ಕೋಲಾರ

ಸಿಎಂಗೆ ಪಕ್ಷದ ಸಂಪೂರ್ಣ ಸಹಕಾರ : ಎಚ್ಕೆಪಿ

Published On :

ಕ.ಪ್ರ.ವಾರ್ತೆ ,  ಕೋಲಾರ ,  ಜ.7
ನಮ್ಮದು ಅಹಿಂದ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವುದಕ್ಕೆ ಸಾಧ್ಯವಿಲ್ಲ. ಕರ್ನಾಟಕದಲ್ಲಿರುವುದು ಜನರ ಸರ್ಕಾರ ಎಂದು ಕಾಂಗ್ರೆಸ್ ಮುಖಂಡ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಎಚ್.ಕೆ. ಪಾಟೀಲ್ ಪ್ರತಿಪಾದಿಸಿದರು.
ಜಿಲ್ಲೆಯ ಪ್ರಗತಿ ಪರಿಶೀಲನೆಗಾಗಿ ಮಂಗಳವಾರ ಕೋಲಾರಕ್ಕೆ ಆಗಮಿಸಿದ್ದ ಅವರು ಸುದ್ಧಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಉತ್ತಮ ರೀತಿಯಲ್ಲಿ ಆಡಳಿತ ನಡೆಸುತ್ತಿದೆ, ಗ್ರಾಮೀಣಾಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ, ಇದನ್ನು ಸಹಿಸದವರು ಮುಖ್ಯಮಂತ್ರಿಗಳ ಶಕ್ತಿ ಕುಗ್ಗಿಸಲು ಷಡ್ಯಂತ್ರ ಮಾಡುತ್ತಿದ್ದಾರೆಂದು ಆರೋಪಿಸಿದರು.
ಸಿದ್ದರಾಮಯ್ಯನವರ ವಿರುದ್ಧ ಕಾಂಗ್ರೆಸ್‌ನಲ್ಲೇ ಅಸಮಾಧಾನ, ಅತೃಪ್ತಿ ಉಂಟಾಗಿರುವ ಬಗ್ಗೆ ಕೇಳಿದಾಗ, ಅದೆಲ್ಲಾ ಮಾಧ್ಯಮಗಳ ಸೃಷ್ಟಿ. ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಸಿದ್ದರಾಮಯ್ಯನವರಿಗೆ ಕಾಂಗ್ರೆಸ್‌ನಲ್ಲಿ ಸಂಪೂರ್ಣ ಸಹಕಾರವಿದೆ ಎಂದು ಸಮರ್ಥನೆ ಮಾಡಿಕೊಂಡರು. ಕಾಂಗ್ರೆಸ್ ಸಮನ್ವಯ ಸಮಿತಿ ಸಭೆಯಲ್ಲಿ ಸಚಿವರ ಸಾಧನೆಯ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ರಾಜ್ಯ ಉಸ್ತುವಾರಿ ವಹಿಸಿಕೊಂಡಿರುವ ದಿಗ್ವಿಜಯ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದಾರೆನ್ನಲಾದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಎಚ್.ಕೆ. ಪಾಟೀಲ್, ಇದೆಲ್ಲಾ ಕಟ್ಟುಕತೆ, ಸಭೆಯಲ್ಲಿ ಇದ್ದವರೇ ಆ ರೀತಿಯ ಘಟನೆಗಳು ನಡೆದಿಲ್ಲವೆಂದು ಸ್ಪಷ್ಟನೆ ನೀಡಿರುವುದರಿಂದ ಈ ಕುರಿತು ಹೆಚ್ಚಿಗೆ ಮಾತನಾಡುವುದಿಲ್ಲವೆಂದರು.
ಕಳೆದ ವರ್ಷ ನವೆಂಬರ್ 26 ರಂದು ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಜಾರಿಗೆ ತಂದಿರುವ 15 ವಿವಿಧ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಸಾಕಷ್ಟು ಪ್ರಗತಿ ಕಂಡು ಬರುತ್ತಿದೆ. ಕೋಲಾರ ಜಿಲ್ಲೆಯ ಸಾಧನೆ ತೃಪ್ತಿ ತಂದಿಲ್ಲ, ಪ್ರಗತಿ ಪರಿಶೀಲನೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು ಗುರಿ ಸಾಧನೆಗೆ ಸ್ಪಷ್ಟ ಸೂಚನೆ ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅನಿಲ್‌ಕುಮಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.