ಡಿಕೆಶಿ-ಬೇಗ್ ಕೈಬಿಡಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಕೋಲಾರ: ಸಚಿವ ಸಂಪುಟಕ್ಕೆ ನೂತನವಾಗಿ ಸೇರಿಸಿಕೊಂಡಿರುವ ಡಿ.ಕೆ.ಶಿವಕುಮಾರ್ ಹಾಗೂ ರೋಷನ್ ಬೇಗ್ ವಿರುದ್ಧ ಭ್ರಷ್ಟಾಚಾರ ಆರೋಪಗಳು ಇರುವುದರಿಂದ ಕೂಡಲೇ ಅವರಿಬ್ಬರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿ ಬಿಜೆಪಿ ನಗರ ಘಟಕ ಪ್ರತಿಭಟನೆ ನಡೆಸಿತು.
ಇಬ್ಬರು ಕಳಂಕಿತರನ್ನು ತಮ್ಮ ಸಂಪುಟಕ್ಕೆ ಸೇರಿಸಿಕೊಳ್ಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅವಕಾಶವಾದಿ ರಾಜಕಾರಣ ಬಯಲು ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಸುಮಾರು ಅರ್ಧ ಗಂಟೆಗೂ ಹೆಚ್ಚು ನಗರದ ಸರ್ಕಾರಿ ಬಸ್ನಿಲ್ದಾಣ ವೃತ್ತದಲ್ಲಿ ರಸ್ತೆ ತಡೆದು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ತಾವು ಪ್ರಾಮಾಣಿಕ ರಾಜಕಾರಣಿ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ ಹೈಕಮಾಂಡ್ ಒತ್ತಡಕ್ಕೆ ಮಣಿದು ಲೋಕಾಯುಕ್ತ ತನಿಖೆ ಎದುರಿಸುತ್ತಿರುವ ಡಿ.ಕೆ.ಶಿವಕುಮಾರ್ ಹಾಗೂ ರೋಷನ್ ಬೇಗ್ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಂಡು ಜನತೆಗೆ ದ್ರೋಹ ಬಗೆದಿದ್ದಾರೆಂದು ಟೀಕಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಎಟ್ಟಕೋಡಿ ಕೃಷ್ಣಾರೆಡ್ಡಿ, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಓಂಶಕ್ತಿ ಚಲಪತಿ, ನಗರ ಘಟಕದ ಅಧ್ಯಕ್ಷ ಜಯಂತಿಲಾಲ್, ತಾಲೂಕು ಅಧ್ಯಕ್ಷ ಚಿನ್ನಾಪುರ ನಾರಾಯಣಸ್ವಾಮಿ, ಮುಖಂಡರಾದ ನಾಗಪ್ರಕಾಶ್, ನರಸಿಂಹರಾಜು, ವೆಂಕಟೇಶ ಮೌರ್ಯ, ಜಾಮೀನ್, ಗಾಂಧಿನಗರ ವೆಂಕಟೇಶ್, ವಿಜಯಕುಮಾರ್, ಮು.ರಾಘವೇಂದ್ರ, ಜಯರಾಮರೆಡ್ಡಿ, ಹಾರೋಹಳ್ಳಿ ನಾರಾಯಣಸ್ವಾಮಿ, ಮಮತ, ವಿಜಯಲಕ್ಷ್ಮಮ್ಮ, ಮಂಜುಳಮ್ಮ, ಶಕುಂತಲಾ ದೀಕ್ಷಿತ್, ರಾಮಸಂದ್ರ ನಾಗರಾಜ್, ಜಾವೀದ್, ನರೇಶ್, ಶ್ರೀನಾಥ್, ಕೀಲುಕೋಟೆ ರವಿ, ಕೆ.ಎನ್.ಸುರೇಶ್, ಕೆಂಬೋಡಿ ನಾರಾಯಣಸ್ವಾಮಿ, ಓಹಿಲೇಶ್, ವಕ್ತಾರ ಶಿಳ್ಳಂಗೆರೆ ಮಹೇಶ್ ಇನ್ನಿತರರು ಇದ್ದರು. ಪ್ರತಿಭಟನೆಯಿಂದಾಗಿ ಕೆಲಕಾಲ ನಗರದಲ್ಲಿ ಸಂಚಾರ ಅಸ್ತವ್ಯಸ್ಥಗೊಂಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

