ಕೋಲಾರ

6 ತಿಂಗಳಿಗೊಮ್ಮೆ ಗ್ರಾಮಗಳಿಗೆ ಭೇಟಿ: ಶಾಸಕರ ಭರವಸೆ

Published On :

ಬಂಗಾರಪೇಟೆ: ಚುನಾವಣೆ ಸಮಯದಲ್ಲಿ ಮತದಾರರಿಗೆ ನೀಡಿದ್ದ ಭರವಸೆಯಂತೆ ಪ್ರತಿ ಆರು ತಿಂಗಳಿಗೊಮ್ಮೆ ಗ್ರಾಮಗಳಿಗೆ ಭೇಟಿ ನೀಡಿ ಸಮಸ್ಯೆ ಆಲಿಸುವುದಾಗಿ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಹೇಳಿದರು. ತಾಲೂಕಿನ ಕಾಮಸಮುದ್ರ ಪಂಚಾಯ್ತಿಯ ಗ್ರಾಮಗಳ ಕುಂದು ಕೊರತೆಗಳನ್ನು ಆಲಿಸಿದರು. ಈ ವೇಳೆ ಗ್ರಾಮಸ್ಥರು ಹಲವಾರು ಸಮಸ್ಯೆಗಳನ್ನು ಶಾಸಕರ ಬಳಿ ಹೇಳಿ ಕೊಂಡರು. ತಾರತಮ್ಯ ಹೋಗಲಾಡಿಸಲು ತಮ್ಮ ಅವಧಿಯಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಅಧಿಕಾರಿಗಳು ಬರೀ ಸಂಬಳಕ್ಕಾಗಿ ಕೆಲಸ ಮಾಡದೆ ಮಾನವೀಯತೆ ಮೈಗೂಡಿಸಿಕೊಳ್ಳಬೇಕು ಹಾಗೂ ರೈತರು ಹಾಗೂ ಸಾರ್ವಜನಿಕರು ತಮ್ಮ ಕೆಲಸಗಳಿಗೆ ಕಚೇರಿಗಳಿಗೆ ಬಂದಾಗ ಅವರೊಂದಿಗೆ ಸೌಜನ್ಯವಾಗಿ ವರ್ತಿಸಿ ತ್ವರಿತವಾಗಿ ಮಾಡಿಕೊಡಬೇಕು ಎಂದು ಹೇಳಿದರು.  ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್, ಕೆ. ಚಂದ್ರಾರೆಡ್ಡಿ, ಪಿಚ್ಚಹಳ್ಳಿ ಗೋವಿಂದರಾಜು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.