಹಾಗೂ ನಡೆಸುವ ಬಲಾಢ್ಯರ ಮೇಲೆ ಕ್ರಮ ಕೈಗೊಂಡು ಜೀತ ವಿಮುಕ್ತಿ ಆಗಬೇಕೆಂದು ಆಗ್ರಹಿಸಿದರು.  ನಂತರ ತಾಲೂಕು ದಂಡಾಧಿಕಾರಿ ಕೆ.ಟಿ.ಕೃಷ್ಣಸ್ವಾಮಿ ಗೈರು ಹಾಜರಿ ಹಿನ್ನೆಲೆಯಲ್ಲಿ ಉಪ ತಹಶೀಲ್ದಾರ್ ವಿಠಲ್‌ರಿಗೆ ಮನವಿ ಪತ್ರ ಸಲ್ಲಿಸಿದರು. ಜೀವಿಕ-ಜೀತ ವಿಮುಕ್ತಿ ಕರ್ನಾಟಕ, ಜೀತದಾಳು ಮತ್ತು ಕೃಷಿ ಕಾರ್ಮಿಕರ ಒಕ್ಕೂಟದ ಮುಖಂಡರಾದ ಚಂದ್ರಪ್ಪ, ಶಂಕರ್, ಮುನಿಸ್ವಾಮಿ ಸೇರಿದಂತೆ ಹಲವರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.