'ಶಾಶ್ವತ ನೀರಾವರಿ ಜಾರಿಗಾಗಿ ಹೋರಾಟ ಅನಿವಾರ್ಯ'
ಶಿಡ್ಲಘಟ್ಟ: ಶಾಶ್ವತ ನೀರಾವರಿ ಯೋಜನೆ ಜಾರಿಗಾಗಿ ಹೋರಾಟಗಳನ್ನು ಮಾಡಲೇ ಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಚಿಂತಾಮಣಿಯ ವೈದ್ಯ ಡಾ. ಅನಿಲ್ಕುಮಾರ್ ಹೇಳಿದರು.
ಪಟ್ಟಣದ ಡಾಲ್ಪಿನ್ ಶಾಲೆಯಲ್ಲಿ ಎಸ್.ಎಫ್.ಐ. ಜಿಲ್ಲಾ ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ ಶಾಶ್ವತ ನೀರಾವರಿ ಸಮಿತಿ ಪೊವರ್ ಪಾಯಿಂಟ್ ಕಾರ್ಯಕ್ರಮದಲ್ಲಿ ಶಾಲೆ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದ ಚಿಂತಅವರು ಬರಡು ಜಿಲ್ಲೆಗಳಾಗಿರುವ ಅವಿಭಾಜ್ಯ ಕೋಲಾರ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆಗಳನ್ನು ಶೀಘ್ರವಾಗಿ ಜಾರಿಯಾಗದಿದ್ದರೆ ಮುಂದಿನ ದಿನಗಳಲ್ಲಿ ಜನತೆಯು ಪರದಾಡಬೇಕಾಗುತ್ತದೆ, ನಮ್ಮಲ್ಲಿ ಲಭ್ಯವಿರುವ ನೀರಿನಲ್ಲಿ ಶೇ 2.6 ರಷ್ಟು ಮಾತ್ರ ಕುಡಿಯಲು ಲಭ್ಯವಾಗುತ್ತಿದೆ. ಅನೇಕ ಸಂಘಟನೆಗಳು ಸೇರಿದಂತೆ ನೀರಾವರಿ ಯೋಜನೆಗಳ ಜಾರಿಗಾಗಿ ಹೋರಾಟಗಳನ್ನು ನಡೆಸುತ್ತಿದ್ದರೂ ಎತ್ತಿನಹೊಳೆ ಯೋಜನೆಯನ್ನು ಮುಂದಿಟ್ಟುಕೊಂಡು ನೀರಾವರಿ ಯೋಜನೆ ಜಾರಿಗೊಳಿಸಲು ವಿಳಂಬ ಮಾಡಲಾಗುತ್ತಿದೆ. ಪ್ರತಿಯೊಬ್ಬ ವಿದ್ಯಾರ್ಥಿ ಕೂಡ ನೀರನ್ನು ಉಳಿಸುವಂತಹ ಪ್ರತಿಜ್ಞೆ ಮಾಡಬೇಕಾಗಿದೆ, ದುಬಾರಿ ನೀರಿನ ಬಳಕೆಗೆ ಕಡಿವಾಣ ಹಾಕಬೇಕಾಗಿದೆ ಇಂದು ಸುಮಾರು 1300 ಅಡಿಗಳನ್ನು ಕೊರೆದರೂ ಶುದ್ಧ ನೀರು ಸಿಗುತ್ತಿಲ್ಲ, ನೀರಿಗಾಗಿ ಹೋರಾಟಗಳನ್ನು ಮಾಡಲೇ ಬೇಕಾದಂತಹ ಅನಿವಾರ್ಯತೆ ಎದುರಾಗಿದೆ ಮುಂದಿನ 2030 ನೇ ವರ್ಷಕ್ಕೆ ನಮ್ಮ ದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗತಿಯಲ್ಲಿ ಹೆಚ್ಚಾಗಲಿದೆ ಎಂದರು.
ಎಸ್.ಎಫ್.ಐ. ಜಿಲ್ಲಾ ಸಂಚಾಲಕ ಕುಂದಲಗುಕರ್ ಮುನೀಂದ್ರ, ಕಾಲೇಜಿನ ಪ್ರಾಂಶುಪಾಲ ಮುನಿಶಾಮಪ್ಪ, ಉಪನ್ಯಾಸಕರಾದ ರಾಮಸ್ವಾಮಿ, ವೆಂಕಟಶಿವಾರೆಡ್ಡಿ, ನಾಗೇಶ್ ಮುಂತಾದವರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

