ಕೋಲಾರ

ಫಲಾನುಭವಿಗಳ ಅಲೆದಾಟ ತಪ್ಪಿಸಿ; ನಾರಾಯಣರೆಡ್ಡಿ

Published On :

ಕೆಜಿಎಫ್: ಸರ್ಕಾರದ ಯೋಜನೆಗಳಡಿ ಮಾಸಾಶನ, ವೃದ್ಧಾಪ್ಯ ವೇತನ, ಅಂಗವಿಕಲ ವೇತನ ಸೇರಿದಂತೆ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಅಲೆದಾಟ ತಪ್ಪಿಸಿ ಸೌಲತ್ತುಗಳನ್ನು ತಲುಪಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಆರ್. ನಾರಾಯಣರೆಡ್ಡಿ ತಿಳಿಸಿದರು.
ನಗರದ ವಾರ್ಡ್ 15 ಮತ್ತು 35 ವಾರ್ಡ್‌ಗಳ ನಿವಾಸಿಗಳಿಗೆ ಏರ್ಪಡಿಸಿದ್ದ ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಮಾಶಾಸನ ಅರ್ಜಿಗಳನ್ನು ವಿತರಿಸಿ ಅವರು ಮಾತನಾಡಿದರು.
ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಲವು ಅರ್ಜಿಗಳು ತಿರಸ್ಕಾರವಾಗಿ ಬಡವರು, ವೃದ್ಧರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಕೇಂದ್ರ ಸಚಿವ ಕೆ.ಹೆಚ್. ಮುನಿಯಪ್ಪ ಅವರ ನೇತೃತ್ವದಲ್ಲಿ ಕ್ಷೇತ್ರದಲ್ಲಿ ಬಡವರಿಗೆ ಹೆಚ್ಚು ಅನುಕೂಲವಾಗಲು ಇಂತಹ ಕಾರ್ಯಕ್ರಮಗಳ ಯೋಜನೆಗಳನ್ನು ರೂಪಿಸಲು  ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ವಾರ್ಡ್ ಸಂಖ್ಯೆ 11 ಮತ್ತು 35ನೇ ವಾರ್ಡ್‌ಗಳ ಪಂಚಾಯಿತಿ  ಮುಖಂಡರಾದ ಡಾ. ರಾಮು, ಎಡ್ವರ್ಡ್, ರಾಜನ್, ರವಿಂದ್ರಬೇಸ್, ಕದಿರ್‌ಕಣ್ಣನ್, ಚಿನ್ನರಾಜ್, ಜಯಸೀಲನ್, ಶಿವ, ಪಾಪಯ್ಯ, ತಿರುಕುಮಾರ್, ಕೇಶವನ್, ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.