ನವಜಾತ ಶಿಶು ಶವ ಪತ್ತೆ
ಶಿಡ್ಲಘಟ್ಟ: ನವಜಾತ ಶಿಶುವೊಂದನ್ನು ಕುಂಟೆಯಲ್ಲಿ ಬಿಸಾಡಿರುವ ಘಟನೆ ತಾಲೂಕಿನ ದೇವರಮಳ್ಳೂರು ಗ್ರಾಮದಲ್ಲಿ ನಡೆದಿದೆ. ತಾಲೂಕಿನ ದೇವರಮಳ್ಳೂರು ಗ್ರಾಮದ ಹಾಲಿನ ಡೈರಿ ಪಕ್ಕದಲ್ಲೆ ಇರುವ ಕುಂಟೆಯಲ್ಲಿ ಜನಿಸಿ ಮೂರು ದಿನಗಳಾಗಿರುವ ಗಂಡು ನವಜಾತ ಶಿಶುವನ್ನು ಬಿಸಾಡಿದ್ದಾರೆ. ಬೆಳಿಗ್ಗೆ ನೀರಿನಲ್ಲಿ ತೇಲಾಡುತ್ತಿದ್ದ ನವಜಾತ ಶಿಶುವಿನ ಶವ ಕಂಡ ಗ್ರಾಮಸ್ಥರು ಗ್ರಾಮಾಂತರ ಠಾಣೆ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬೇಟಿ ನೀಡಿದ ಗ್ರಾಮಾಂತರ ಠಾಣೆ ಪಿಎಸ್ಐ ಪಿ.ಬಿ. ಹನುಮಂತಪ್ಪ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮೃತ ಮಗುವಿನ ಶವ ಹೊರತೆಗೆದರು. ಹಿಂದೆಯೂ ಇದೇ ರೀತಿ ನವಜಾತ ಶಿಶುವೊಂದನ್ನು ಬಾವಿಯಲ್ಲಿ ಎಸೆಯಲಾಗಿತ್ತು. ಮಗುವಿನ ಚೀರಾಟ ಕಂಡ ಗ್ರಾಮಸ್ಥರು ಮಗುವನ್ನು ರಕ್ಷಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದರು ಎನ್ನಲಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂಜಾಟ; 4ಮಂದಿ ಬಂಧನ
ಚಿಂತಾಮಣಿ: ಅಂದರ್ ಬಾಹರ್ ಜೂಜಿನಲ್ಲಿ ತೊಡಗಿದ್ದ ಗುಂಪಿನ ಮೇಲೆ ಪೊಲೀಸರು ದಾಳಿ ನಡೆಸಿ ಸಾವಿರಾರು ರುಪಾಯಿ ನಗದು ವಶಪಡಿಸಿಕೊಂಡು, 4 ಮಂದಿ ಆರೋಪಿಗಳನ್ನು ಬಂಧಿಸಿರುವ ಘಟನೆ ಬಟ್ಲಹಳ್ಳಿ ಠಾಣೆ ವ್ಯಾಪ್ತಿಯ ಯಗವಕೋಟೆ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಯಗವಕೋಟೆ ಗ್ರಾಮದ ಕೆರೆ ಅಂಗಳದಲ್ಲಿ ಅಂದರ್ ಬಾಹರ್ ಆಡುತ್ತಿದ್ದ ಗುಂಪಿನ ಮೇಲೆ ಪೊಲೀಸರು ದಾಳಿ ನಡೆಸಿದಾಗ ಯಗವಕೋಟೆ ಗ್ರಾಮದ ನರಸಿಂಹ, ರೆಡ್ಡೆಪ್ಪ, ನಾಗರಾಜ್, ವೈ. ಕುರಪಪ್ಪಲ್ಲಿ ಗ್ರಾಮದ ನರಸಿಂಹಪ್ಪರನ್ನು ಬಂಧಿಸಿ 1,650 ರುಪಾಯಿ ನಗದು ವಶಪಡಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಹಗಲಲ್ಲೇ ಮನೆಗಳವು
ಚಿಂತಾಮಣಿ: ಮನೆಯ ಬೀಗ ಹೊಡೆದು ಒಳನುಗ್ಗಿದ ಕಳ್ಳರು ಲಕ್ಷಾಂತರ ರುಪಾಯಿ ಬೆಲೆ ಬಾಳುವ ಬಂಗಾರದ ಒಡವೆ ಮತ್ತು ನಗದು ದೋಚಿ ಪರಾರಿಯಾಗಿರುವ ಘಟನೆ ಬಟ್ಲಹಳ್ಳಿ ಠಾಣೆ ವ್ಯಾಪ್ತಿಯ ಮಾದಮಂಗಲ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಮಾದಮಂಗಲ ಗ್ರಾಮದ ರೈತ ನಾರಾಯಣಪ್ಪ ಕುಟುಂಬ ಶುಕ್ರವಾರ ಮಧ್ಯಾಹ್ನ ತೋಟದ ಕೆಲಸಕ್ಕೆ ಹೋದಾಗ ಹಾಡು ಹಗಲೇ ಘಟನೆ ನಡೆದಿರುವುದಾಗಿ ನಾರಾಯಣಪ್ಪ ಬಟ್ಲಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ಸಬ್ಇನ್ಸ್ಪೆಕ್ಟರ್ ಪ್ರವೀಣ್ಕುಮಾರ್ ಸ್ಥಳ ಪರಿಶೀಲಿಸಿ ಬೆರಳಚ್ಚು ತಜ್ಞರು ಮತ್ತು ಶ್ವಾನದಳವನ್ನು ಕರೆಸಿ ಪರಿಶೀಲಿಸಲಾಯಿತು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

