ಕೋಲಾರ

ಕೊಳಚೆ ಪ್ರದೇಶಗಳಿಗೆ ಶಾಸಕಿ ರಾಮಕ್ಕ ಭೇಟಿ

Published On :

ಕೆಜಿಎಫ್: ಕ್ಷೇತ್ರದಲ್ಲಿ ಕೊಳಚೆ ಪ್ರದೇಶದಲ್ಲಿ ಶಿಥಿಲಗೊಂಡ ಮನೆಗಳನ್ನು ತೆರವುಗೊಳಿಸಿ ಬೆಂಗಳೂರಿನಲ್ಲಿ ನಿರ್ಮಾಣವಾದ ಮಾದರಿಯಲ್ಲಿ ಕೆಜಿಎಫ್ ನಗರದ ಸಂಜಯಗಾಂಧಿನಗರ ಸೇರಿದಂತೆ ಇತರೆ ಕೊಳಚೆ ಪ್ರದೇಶಗಳಲ್ಲಿ ಮನೆ ನಿರ್ಮಾಣವಾಗಲಿದೆ ಎಂದು ಶಾಸಕಿ ವೈ. ರಾಮಕ್ಕ ತಿಳಿಸಿದರು.
ಕೊಳಚೆ ನಿರ್ಮೂಲನಾ ಮಂಡಳಿ ಅಧಿಕಾರಿ ಮಹದೇವಯ್ಯ ನೇತೃತ್ವದಲ್ಲಿ ನಗರದ ಕೊಳಚೆ ಪ್ರದೇಶಗಳಿಗೆ ಭೇಟಿ ನೀಡಿ ಮಾತನಾಡಿದ ಅವರು, ಕೆಜಿಎಫ್ ನಗರ ಭಾಗದಲ್ಲಿ ಹಲವು ವರ್ಷಗಳಿಂದ ಮೂಲ ಸೌಕರ್ಯ ನೀಡಿಲ್ಲ. ಕೊಳಚೆ ಪ್ರದೇಶದಲ್ಲಿ ವಾಸಿಸುತ್ತಿರುವವರಿಗೆ ಹಕ್ಕು ಪತ್ರಗಳನ್ನು ಸಹ ನೀಡಿರುವುದಿಲ್ಲ. ಕಳೆದ ಬಾರಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆಜಿಎಫ್ ನಗರದ 12ಕ್ಕೂ ಹೆಚ್ಚು ಪ್ರದೇಶದಲ್ಲಿ ಮನೆಗಳ ನಿರ್ಮಾಣದ ಸರ್ವೆ ಕಾರ್ಯ ಆರಂಭವಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ನಂತರ ಸರ್ಕಾರ ಮೊದಲ ಹಂತದಲ್ಲಿ 3.5 ಲಕ್ಷ ವೆಚ್ಚದಲ್ಲಿ ಮನೆಗಳ ನಿರ್ಮಾಣಕ್ಕೆ 35 ಕೋಟಿ ಕಾಮಗಾರಿಗೆ ಡಿಪಿಎಆರ್ ಅನುಮೋದನೆ ನೀಡಲಾಗುವುದು ಎಂದು ತಿಳಿಸಿದರು.
ಈ ವೇಳೆ ಮಾಜಿ ಶಾಸಕ ವೈ. ಸಂಪಂಗಿ, ಬಿಜೆಪಿ ಮುಖಂಡರಾದ ಮುನಿಸ್ವಾಮಿರೆಡ್ಡಿ, ವೆಂಕಟರೆಡ್ಡಿ, ನಗರಸಭಾ ಸದಸ್ಯ ಗಾಂಧಿ ಸೇರಿದಂತೆ ಕೊಳಚೆ ಪ್ರದೇಶದ ಮುಖಂಡರುಗಳು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.