ಪ್ರತಿದಿನ 10 ಗಂಟೆ 3 ಫೇಸ್ ವಿದ್ಯುತ್ ಪೂರೈಸಿ
ಬಾಗೇಪಲ್ಲಿ: ಪ್ರತಿದಿನ 10 ಗಂಟೆಗಳ ಕಾಲ 3 ಫೇಸ್ ವಿದ್ಯುತ್ ಸರಬರಾಜು ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೈತರು ಪ್ರತಿಭಟಿಸಿದರು.
ಡಾ.ಹೆಚ್.ಎನ್.ವೃತ್ತದಿಂದ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆಯಲ್ಲಿ ಸಾಗಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಹಾಗೂ ರೈತರು ಬೆಸ್ಕಾಂ ಕಚೇರಿ ಮುಂದೆ ಪತ್ರಿಭಟನೆ ನಡೆಸಿದರು.
ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಸಂಘದ ಅಧ್ಯಕ್ಷ ಬಿ. ನಾರಾಯಣಸ್ವಾಮಿ, ಬೆಸ್ಕಾಂ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನಕ್ಕೆ ರೈತರು ಸಂಕಷ್ಟ ಅನುಭವಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು. ಕಳೆದ ಸುಮಾರು 4-5 ವರ್ಷಗಳಿಂದ ಸತತವಾಗಿ ಮಳೆಯಿಲ್ಲದೆ ಅಂತರ್ಜಲದ ಮಟ್ಟ ತೀವ್ರ ಕುಸಿದಿದೆ. ಕೊಳವೆಬಾವಿಗಳನ್ನು ಒಂದು ಸಾವಿರ ಅಡಿ ಆಳಕ್ಕೆ ಕೊರೆದರೂ ಸಹ ನೀರು ಸಿಗುತ್ತಿಲ್ಲ. ಇರುವ ಅಲ್ಪ-ಸ್ವಲ್ಪ ನೀರಿನಲ್ಲಿ ಬ್ಯಾಂಕ್ ಹಾಗೂ ಖಾಸಗಿ ವ್ಯಕ್ತಿಗಳಿಂದ ಸಾಲ ಸೋಲ ಮಾಡಿ ಬೆಳಗಳನ್ನು ಇಡಲಾಗುತ್ತಿದೆ. ಆದರೆ, ವಿದ್ಯುತ್ ಕಣ್ಣಾಮುಚ್ಚಾಲೆ ಆಟವಾಡುವುದರಿಂದ ಈ ಭಾಗದ ರೈತರು ಬೆಳೆಗಳಿಗೆ ನೀರು ಇಲ್ಲದೆ ಒಣಗಿ ಹೋಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಟಿ. ವೆಂಕಟರವಣಪ್ಪ, ಕೃಷ್ಣಪ್ಪ, ಈಶ್ವರಪ್ಪ, ತಿಪ್ಪನ್ನ, ಶುಕೂರ್ಬೀ, ರಾಮರತ್ನಮ್ಮ, ಗಂಗರತ್ನಮ್ಮ, ಆದಿನಾರಾಯಣರೆಡ್ಡಿ ಮುಂತಾದವರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

