'ಸಮಾನತೆಯ ಸಮಾಜ ನಿರ್ಮಾಣಕ್ಕೆ ಶ್ರಮಿಸಿ'
ಚಿಕ್ಕಬಳ್ಳಾಪುರ: ಸಂಘಟನೆಗಳು ಸಮಾನತೆಯ ಸಮಾಜ ನಿರ್ಮಾಣಕ್ಕೆ ಶ್ರಮಿಸಲು ಆದ್ಯತೆ ನೀಡಬೇಕೆಂದು ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಸಲಹೆ ನೀಡಿದರು.
ತಾಲೂಕಿನ ಗಿಡ್ನಹಳ್ಳಿಯಲ್ಲಿ ಒಕ್ಕಲಿಗರ ಯುವ ಸೇನೆ ಶಾಖೆ ಉದ್ಘಾಟನೆ ಮತ್ತು ದಿವಂಗತ ಗೋಪಾಲರೆಡ್ಡಿ ಸ್ಮರಣೆಯ ಪ್ರಯುಕ್ತ ಹೆಬ್ಬಾಗಲಿನ ಉದ್ಘಾಟನೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ, ಸಂಘಟನೆಯಾಗಿದ್ದರ ಉದ್ದೇಶವನ್ನು ಎಂದಿಗೂ ಸಂಘಟನೆಗಳು ಮರೆಯಬಾರದು. ಒಂದು ಜನಾಂಗದ ಸಂಘಟನೆಗಾಗಿ ಸಂಘವನ್ನು ರಚಿಸಿಕೊಂಡಿದ್ದರೂ ಜಾತ್ಯತೀತವಾಗಿ ಎಲ್ಲಾ ವರ್ಗದ ಜನರ ಅಭಿವೃದ್ಧಿಗೆ ಶ್ರಮಿಸಬೇಕು. ಸೋಮಾರಿತನವನ್ನು ಬದಿಗೊತ್ತಿ ಕೆಲಸವನ್ನು ಮಾಡಬೇಕು. ಆಗ ಮಾತ್ರ ಸಂಘಟನೆಗಳು ಅಸ್ತಿತ್ವವನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಸಂಘಟನೆಗಳು ಬೇರೊಂದು ಜನಾಂಗದ ವಿರುದ್ಧ ಹೋರಾಟ ನಡೆಸಲು ರಚನೆಯಾಗುವುದಿಲ್ಲ. ಬದಲಿಗೆ ಸಹೋದರ ಸಮಾಜವನ್ನು ನಿರ್ಮಾಣ ಮಾಡುವ ಗುರಿಯನ್ನು ಹೊಂದಿರುತ್ತದೆ ಎಂದ ಅವರು, ಸಮಾಜದಲ್ಲಿ ಬಡ ಜನರು ಮತ್ತು ಹಿಂದುಳಿದ ವರ್ಗದ ಜನರು ಅನೇಕ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಇವುಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಹೆಚ್ಚಿಗೆ ಹಮ್ಮಿಕೊಳ್ಳಲು ಸಂಘಟನೆಗಳು ಮುಂದಾಗಬೇಕೆಂದು ಸಲಹೆ ನೀಡಿದರು.
ರೈತ ಮುಖಂಡ ಯಲುವಹಳ್ಳಿ ರಮೇಶ್ ಮಾತನಾಡಿ, ಹಿರಿಯರ ಮಾರ್ಗದರ್ಶನವನ್ನು ಪಡೆದು ಸಂಘಟನೆಗಳು ಬಡ ಜನರ ಅಭಿವೃದ್ಧಿಗೆ ಶ್ರಮಿಸಿದಾಗ ಸಾರ್ಥಕತೆ ಬರುತ್ತದೆ ಎಂದರು. ಡಾ.ಕೆ.ಪಿ. ಶ್ರೀನಿವಾಸ ಮೂರ್ತಿ, ತಮ್ಮೇಶ್ ಗೌಡ, ಕಿಶೋರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

