ಕಾಟಾಚಾರಕ್ಕೆ ನಡೆದ ಗಣರಾಜ್ಯೋತ್ಸವ ಸಭೆ
ಶಿಡ್ಲಘಟ್ಟ: ಪಟ್ಟಣದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಗೆ ಬಹಳಷ್ಟು ಅಧಿಕಾರಿಗಳು ಗೈರು ಹಾಜರಾಗಿದ್ದರಿಂದ ಶಾಸಕರು ಹಾಗೂ ತಹಸೀಲ್ದಾರರು ಸೇರಿದಂತೆ ಬೆರಳೆಣಿಕೆಯಷ್ಟು ಮಂದಿ ಮಾತ್ರ ಸಭೆಗೆ ಹಾಜರಾಗಿದ್ದರು.
ಪಟ್ಟಣದಲ್ಲಿರುವ ಸಂತೆ ಬೀದಿಯಲ್ಲಿ ಜನಸಂದಣಿ ಹೆಚ್ಚಾಗಿರುವುದನ್ನು ತಡೆಗಟ್ಟಲು ಪೊಲೀಸ್ ಇಲಾಖೆ ವಿಫಲವಾಗಿದೆ. ಕನಿಷ್ಠ ಸಂತೆಯ ಸಮಯದಲ್ಲಿಯಾದರೂ ಪೇದೆಗಳನ್ನು ನೇಮಕ ಮಾಡಿಲ್ಲವೆಂದು ಪೊಲೀಸ್ ಅಧಿಕಾರಿಗಳ ಮೇಲೆ ಗರಂ ಆದರು. ಇದನ್ನು ಕಂಡ ವೃತ್ತ ನಿರೀಕ್ಷಕ ಶ್ರೀನಿವಾಸಮೂರ್ತಿ, ಕೂಡಲೇ ಸಂತೆಯ ದಿನದಂದು ಒಬ್ಬ ಪೋಲಿಸ್ ಪೇದೆಯನ್ನು ನೇಮಕ ಮಾಡುವಂತೆ ತಿಳಿಸಿದರು.
ನಂತರ ಪಟ್ಟಣದಲ್ಲಿ ಪುರಠಾಣೆಯ ನಿರ್ಮಾಣಕ್ಕೆ ಜಾಗವಿಲ್ಲ. ಎಲ್ಲಿಯಾದರೂ ಜಾಗವನ್ನು ಮಂಜೂರು ಮಾಡಿಕೊಟ್ಟರೆ ಇಲಾಖೆಯಿಂದ ನಿರ್ಮಾಣಕ್ಕೆ ಹಣವನ್ನು ಬಿಡುಗಡೆ ಮಾಡಿಕೊಡುತ್ತಾರೆ ಎಂದು ಪ್ರಸ್ತಾಪ ಮಾಡಿದರು.
ಕಾಟಾಚಾರಕ್ಕೆ ಕರೆದ ಸಭೆಯಂತಾಗಿದ್ದಂತೆ ಇತ್ತು, ಶಾಸಕರೂ ಕೂಡಾ ಕೇವಲ 2 ನಿಮಿಷದಲ್ಲಿ ತಮ್ಮ ಭಾಷಣ ಮುಗಿಸಿ ಮತ್ತೊಂದು ದಿನ ಸಭೆಯನ್ನು ಕರೆದು ಚರ್ಚಿಸುವುದಾಗಿ ಸಭೆಯಿಂದ ನಿರ್ಗಮಿಸಿದರು. ತಹಸೀಲ್ದಾರ್ ನಾರಾಯಣಸ್ವಾಮಿ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಎ. ರಾಮಚಂದ್ರಪ್ಪ, ಮುನಿಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

