ರೈತ ಸಂಘದ ಹೆಸರಲ್ಲಿ ರಾಮೇಗೌಡ ಮೋಸ: ಆರೋಪ
ಬಂಗಾರಪೇಟೆ: ರೈತ ಸಂಘದ ಹೆಸರಲ್ಲಿ ವರ್ತಕರನ್ನು ಹಾಗೂ ಸಾರ್ವಜನಿಕರನ್ನು ವಂಚಿಸಿ ಹಣ ಸುಲಿಗೆ ಮಾಡುತ್ತಿರುವ ಸಂಘದ ಅಧ್ಯಕ್ಷ ರಾಮೇಗೌಡರನ್ನು ಕೂಡಲೆ ಬಂಧಿಸಿ ಕಾನೂನು ಕ್ರಮ ಕೈಗೊಳ್ಳೂಬೇಕೆಂದು ಆಗ್ರಹಿಸಿ ವರ್ತಕರು ವಹಿವಾಟು ಸ್ಥಗಿತಗೊಳಿಸಿ ಮುಷ್ಕರ ನಡೆಸಿದರು.
ಕಳೆದ ಕೆಲ ತಿಂಗಳಿಂದ ರೈತ ಸಂಘದ ಸ್ವಯಂ ಘೋಷಿತ ಅಧ್ಯಕ್ಷನೆಂದು ಹೇಳಿಕೊಂಡು ಜನರನ್ನು ವಂಚಿಸುತ್ತಾ ಮತ್ತೊಂದು ಕಡೆ ಸಂಘದ ಹೆಸರನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ವ್ಯಾಪಾರಿಗಳನ್ನು ಬೆದರಿಸಿಕೊಂಡು ಅವರಿಂದ ಹಣ ಪಡೆಯುತ್ತಿದ್ದಾನೆ. ಅಲ್ಲದೆ ಆತ ರೈತನೇ ಅಲ್ಲ. ಇದರಿಂದ ಅನೇಕ ವ್ಯಾಪಾರಿಗಳು ಕಿರುಕುಳಕ್ಕೆ ಸಿಲುಕಿ ಪಟ್ಟಣವನ್ನೇ ಬಿಟ್ಟಿದ್ದಾರೆ, ಇನ್ನು ಕೆಲವರು ಊರು ಬಿಡುವ ತವಕದಲ್ಲಿದ್ದಾರೆ ಎಂದು ತಿಳಿಸಿದರು.
ಈ ಹಿನ್ನೆಲೆಯಲ್ಲಿ ರಾಮೇಗೌಡರನ್ನು ಬಂಧಿಸಿ ಅವನನ್ನು ತಾಲೂಕಿನಿಂದ ಗಡಿಪಾರು ಮಾಡಬೇಕು. ಇಲ್ಲದಿದ್ದರೆ ನಾವು ಮುಕ್ತವಾಗಿ ವ್ಯಾಪಾರ ಮಾಡಲು ಆಗುವುದಿಲ್ಲ ಎಂದು ಹೇಳಿ ಪಟ್ಟಣದ ಕುವೆಂಪು ವೃತ್ತದಿಂದ ವರ್ತಕರು ಮೆರವಣಿಗೆ ಮೂಲಕ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ರಾಮೇಗೌಡ ವಿರುದ್ದ ಘೋಷಣೆಗಳನ್ನು ಕೂಗಿ ನಂತರ ತಹಸೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಿದರು. ವರ್ತಕರ ಸಂಘದ ಅಧ್ಯಕ್ಷ ಗಿರೀಶ್‌ಕುಮಾರ್ ಮಾತನಾಡಿ, ತಾಲೂಕು ಆಡಳಿತ ಕೂಡಲೆ ರಾಮೇಗೌಡರಂತಹ ನಕಲಿ ನಾಯಕರಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು. ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳು ಚಿತ್ರಮಂದಿರಗಳು ಎಂದಿನಂತೆ ಕಾರ್ಯನಿರ್ವಹಿಸಿದವು, ಅಂಗಡಿಗಳು ಮಾತ್ರ ಸಂಪೂರ್ಣ ಬಂದ್ ಆಗಿದ್ದವು.
ರಾಮೇಗೌಡ ಮಾಡಿರುವ ಕೆಲಸ ಸರಿಯಿಲ್ಲ ಸಂಬಂಧಪಟ್ಟ ಇಲಾಖೆಗೆ ದೂರು ನೀಡಿದ್ದರೆ ಅವರು ಕ್ರಮಕೈಗೊಳ್ಳುತ್ತಿದ್ದರು. ಮೊದಲು ದೂರು ನೀಡಿ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

