ಶುಲ್ಕ ಏರಿಕೆಗೆ ವಿದ್ಯಾರ್ಥಿಗಳ ಆಕ್ರೋಶ
ಬಾಗೇಪಲ್ಲಿ: ಖಾಸಗಿ ಹಾಗೂ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಶೇ. 20ರಷ್ಟು ಶುಲ್ಕವನ್ನು ಏರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದನ್ನು ಖಂಡಿಸಿ ಭಾರತೀಯ ವಿದ್ಯಾರ್ಥಿ ಫೆಡರೇಷನ್ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟಿಸಿದರು.
ಡಾ. ಹೆಚ್.ಎನ್. ವೃತ್ತದಿಂದ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಮೆರವಣಿಯಲ್ಲಿ ಸಾಗಿ ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ರಸ್ತೆ ತಡೆ ನಡೆಸಿ ವಿದ್ಯಾಥಿಗಳು ಪ್ರತಿಭಟಿಸಿದರು.
ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ತಾಲೂಕು ಎಸ್.ಎಫ್.ಐ. ಅಧ್ಯಕ್ಷ ರಾಜಶೇಖರ್, ವಿದ್ಯಾರ್ಥಿವಿರೋಧಿ ನೀತಿಗಳನ್ನು ಜಾರಿಗೊಳಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಶಿಕ್ಷಣದ ವ್ಯಾಪಾರೀಕರಣದ ವಿಚಾರದಲ್ಲಿ ಬಿಜೆಪಿ ಪಕ್ಷವನ್ನು ಮೀರಿಸುತ್ತಿದೆ, ಶುಲ್ಕ ಏರಿಕೆಯಿಂದ ಬಡ, ದಲಿತ ಹಾಗೂ ಹಿಂದುಳಿದ ವರ್ಗಗಳ ಬಹುತೇಕ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಾರೆ ಎಂದು ಆರೋಪಿಸಿದರು.
ವಿದ್ಯಾರ್ಥಿಗಳ ದಾಖಲಾತಿ, ನೋಂದಣಿ, ಬೋಧನೆ, ಪ್ರಯೋಗಶಾಲೆ, ವಿಳಂಬ ದಾಖಲಾತಿ ದಂಡ ಶುಲ್ಕ, ವಿಶೇಷ ವಿಳಂಬ ದಾಖಲಾತಿ ದಂಡ ಶುಲ್ಕ, ಕ್ರೀಡಾ ಶುಲ್ಕ, ಪಠ್ಯೇತರ ಚಟುವಟಿಕೆ ಶುಲ್ಕ, ಗ್ರಂಥಾಲಯ ಶುಲ್ಕ, ವಿದ್ಯಾರ್ಥಿ ಕಲ್ಯಾಣ ನಿಧಿ, ಶಿಕ್ಷಕರ ಕಲ್ಯಾಣ ನಿಧಿ, ಶೌಚಾಲಯ, ನೀರನ ಶುಲ್ಕ ಸೇರಿ 3.732 ರು. ಇರುವ ಶುಲ್ಕವನ್ನು ಏಕಾಏಕಿ 4.485ಕ್ಕೆ ಏರಿಕೆ ಮಾಡಿ ಆದೇಶ ಹೊರಡಿಸಿರುವುದ ಖಂಡನೀಯ ಎಂದರು.
ಸರ್ಕಾರ ಹೊರಡಿಸಿರುವ ಶುಲ್ಕ ಏರಿಕೆಯ ಈ ಆದೇಶವನ್ನು ಕೂಡಲೇ ವಾಪಸ್ ಪಡೆಯಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ನರಸಿಂಹಮೂರ್ತಿ,ಉಪಾಧ್ಯಕ್ಷ ರಾಘವೇಂದ್ರರೆಡ್ಡಿ, ಅಭಿ, ಶ್ರೀಕಾಂತ್,ಶ್ರೀನಾಥ್, ಪ್ರಸಾದ್, ಹರಿಕೃಷ್ಣ, ಹರೀಶ್, ಮನೋಹರ್, ಪೃಥ್ವಿ, ಮಹೇಶ್, ಅಶ್ವಿನಿ, ನಂದಿನಿ, ಸೌಮ್ಯ, ರಜೀಯಾ, ಗಾಯಿತ್ರಿ, ಪ್ರಪುಲ್ಲ ಮುಂತಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

