ಕೋಲಾರ

ಅತ್ತಿಗಿರಿಕೊಪ್ಪದ ಕೆರೆಯಲ್ಲಿ 20 ಕೊಳವೆಬಾವಿ

Published On :

ಬಂಗಾರಪೇಟೆ: ಪಟ್ಟಣದಲ್ಲಿ ತಲೆದೋರಿರುವ ಕುಡಿಯುವ ನೀರಿನ ಬವಣೆ ನೀಗಿಸಲು ಮುಂದಿನ ವಾರ ಪಟ್ಟಣಕ್ಕೆ ಅಂಟಿಕೊಂಡಿರುವ ಅತ್ತಿಗಿರಿಕೊಪ್ಪದ ಕೆರೆಯಲ್ಲಿ 20 ಕೊಳವೆಬಾವಿಗಳನ್ನು ಕೊರೆಸಿ ನೀರಿನ ಸಮಸ್ಯೆ ನೀಗಿಸುವುದಾಗಿ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಹೇಳಿದರು.
ಬರಗಾಲದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು ಅದನ್ನು ನಿಯಂತ್ರಿಸಲು ಕ್ರಮವಹಿಸಲಾಗಿದ್ದರೂ ನೀಗುತ್ತಿಲ್ಲ ಈಗಲೇ ಪರಿಸ್ಥಿತಿ ಹೀಗಾದರೆ ಬೇಸಿಗೆಯಲ್ಲಿ ಸಮಸ್ಯೆ ಮತ್ತಷ್ಟು ಗಂಭೀರವಾಗಲಿದ್ದು ಈ ಹಿನ್ನೆಲೆಯಲ್ಲಿ 2ಕೋಟಿ ವೆಚ್ಚದಲ್ಲಿ ಅತ್ತಿಗಿರಿಕೊಪ್ಪದಲ್ಲಿ 20 ಕೊಳವೆಬಾವಿಗಳನ್ನು ಕೊರೆಸಿ ಅಲ್ಲಿ ಸಿಗುವ ನೀರನ್ನು ಕೆರೆ ಅಂಗಳದಲ್ಲೇ ಬೃಹತ್ ಸಂಪ್ ನಿರ್ಮಾಣ ಮಾಡಿ ಅದರಲ್ಲಿ ತುಂಬಿ ನಂತರ ನಾಗರೀಕರಿಗೆ ವಾರಕ್ಕೊಮ್ಮೆ ಕುಡಿಯುವ ನೀರನ್ನು ಪೂರೈಸಲು ಈಗಾಗಲೇ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಲಾಗಿದ್ದು ಅವರೂ ಒಪ್ಪಿದ್ದು ಮುಂದಿನ ವಾರ ಬೊರೆ ಕೊರೆಸುವ ಸ್ಥಳವನ್ನು  ಬೆಸ್ಕಾಂ ಮತ್ತು ನಗರ ನೀರು ಸರಬರಾಜು ಇಲಾಖೆ ಅಧಿಕಾರಿಗಳೊಂದಿಗೆ ಪರಿಶೀಲನೆ ಮಾಡಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಗ್ರಾಮೀಣಾಭಿವೃದ್ಧಿಗೆ ಹಾಗೂ ಬರಪೀಡಿತ ಕ್ಷೇತ್ರಗಳಲ್ಲಿ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಮುಂದಾಗಿದೆ ಅದರಂತೆ ಕ್ಷೇತ್ರ ಸಹ ಬರಪೀಡಿತ ವ್ಯಾಪ್ತಿಗೆ ಒಳಪಟ್ಟಿದ್ದು ಹೆಚ್ಚಿನ ಅನುದಾನ ನೀಡಿ ಕ್ಷೇತ್ರದ ಕೂಲಿ ಕಾರ್ಮಿಕರು ವಲಸೆ ಹೋಗದಂತೆ ತಡೆಯಲು ಬರ ಕಾಮಗಾರಿಗಳನ್ನು ಕೈಗೊಳ್ಳಲು ಸೂಚಿಸಿದೆ. ಉದ್ಯೋಗ ಖಾತರಿ ಯೋಜನೆಯಲ್ಲಿ ಪಂಚಾಯ್ತಿಗಳಲ್ಲಿ ಹೆಚ್ಚಿನ ಕಾಮಗಾರಿಗಳನ್ನು ಕೈಗೊಳ್ಳಲು ಈಗಾಗಲೇ ಪಿಡಿಒಗಳಿಗೆ ಕ್ರಿಯಾಯೋಜನೆ ಸಿದ್ಧಪಡಿಸಲು ಸೂಚಿಸಲಾಗಿದೆ ಎಂದು ತಿಳಿಸಿ ಬರವನ್ನು ಸಮರ್ಪಕವಾಗಿ ಎದುರಿಸಲು ಸರ್ಕಾರ ಸರ್ವ ರೀತಿಯಲ್ಲಿಯೂ ಸಿದ್ಧವಾಗಿದೆ, ವಿರೋಧ ಪಕ್ಷಗಳು ವಿನಾಕಾರಣ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಅದನ್ನು ಜನರು ನಂಬಬಾರದು ಎಂದು ಹೇಳಿದರು.
ನಗರ ನೀರು ಸರಬರಾಜು ಇಲಾಖೆ ಎಇಇ ರಘುನಾಥಶೆಟ್ಟಿ, ಪುರಸಭೆ ಸದಸ್ಯರಾದ ಕೆ. ಚಂದ್ರಾರೆಡ್ಡಿ, ಶಫಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್, ಬೆಸ್ಕಾಂ ಸಹಾಯಕ ಎಂಜಿನಿಯರ್ ಹುಸೇನಿ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.