ಒತ್ತುವರಿ ತೆರವುಗೊಳಿಸಲು ಆಗ್ರಹಿಸಿ ಪ್ರತಿಭಟನೆ
ಕೆಜಿಎಫ್: ನಗರಸಭಾ ವ್ಯಾಪ್ತಿಯ ಸುಭಾಷ್ನಗರ ಬಡಾವಣೆಯಲ್ಲಿ ಉದ್ಯಾನವನಕ್ಕಾಗಿ ಮೀಸಲಿಟ್ಟಿದ್ದ ಜಾಗವನ್ನು ಒತ್ತುವರಿ ಮಾಡಿ, ಕಟ್ಟಡ ನಿರ್ಮಾಣವಾಗುತ್ತಿದ್ದರೂ ನಗರಸಭಾ ಅಧಿಕಾರಿಗಳು ಕ್ರಮ ಕೈಗೊಳ್ಳದಿರುವುದನ್ನು ಖಂಡಿಸಿ ನವಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಿತು.
ರಾಜ್ಯಾಧ್ಯಕ್ಷ ಎಸ್.ಎನ್. ರಾಜಗೋಪಾಲಗೌಡ ನೇತೃತ್ವದಲ್ಲಿ ನಗರಸಭೆ ಕಾರ್ಯಾಲಯ ಮುಂಭಾಗ ಪ್ರತಿಭಟನೆ ನಡೆಸಿ ಮಾತನಾಡಿ, ಮಕ್ಕಳ ಮನೋರಂಜನೆಗಾಗಿ ಉದ್ಯಾನವನ ಸ್ಥಳವನ್ನು ಮೀಸಲಿಟ್ಟಿದ್ದು, ಅಲ್ಲಿ ಆನಂದ್ ಎಂಬವರು 2011ರ ಜೂನ್ ತಿಂಗಳಿನಲ್ಲಿ ಅಕ್ರಮ ಕಟ್ಟಡ ನಿರ್ಮಿಸಲು ಮುಂದಾದಾಗ ನಾಗರಿಕರು ನಗಾರಾಭಿವೃದ್ಧಿ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಪ್ರಾಧಿಕಾರದ ಆಯುಕ್ತರು ಪರವಾನಗಿ ರದ್ದುಗೊಳಿಸಲು ಸೂಚಿಸಿದ್ದಾರೆ.
ಆದರೆ ನಕಲಿ ಪರವಾನಗಿಯನ್ನು ನಗರಸಭೆ ಅಧಿಕಾರಿಗಳು ರದ್ದುಪಡಿಸದೆ ನಿರ್ಲಕ್ಷಿಸಿದ್ದ ಕಾರಣ ಕೆಜಿಎಫ್ ಸಿವಿಲ್ ನ್ಯಾಯಾಲಯದಲ್ಲಿ ಖಾಯಂ ಇಂಜಂಕ್ಷನ್ ಆದೇಶ ಕೋರಿ ದಾವೆ ಹೂಡಿದ್ದು ನಗರಸಭೆ ನ್ಯಾಯಾಲಯದಲ್ಲಿ ದಾಖಲೆಗಳನ್ನು ಹಾಜರು ಪಡಿಸದೆ ಮತ್ತು ವಿಚಾರಣೆಗೆ ಹಾಜರಾಗದೆ ಇದ್ದ ಕಾರಣ ನ್ಯಾಯಾಲಯ ಆನಂದ್ ಪರ ಆದೇಶ ನೀಡಿರುತ್ತದೆ.
ಇಷ್ಟಾದರೂ ನಗರಸಭಾ ಆಯುಕ್ತರಾಗಲೀ ಅಥವಾ ನಗರಾಭಿವೃದ್ಧಿ ಪ್ರಾಧಿಕಾರಿದ ಅಧಿಕಾರಿಗಳಾಗಲೀ ಈ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಮುಂದಾಗದೆ ಸಾರ್ವಜನಿಕರ ಆಸ್ತಿಯನ್ನು ರಕ್ಷಿಸಲು ವಿಫಲರಾಗಿದ್ದಾರೆ ಎಂದು ಆರೋಪಿಸಿದರು. ಉದ್ಯಾನವನ ಸ್ಥಳದಲ್ಲಿ ಆನಂದ್ ನಿರ್ಮಿಸುತ್ತಿರುವ ಅಕ್ರಮ ಕಟ್ಟಡ ಖಾತೆ ರದ್ದುಗೊಳಿಸಿ ಸರ್ಕಾರದ ಆಸ್ತಿಯನ್ನು ಕಾಪಾಡಲು ಮುಂದಾಗಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಚಿನ್ನಿವೆಂಕಟೇಶ್, ಹುದುಕುಳ ದೇವರಾಜ್, ಸೋಮನಾಥ್, ರಾಜ, ವಿಜಯ್.ಟಿ.ಪಿ., ಮುನಿಸ್ವಾಮಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

