ಕೋಲಾರ

ಸರಗಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ

Published On :

ಕೆಜಿಎಫ್: ಬಂಗಾರಪೇಟೆ ಮತ್ತು ಕೆಜಿಎಫ್ ವ್ಯಾಪ್ತಿಯ ಸರಗಳ್ಳತನ, ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಅವರಿಂದ ಸುಮಾರು 3.55 ಲಕ್ಷ ಮೌಲ್ಯದ ಚಿನ್ನದ ಒಡವೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಡಾ. ರೋಹಿಣಿಕಟೋಚ್ ಸೆಫಟ್ ತಿಳಿಸಿದ್ದಾರೆ.
ಕಳೆದ ವರ್ಷ 2013ನೇ ಸಾಲಿನಲ್ಲಿ ರಾಬರ್ಟ್‌ಸನ್‌ಪೇಟೆ ಠಾಣಾ ವ್ಯಾಪ್ತಿಯ ಮಹಾರಾಜ ರಸ್ತೆಯಲ್ಲಿ ಹಾಗೂ ನಗರಸಭೆ ಕಚೇರಿಯ ಸಮೀಪ ಮತ್ತು ಬಂಗಾರಪೇಟೆಯ ಬಸವೇಶ್ವರ ನಗರದಲ್ಲಿ ಚಿನ್ನದ ಸರವನ್ನು ಸುಲಿಗೆ ಮಾಡಿ ಪರಾರಿಯಾಗಿದ್ದ ಆರೋಪಿಗಳ ಪತ್ತೆಗಾಗಿ ಬಂಗಾರಪೇಟೆ ಮತ್ತು ರಾಬರ್ಟ್‌ಸನ್‌ಪೇಟೆ ಠಾಣೆಯಲ್ಲಿ ತಂಡ ರಚಿಸಿ ಕಾರ್ಯಾಚರಣೆ ನಡೆಸಿದ್ದರು.
ದೇಶಿಹಳ್ಳಿ ಬಡಾವಣೆಯ ಮಹಿಳೆಯರು ರಾತ್ರಿ ವೇಳೆ ತಮ್ಮ ಮನೆಯ ಮುಂದೆ ರಂಗೋಲಿ ಹಾಕುತ್ತಿದ್ದಾಗ ಸರ ಕಳ್ಳತನ ಮಾಡುವಾಗ ರಾತ್ರಿ ಗಸ್ತಿನಲ್ಲಿದ್ದ ಬಂಗಾರಪೇಟೆ ಪೊಲೀಸರು ಕೆಜಿಎಫ್‌ನ ಡಾ. ಅಂಬೇಡ್ಕರ್‌ನಗರ ನಿವಾಸಿಗಳಾದ ಜೋಶ್ವ ದೀಪಕ್‌ರಾಜ್ (22) ಹಾಗೂ ರಾಜೇಶ್ (21) ಎಂಬುವವರನ್ನು ಬಂಧಿಸಿ 3.55 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಎಸ್ಪಿ ಸೆಫಟ್ ತಿಳಿಸಿದ್ದಾರೆ. ಕಾರ್ಯಾಚರಣೆ ನಡೆಸಿದ ವಿಶೇಷ ತಂಡದ ರಾಬರ್ಟ್‌ಸನ್‌ಪೇಟೆ ಠಾಣಾ ವೃತ್ತನಿರೀಕ್ಷಕ ಲಕ್ಷ್ಮೀನಾರಾಯಣ, ಅಪರಾಧ ವಿಭಾಗದ ಪಿಎಸ್‌ಐ ನರಸಿಂಹಮೂರ್ತಿ, ಬಂಗಾರಪೇಟೆ ಠಾಣಾ ಪಿಎಸ್‌ಐ ಯೋಗಾನಂದಸೋನಾರ್, ಸಿಬ್ಬಂದಿಗಳಾದ ಚಲಪತಿ, ಸುರೇಶ್, ದೇವರಾಜ್, ಜಬಿ, ಶ್ರೀರಾಮರೆಡ್ಡಿ ಮತ್ತು ಹನುಮಂತಪ್ಪ ತಂಡವನ್ನು ಎಸ್ಪಿ ಶ್ಲಾಘಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.