ಕೋಲಾರ

ಗಂಗಾ ಕಲ್ಯಾಣ ಯೋಜನೆಗೆ ಚಾಲನೆ

Published On :

ಕೆಜಿಎಫ್: ಕಳೆದ ಹಲವಾರು ವರ್ಷಗಳಿಂದ ಕ್ಷೇತ್ರದಲ್ಲಿ ಮಳೆ ಇಲ್ಲದೆ ಗ್ರಾಮೀಣ ಪ್ರದೇಶದ ರೈತರು ಮತ್ತು ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕಿದ್ದು, ಗಂಗಾ ಕಲ್ಯಾಣ ಯೋಜನೆಯಡಿ 1.5 ಕೋಟಿ ವೆಚ್ಚದಲ್ಲಿ ಕೊಳವೆಬಾವಿ ಕೊರೆಸಿರುವುದು ಹೆಚ್ಚಿನ ಅನುಕೂಲವಾಗಲಿದೆ ಎಂದು ಶಾಸಕಿ ವೈ. ರಾಮಕ್ಕ ತಿಳಿಸಿದರು.
ಗಂಗಾಂಡ್ಲಹಳ್ಳಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ಯೋಜನೆಯಡಿ ಉಚಿತ ಕೊಳವೆಬಾವಿ ಕೊರೆಸುವ ಯೋಜನೆಗೆ ಚಾಲನೆ ನೀಡಿ ಮಾತನಾಡಿ, ಅದೇ ರೀತಿ ಕೆಜಿಎಫ್ ಕ್ಷೇತ್ರದ ಗ್ರಾಮೀಣ ಹಾಗೂ ನಗರ ಭಾಗದಲ್ಲಿ ಬಡ ಹಾಗೂ ಪರಿಶಿಷ್ಟ ವರ್ಗಕ್ಕೆ ಸೇರಿದ ಹಲವು ಸಣ್ಣ ಮತ್ತು ಅತಿ ಸಣ್ಣ ರೈತರು ಸೂಕ್ತ ನೀರಾವರಿ ವ್ಯವಸ್ಥೆ ಮತ್ತು ಮಳೆ ಇಲ್ಲದ ಕಾರಣ ಕೃಷಿ ಚಟುವಟಿಕೆಗಳಿಗೆ ವ್ಯಾಪಕ ತೊಂದರೆಯಾಗಿದೆ.  ನೆರವಾಗಲು 105 ಕೊಳವೆಬಾವಿ ಹಾಗೂ ಸಂಪ್‌ಸೆಟ್ ಅಳವಡಿಕೆ ಹೆಚ್ಚು ಉಪಯುಕ್ತವಾಗಲಿದೆ ಎಂದರು.
ಈ ವೇಳೆ ಮಾಜಿ ಶಾಸಕ ವೈ. ಸಂಪಂಗಿ, ಬಿಜೆಪಿ ಮುಖಂಡರಾದ ಮುನಿಸ್ವಾಮಿರೆಡ್ಡಿ, ಬಿಲ್ಲೇರಹಳ್ಳಿ ವೆಂಕಟರೆಡ್ಡಿ, ಸುಮಾನಾಗರಾಜ್, ಕಂಟಪ್ಪ, ಅಮರನಾರಾಯಣರೆಡ್ಡಿ, ಗಂಗಪ್ಪ, ರಾಮಚಂದ್ರರೆಡ್ಡಿ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ತಾಲೂಕು ಅಧಿಕಾರಿ ರಾಮಕೃಷ್ಣ, ಗುತ್ತಿಗೆದಾರ ಸವಜ್ಞಗೌಡ ಹಾಗೂ ಗ್ರಾಮಸ್ಥರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.