ಒಗ್ಗಟ್ಟಿನಿಂದ ಚುನಾವಣೆ ಎದುರಿಸಲು ತೀರ್ಮಾನ
ಕೋಲಾರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಯಾವುದೇ ಅಭ್ಯರ್ಥಿ ಕಣಕ್ಕಿಳಿದರೂ ಅವರನ್ನು ಗೆಲ್ಲಿಸಲು ಒಟ್ಟುಗೂಡಿ ಶ್ರಮಿಸುವುದಾಗಿ ಜಿಲ್ಲಾ ಎಸ್ಸಿ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ನಗರದ ಬಿಜೆಪಿ ಕಾರ್ಯಾಲಯದಲ್ಲಿ ಭಾನುವಾರ ನಡೆದ ಜಿಲ್ಲಾ ಎಸ್ಸಿ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ರಾಮಸಂದ್ರ ನಾಗರಾಜ್ ಮುಂದಿನ ದಿನಗಳಲ್ಲಿ ಪಕ್ಷ ಸಂಘಟಿತವಾಗಿ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಗೆಲ್ಲಿಸಬೇಕು. ಈ ಹಂತದಲ್ಲಿ ಪಕ್ಷ ತೆಗೆದುಕೊಳ್ಳುವ ತೀರ್ಮಾನಗಳಿಗೆ ಬದ್ಧರಾಗಿ ಮೋರ್ಚಾ ನಡೆಯಲಿದೆ ಎಂದರು.
ಜಿಲ್ಲಾ ಎಸ್ಸಿ ಮೋರ್ಚಾ ಉಸ್ತುವಾರಿ ನಾರಾಯಣಸ್ವಾಮಿ ಮಾತನಾಡಿ, ಜನವರಿ 25ರಂದು ಜಿಲ್ಲೆಯಲ್ಲಿ ಎಸ್ಸಿ ಮೋರ್ಚಾದ ಬೃಹತ್ ಸಭೆಯನ್ನು ಕರೆಯಲಾಗಿದ್ದು, ಪಕ್ಷದ ಸಂಘಟನೆ ಹಾಗೂ ಪಕ್ಷದ ಮುಂದಿನ ನಡಾವಳಿಗಳನ್ನು ತೀರ್ಮಾನಿಸಲಾಗುವುದು ಎಂದರು. ಮೋರ್ಚಾದ ಎಲ್ಲಾ ಮುಖಂಡರು ತಾಲೂಕುವಾರು ಸಂಘಟಿತರಾಗಿ ಹೋರಾಟ ನಡೆಸಿ ಪಕ್ಷವನ್ನು ಬಲಪಡಿಸಲು ಮುಂದಾಗಬೇಕು ಎಂದು ಹೇಳಿದರು.
ಸಭೆಯಲ್ಲಿ ಎಸ್ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರಳಿ, ಶಂಕರಪ್ಪ, ಜಿಲ್ಲಾ ಕೋಶಾಧ್ಯಕ್ಷ ವೆಂಕಟರಾಯಪ್ಪ, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಘಟಕದ ಮಮತ, ಬಂಗಾರಪೇಟೆ ತಾಲೂಕು ಅಧ್ಯಕ್ಷ ತಿಮ್ಮರಾಯಪ್ಪ, ಮುಳಬಾಗಿಲು ಅಂಬರೀಶ್, ಶ್ರೀನಿವಾಸಪುರ ಶ್ರೀನಾಥ ಬಾಬು, ಮಾಲೂರು ವೆಂಕಟೇಶ್, ಕೋಲಾರ ನಗರ ಘಟಕದ ಅಧ್ಯಕ್ಷ ರಾಜಕುಮಾರ್, ಮುರುಘೇಶ್, ಅಣ್ಣಮಲೈ, ಮುದವಾಡಿ ಶ್ರೀನಿವಾಸ್, ಪಾಂಡು, ವೆಂಟಕಸ್ವಾಮಿ, ಚಂದ್ರಶೇಖರ್, ಹೋಳೂರು ನಾರಾಯಣಸ್ವಾಮಿ, ಬಾಲಕೃಷ್ಣ ಮೊದಲಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

