ಕೋಲಾರ

ನಿಗದಿತ ಸಮಯದಲ್ಲಿ ಸಾಲ ಹಿಂತಿರುಗಿಸಿ; ಮುನಿಯಪ್ಪ

Published On :

ಕ.ಪ್ರ. ವಾರ್ತೆ  ಶಿಡ್ಲಘಟ್ಟ  ಜ. 6
ರಾಷ್ಟ್ರೀಕೃತ ಬ್ಯಾಂಕುಗಳ ಮುಖಾಂತರ ನೀಡುತ್ತಿರುವ ಸಾಲ ಸೌಲಭ್ಯಗಳನ್ನು ನಿಗದಿತ ಸಮಯದಲ್ಲಿ ಮರುಪಾವತಿ ಮಾಡಿ, ಸೌಲಭ್ಯವನ್ನು ಸದುಪಯೋ ಪಡಿಸಿಕೊಳ್ಳುಂಡು ನಿರುದ್ಯೋಗಿಗಳು ಸ್ವಯಂ ಉದ್ಯೋಗ ಕೈಗೊಳ್ಳವಂತೆ ಕೇಂದ್ರ  ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು.
ಪಟ್ಟಣದ ಪದವಿಪೂರ್ವ ಕಾಲೇಜು ಆವರಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಕೆನರಾ ಸಾಲ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಪ್ರತಿಯೊಬ್ಬ ನಾಗರಿಕರು ಬ್ಯಾಂಕುಗಳ ಮುಖಾಂತರ ಆಧಾರ ರಹಿತ ಸಾಲವನ್ನು ಪಡೆದುಕೊಂಡು ಸ್ವಾವಲಂಬಿ ಬದುಕು ಸಾಗಿಸುವಂತೆ ಹೇಳಿದರು. ಇದಕ್ಕೆ ಸಹಕರಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ. ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗಾಗಿ ನರೇಗಾ ಯೋಜನೆಯ ಮುಖಾಂತರ ಪ್ರತಿಯೊಂದು ಗ್ರಾಮ ಪಂಚಾಯ್ತಿಗೆ ವಾರ್ಷಿಕ ಕೋಟಿ ರುಪಾಯಿ ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಅದನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವಲ್ಲಿ ಪಂಚಾಯ್ತಿಗಳು ವಿಫಲವಾಗುತ್ತಿವೆ. ಕೇಂದ್ರ ಸರ್ಕಾರದ ಗುರಿಯಂತೆ ಅಭಿವೃದ್ಧಿಯಾಗುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.  ಮಹಿಳಾ ಸ್ವಸಹಾಯ ಸಂಘಗಳು, ಆಟೋ ರಿಕ್ಷಾಗಳ ಚಾಲಕರು, ರೈತರು ಸೇರಿದಂತೆ ಸುಮಾರು 814 ಮಂದಿಗೆ 8 ಕೋಟಿ ಸಾಲದ ಮಂಜೂರಾತಿ ಪತ್ರಗಳನ್ನು ವಿತರಣೆ ಮಾಡಲಾಯಿತು. ಮಾಜಿ ಸಚಿವ ವಿ. ಮುನಿಯಪ್ಪ ಮಾತನಾಡಿ, ಇಂದಿರಾ ಗಾಂಧಿಯವರು ಬ್ಯಾಂಕ್‌ಗಳನ್ನು ರಾಷ್ಟ್ರೀಕರಣಗೊಳಿಸಿದರಿಂದ ಬ್ಯಾಂಕ್‌ಗಳಿಂದ ಸಾಲ ನೀತಿಯನ್ನು ಸರಳಗೊಳಿಸಲಾಗಿದೆ. ಪಟ್ಟಣದಲ್ಲಿ ಶೇ.75 ಮಂದಿ ರೇಷ್ಮೆ ಉದ್ದಿಮೆಯನ್ನೇ ಮುಖ್ಯ ಕಸುಬಾಗಿ ಮಾಡಿಕೊಂಡು ಜೀವನ ನಡೆಸುತ್ತಿದ್ದು, ಕಷ್ಟದಲ್ಲಿರುವರರು ಸೌಲಭ್ಯವನ್ನು ಬಳಸಿಕೊಳ್ಳುವಂತೆ ಸಲಹೆ ನೀಡಿದರು. ಶಾಸಕ ಎಂ. ರಾಜಣ್ಣ, ಕೆನರಾ ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಸಂಪತ್‌ಕುಮಾರ್, ಕೋಚಿಮುಲ್ ಅಧ್ಯಕ್ಷ ಕೆ. ಗುಡಿಯಪ್ಪ, ಜಿ.ಪಂ. ಸದಸ್ಯರಾದ ಎಸ್.ಎಂ.ನಾರಾಯಣಸ್ವಾಮಿ, ಕಂಬದಹಳ್ಳಿ ಸತೀಶ್, ತಾಪಂ ಅಧ್ಯಕ್ಷ ಯರಬಚ್ಚಪ್ಪ, ಜಿಪಂ ಮಾಜಿ ಸದಸ್ಯೆ ಕಮಲಮ್ಮ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎ. ರಾಮಚಂದ್ರಪ್ಪ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ದೇವರಾಜಗೌಡ, ಸುಂದರೇಶ್ ಮುಂತಾದವರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.