ಸಂಸತ್ ಚುನಾವಣೆ: ವೀರಪ್ಪಮೊಯ್ಲಿಗೆಬಹುಮತದ ಗೆಲವು
ಗುಡಿಬಂಡೆ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವ ಎಂ. ವೀರಪ್ಪ ಮೊಯ್ಲಿ ಹೆಚ್ಚಿನ ಬಹುಮತದೊಂದಿಗೆ ಗೆಲವನ್ನು ಸಾಧಿಸಲಿದ್ದಾರೆ ಎಂದು ಜಿ.ಪಂ. ಸದಸ್ಯ ಎಂ.ವಿ. ಕೃಷ್ಣಪ್ಪ ಭವಿಷ್ಯ ನುಡಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಕೇಂದ್ರ ಸಚಿವ ಎಂ.ವಿರಪ್ಪ ಮೊಯ್ಲಿ ಹೆಚ್ಚಿನ ಅನುದಾನ ದೊರಕಿಸಿಕೊಟ್ಟಿದ್ದು ಹಲವಾರು ಅಭಿವಣದ್ದಿ ಕೆಲಸಗಳನ್ನು ಮಾಡಿದ್ದಾರೆ. ಪಕ್ಷದ ಯುವ ನಾಯಕ ರಾಹುಲ್ ಗಾಂಧಿ ಮತ್ತು ಅಧ್ಯಕ್ಷೆ ಸೋನಿಯಾ ಗಾಂಧಿ ನೇತಣತ್ವದಲ್ಲಿ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿಯೇ ಹೆಚ್ಚು ಸ್ಥಾನಗಳನ್ನು ಗಳಿಸಲಿದೆ ಎಂದರು.
ಮೊಯ್ಲಿಯವರು ಕ್ಷೇತ್ರದಲ್ಲಿ ಮಾಡಿರುವ ರಸ್ತೆಯ ಅಭಿವೃದ್ಧಿ, ಕೆರೆಗಳ ಪುನರುಜ್ಜಿವನ, ಶಾಲೆಗಳಿಗೆ ಕುಡಿಯುವ ನೀರಿನ ಪೂರೈಕೆ, ಹೈಟೆಕ್ ಶೌಚಾಲಯಗಳ ನಿರ್ಮಾಣ ಮುಂತಾದ ಕಾರ್ಯಗಳು ಅವರಿಗೆ ಶ್ರಿರಕ್ಷೆಯಾಗಲಿವೆ. ಕ್ಷೇತ್ರದಲ್ಲಿ ಪಕ್ಷಕ್ಕೆ ನಿಷ್ಠಾವಂತ ಕಾರ್ಯಕರ್ತರ ದೊಡ್ಡ ಪಡೆ ಇದ್ದು ಇವರ ಬೆಂಬಲದಿಂದ ಚುನಾವಣೆಯಲ್ಲಿ ಬಹುಮತಗಳಿಸುವ ವಿಶ್ವಾಸವಿದೆ ಎಂದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ನರಸಿಂಹಮೂರ್ತಿ, ಸುಬ್ಬಾರಾಯಪ್ಪ, ಕೆ.ಎ. ನಾರಾಯಣಸ್ವಾಮಿ, ಎಂ ಶ್ರೀನಿವಾಸಮೂರ್ತಿ, ವಿ. ಶ್ರೀನಿವಾಸ್, ಆದಿನಾರಾಯಣಪ್ಪ ಹಲವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

