ಅಡುಗೆ ಸಿಬ್ಬಂದಿಗೆ ವೇತನ ಬಿಡುಗಡೆಗೆ ಆಗ್ರಹ
ಕನ್ನಡಪ್ರಭ ವಾರ್ತೆ, ಕೋಲಾರ, ಜ.8
ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಹಾಸ್ಟೆಲ್ಗಳಲ್ಲಿ ಅಡುಗೆ ನೌಕರರಾಗಿ ಕೆಲಸ ಮಾಡುತ್ತಿರುವ ದಿನಗೂಲಿ ನೌಕರರಿಗೆ ಕಳೆದ ಏಳೆಂಟು ತಿಂಗಳಿನಿಂದ ಬಾಕಿ ಉಳಿಸಿಕೊಂಡಿರುವ ವೇತನ ಬಿಡುಗಡೆಗೆ ಒತ್ತಾಯಿಸಿ ನೌಕರರು ಬುಧವಾರ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ದಿನಗೂಲಿ ಮತ್ತು ಗೌರವ ಧನ ನೌಕರರ ಮಹಾಮಂಡಳಿ ನೇತೃತ್ವದಲ್ಲಿ ಧರಣಿ ಆರಂಭಿಸಿರುವ ದಿನಗೂಲಿ ನೌಕರರು, ವೇತನ ಬಿಡುಗಡೆ ಮಾಡದ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವಿರುದ್ಧ ಘೋಷಣೆ ಕೂಗಿದರು.
ಪ್ರತಿಭಟನಕಾರರನ್ನುದ್ದೇಶಿಸಿ ಮಾತನಾಡಿದ ಮಹಾಮಂಡಳಿಯ ಅಧ್ಯಕ್ಷ ಪ್ರಮೋದ್ ಚಿಕ್ಕಮಣ್ಣೂರು, ಸರ್ಕಾರ 1997ರಲ್ಲಿ ಹೊರಡಿಸಿರುವ ಆದೇಶದಲ್ಲಿ ದಿನಗೂಲಿ ನೌಕರರಿಗೆ ಪ್ರತಿ ತಿಂಗಳು 5ನೇ ತಾರೀಕು ವೇತನ ನೀಡುವಂತೆ ನಿರ್ದೇಶನ ನೀಡಿದ್ದರೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸರ್ಕಾರದ ಆದೇಶ ಪಾಲಿಸದಿರುವುದು ಮಾನವ ಹಕ್ಕುಗಳ ಉಲ್ಲಂಘನೆ ಮಾಡಿದಂತಾಗಿದೆ ಎಂದು ಆಪಾದಿಸಿದರು. ಈ ಕೂಡಲೇ ದಿನಗೂಲಿ ನೌಕರರ ವೇತನ ಬಿಡುಗಡೆ ಮಾಡಬೇಕು, ಇಲ್ಲವಾದಲ್ಲಿ ಅನಿರ್ದಿಷ್ಟ ಧರಣಿ ಮುಂದುವರಿಸುವುದಾಗಿ ಎಚ್ಚರಿಸಿದರು. ಸಂಘದ ಜಿಲ್ಲಾಧ್ಯಕ್ಷ ಎಂ.ಮಂಜುನಾಥ, ಕಾರ್ಯದರ್ಶಿ, ಜಿ.ಎ. ಸುರೇಶ್, ಖಜಾಂಚಿ, ವೆಂಕಟರವಣಪ್ಪ, ಸಂಚಾಲಕರು ಎಂ.ಚ ೌಡಪ್ಪಗೌಡ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ದಿನಗೂಲಿ ನೌಕರರು ಧರಣಿ ನಡೆಸುತ್ತಿರುವ ಸ್ಥಳಕ್ಕೆ ವಿಧಾನಪರಿಷತ್ ಸದಸ್ಯ ಡಿ.ಎಸ್. ವೀರಯ್ಯ ಭೇಟಿ ನೀಡಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ, ನೌಕರರಿಗೆ ಬಾಕಿ ಇರುವ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

