ಕೋಲಾರ

ಕೆಎಸ್‌ಆರ್ಟಿಸಿ ಬಸ್ ನಿಲ್ದಾಣಕ್ಕೆ ಶಾಸಕರ ದಿಢೀರ್ ಭೇಟಿ

Published On :

ಬಂಗಾರಪೇಟೆ: ಪಟ್ಟಣದ ಕೆಎಸ್‌ಆರ್ಟಿಸಿ ಬಸ್ ನಿಲ್ದಾಣಕ್ಕೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ದಿಢೀರ್ ಭೇಟಿ ನೀಡಿ ಪ್ರಯಾಣಿಕರಿಗೆ ಆಗುತ್ತಿರುವ ಸಮಸ್ಯೆಗಳನ್ನು ಆಲಿಸಿದರು.
ಜಿಲ್ಲೆಯಲ್ಲೇ ಅತಿ ದೊಡ್ಡ ಕ್ಷೇತ್ರವಾಗಿದ್ದು, ಗ್ರಾಮೀಣ ಪ್ರದೇಶಗಳಿಂದ ತಮ್ಮ ಕೆಲಸ ಕಾರ್ಯಗಳಿಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ಗ್ರಾಮಸ್ಥರು ಪಟ್ಟಣಕ್ಕೆ ಬರುತ್ತಾರೆ. ಅಲ್ಲದೆ ಗ್ರಾಮೀಣ ಭಾಗದಿಂದ ಅಷ್ಟೇ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಸಹ ಬರಲಿದ್ದು, ಅವರಿಗಾಗುವ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿದರು.
ಮತ್ತಷ್ಟು ಬಸ್ ಸೇವೆ ಕಲ್ಪಿಸಿ: ಈ ವೇಳೆ ವಿದ್ಯಾರ್ಥಿಗಳು ಬೂದಿಕೋಟೆ, ಕಾಮಸಮುದ್ರ ಮತ್ತು ಸೂಲಿಕುಂಟೆ ಮಾರ್ಗದಲ್ಲಿ ಸರ್ಕಾರಿ ಬಸ್‌ಗಳ ಕೊರತೆಯಿಂದ ಸಮಯಕ್ಕೆ ಸರಿಯಾಗಿ ಶಾಲಾ- ಕಾಲೇಜುಗಳಿಗೆ ಬರಲು ಆಗುತ್ತಿಲ್ಲ. ಸಂಜೆ ವೇಳೆಯಂತೂ ಮತ್ತಷ್ಟು ಸಮಸ್ಯೆ ಜಟಿಲವಾಗುವುದು, ಲಭ್ಯವಿರುವ ಬಸ್‌ಗಳಲ್ಲಿ ಪ್ರಯಾಣಿಕರನ್ನು ಕುರಿಯಂತೆ ತುಂಬುತ್ತಾರೆ. ಇದರಿಂದ ಬಸ್ಸಿನಲ್ಲಿ ಉಸಿರುಗಟ್ಟು ಉಸಿರುಗಟ್ಟುವ ವಾತಾವರಣ ಸೃಷ್ಟಿಯಾಗುತ್ತದೆ. ಈ ಹಿನ್ನಲೆಯಲ್ಲಿ ಮತ್ತಷ್ಟು ಬಸ್‌ಗಳನ್ನು ಕಲ್ಪಿಸುವಂತೆ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಶಾಸಕರಲ್ಲಿ ಮನವಿ ಮಾಡಿದರು. ನಂತರ ಶಾಸಕರು ಡಿಪೋ ಅಧಿಕಾರಿಯನ್ನು ಯಾವ ಕಡೆ ಎಷ್ಚು ಬಸ್‌ಗಳು ಸಂಚರಿಸುತ್ತಿವೆ ಎಂದು ವಿಚಾರಿಸಿರು. ಕಾಮಸಮುದ್ರ ಕಡೆ ಅತಿ ಕಡಿಮೆ ಬಸ್ಸುಗಳ ಸಂಚಾರಕ್ಕೆ ಖೇಧ ವ್ಯಕ್ತಪಡಿಸಿದರು. ಖಾಸಗಿ ಬಸ್‌ಗಳು ಮಾತ್ರ ಹತ್ತು ನಿಮಿಷಕ್ಕೆ ಹೋಗಿ ಬರುವುದು ಸರ್ಕಾರಿ ಬಸ್‌ಗಳೇಕೆ ಇಲ್ಲ ಎಂಬ ಪ್ರಶ್ನೆಗೆ ಅಧಿಕಾರಿಯಿಂದ ಸಮರ್ಪಕ ಉತ್ತರ ಸಿಗಲಿಲ್ಲ. ಕೆಲವು ಕಡೆ ಬಸ್‌ಗಳಿಲ್ಲದೆ ಶೇರ್ ಆಟೋಗಳಲ್ಲಿ ಅಗತ್ಯಕ್ಕಿಂತಲೂ ಹೆಚ್ಚಿನ ಪ್ರಯಾಣಿಕರನ್ನು ತುಂಬಿಕೊಂಡು ಹೋಗುತ್ತಾರೆ. ಇದರಿಂದ ಅಪಘಾತಗಳು ಸಂಭವಿಸಿದರೆ ಯಾರು ಹೊಣೆ ಎಂದು ತರಾಟೆಗೆ ತೆಗೆದುಕೊಂಡರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.