ಕೋಲಾರ

ಅಣಕು ಸಂಸತ್‌ನಲ್ಲಿ ಕೋಲಾಹಲ!

Published On :

ಕೋಲಾರ: ವಿದ್ಯಾರ್ಥಿಗಳಲ್ಲಿ ರಾಜಕೀಯ ಮತ್ತು ಸಂಸದೀಯ ವ್ಯವಹಾರಗಳ ಬಗ್ಗೆ ತಿಳುವಳಿಕೆ ಮೂಡಿಸಲು ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಯುವ ಸಂಸತ್ ರ್ಯಕ್ರಮ ತರಬೇತಿಯ ಕೊರತೆಯಿಂದ ಹಾದಿ ತಪ್ಪಿದ ಕಲಾಪವಾಗಿ ಮಾರ್ಪಟ್ಟಿತು.
ಯುವ ಸಂಸತ್ ಕಲಾಪದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಅನೇಕರು ಕುಗಾಟವೇ ಪ್ರಧಾನವೆಂದು ಭಾವಿಸಿ ಒಟ್ಟಾಗಿ ನಿಂತು ಗದ್ದಲ ಸೃಷ್ಟಿಸಿದ ರಿಂದ ವೇದಿಕೆಯ ಮೇಲಿದ್ದ ಗಣ್ಯರು ಹಾಗೂ ತೀರ್ಪುಗಾರರು ತಲೆ ಕೆಡಿಸಿಕೊಳ್ಳುವಂತಾಯಿತು. ಆಡಳಿತ ಪಕ್ಷದವರಿಗಿಂತ ವಿರೋಧ ಪಕ್ಷದವರ ಘರ್ಜನೆ, ದರ್ಪ, ಮಾತಿನ ಚಟಾಕಿ ಜೋರಾಗಿತ್ತು. ಭಾಗವಹಿಸಿದ್ದ ವಿದ್ಯಾರ್ಥಿಗಳಲ್ಲೇ ಕೆಲವರನ್ನು ಮುಂದಿನ ಸ್ಪರ್ಧೆಗೆ ಆಯ್ಕೆ ಮಾಡಿಕೊಳ್ಳಲಾಯಿತು.
ರಾಜಕೀಯ. ಮಾಲಿನ್ಯ: ಮಾಲಿನ್ಯಗೊಂಡಿರುವ ರಾಜಕೀಯವನ್ನು ಸ್ವಚ್ಛಗೊಳಿಸುವ ಮೂಲಕ ಉತ್ತಮ ಆಡಳಿತ ನೀಡುವ ವ್ಯಕ್ತಿಗಳು ಪ್ರಜಾಪ್ರಭುತ್ವದಲ್ಲಿ ಬರಬೇಕೆಂಬ ನಿಟ್ಟನಲ್ಲಿ ವಿದ್ಯಾರ್ಥಿ ದೆಸೆಯಲ್ಲಿಯೇ ವಿದ್ಯಾರ್ಥಿಗಳಿಗೆ ರಾಜಕೀಯ ಪ್ರಜ್ಞೆ ಮೂಡಿಸಲು ಸರ್ಕಾರ ಯುವ ಸಂಸತ್ ಕಾರ್ಯಕ್ರಮ ಪ್ರತಿ ವರ್ಷ ನಡೆಸುತ್ತಿದೆ ಎಂದು ಸಂಸದೀಯ ವ್ಯವಹಾರಗಳ ಮತ್ತು ಶಾಸನ ರಚನಾ ಇಲಾಖೆ ಜಂಟಿ ಕಾರ್ಯದರ್ಶಿ ತಿಳಿಸಿದರು.
ಯುವ ಸಂಸತ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಶಿಕ್ಷಣಾಧಿಕಾರಿ ನಾಗೇಂದ್ರ ಪ್ರಸಾದ್
ಅಧ್ಯಕ್ಷತೆ ವಹಿಸಿದ್ದರು. ವಿಷಯ ಪರಿವೀಕ್ಷಕರಾದ ಮಲ್ಲಿಕಾರ್ಜುನಯ್ಯ, ವೆಂಕಟಸ್ವಾಮಿ, ಶಿವಮಾದಯ್ಯ, ರಾಜಣ್ಣ, ಜನಾರ್ಧನ ನಾಯ್‌ಡು, ಸಿ.ಆರ್.ಅಶೋಕ್ ಇದ್ದರು.   
ನಂತರ ನಡೆದ ಯುವ ಸಂಸತ್ ಅಣುಕು ಸಭೆಯಲ್ಲಿ ವಿದ್ಯಾರ್ಥಿಗಳು ಸಿಇಟಿ ಕಾಯ್ದೆ, ಕಳಂಕಿತರನ್ನು ಸಚಿವ ಸಂಪುಟ ಸೇರ್ಪಡೆ ಮಾಡಿಕೊಂಡಿರುವುದು ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಪ್ರಸ್ತಾಪಿಸಿದರಾದರೂ, ತರಬೇತಿ ಕೊರತೆಯಿಂದ ಗೊಂದಲ ಉಂಟಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.