ಕೋಲಾರ

ಸ್ವಾವಲಂಬನೆಗೆ ತೋಟಗಾರಿಕೆ ಅಳವಡಿಸಿಕೊಳ್ಳಿ: ನಾರಾಯಣಸ್ವಾಮಿ

Published On :

ಕೋಲಾರ: ಮಹಿಳೆಯರು ಆರ್ಥಿಕ ಸ್ವಾವಲಂಬನೆಗಾಗಿ ತೋಟಗಾರಿಕೆಯನ್ನು ಅವಲಂಬಿಸುವುದರ ಜೊತೆಗೆ ತಂತ್ರಜ್ಞಾನದ ಅರಿವು ಪಡೆದಲ್ಲಿ ನೆಮ್ಮದಿ ಜೀವನ ಸಾಗಿಸಬಹುದಾಗಿದೆ ಎಂದು ಬೆಂಗಳೂರಿನ ಹೆಸರಘಟ್ಟದ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಹಿರಿಯ ವಿಜ್ಞಾನಿ ಡಾ. ನಾರಾಯಣಸ್ವಾಮಿ ಸಲಹೆ ನೀಡಿದರು.
ತಾಲೂಕಿನ ಅರಾಭಿಕೊತ್ತನೂರು ಗ್ರಾಮದಲ್ಲಿ ಗ್ರಾಮ ಪಂಚಾಯಿತಿಯ ಲೋಕ ಶಿಕ್ಷಣ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಆರ್ಥಿಕಾಭಿವೃದ್ಧಿಯಲ್ಲಿ ತೋಟಗಾರಿಕೆ ಚಟುವಟಿಕೆಗಳು ಎಂಬ ವಿಷಯ ಕುರಿತು ಮಹಿಳೆಯರಿಗೆ ತಂತ್ರಜ್ಞಾನನ ಕುರಿತು ಮಾಹಿತಿ ನೀಡಿದರು.
ತೋಟಗಾರಿಕೆ ಇಂದು ಲಾಭದಾಯಕವಾಗಿದೆ. ಕಡಿಮೆ ನೀರು ಬಳಕೆ ಮಾಡಿ ಹೆಚ್ಚು ಲಾಭ ಗಳಿಸಬಹುದಾಗಿದೆ. ಮಹಿಳೆಯರು ತೋಟಗಾರಿಕೆಯ ಜತೆಗೆ ಇದರಿಂದ ಬರುವ ಉತ್ಪನ್ನಗಳಿಂದ ಮತ್ತಷ್ಟು ಆದಾಯ ತರುವ ಗುಡಿ ಕೈಗಾರಿಕೆಗಳನ್ನು ಸ್ಥಾಪಿಸಿ ಆರ್ಥಿಕ ಸ್ವಾವಲಂಬನೆ ಸಾಧಿಸಬಹುದೆಂದರು. ಕಾರ್ಯಕ್ರಮದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ಸೊಣ್ಣೇಗೌಡ, ಲೋಕಶಿಕ್ಷಣ ಸಮಿತಿ ಪ್ರೇರಕರಾದ ರಾಮಚಂದ್ರಪ್ಪ, ಅನಿತಾ, ಆಶಾ ಕಾರ್ಯಕರ್ತೆ ಚಂದ್ರಮ್ಮ, ಅಂಗನವಾಡಿ ಕಾರ್ಯಕರ್ತೆ ಎಚ್.ಟಿ. ಮುನಿಯಮ್ಮ, ತಾಂತ್ರಿಕ ಸಹಾಯಕರಾದ ಪ್ರಶಾಂತ್, ವೆಂಕಟೇಶ್ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.