ಕೋಲಾರ

'ಪ್ರತಿಭೆ ಪ್ರದರ್ಶನಕ್ಕೆ ಕಲಿಕೋತ್ಸವ ಸಹಕಾರಿ'

Published On :

ಕೆಜಿಎಫ್: ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ಸರ್ಕಾರ ನೀಡುವ ಸವಲತ್ತುಗಳ ಸದುಪಯೋಗ ಮಾಡಿಕೊಂಡು ಅಂತಹ ಮಕ್ಕಳ ಉತ್ತಮ ಭವಿಷ್ಯವನ್ನು ರೂಪಿಸಲು, ಪ್ರತಿಭೆಯನ್ನು ಪ್ರದರ್ಶಿಸಲು ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಕ್ಷೇತ್ರ ಸಂಪನ್ಮೂಲ ಅಧಿಕಾರಿ ನಾರಾಯಣಸ್ವಾಮಿ ತಿಳಿಸಿದರು.
ಬೆಮೆಲ್‌ನಗರದ ಆಂಗ್ಲ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ತಾಲೂಕು ಮಟ್ಟದ ಕಲಿಕೋತ್ಸವದಲ್ಲಿ ಮಾತನಾಡಿದರು.
ಕೆಜಿಎಫ್‌ನ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹಾಗೂ ಪ್ರಾಂಶುಪಾಲ ಪಲ್ಲವಿಮಣಿ ಅವರು ಮಾತನಾಡಿ, ಇಂದಿನ ದಿನಗಳಲ್ಲಿ ಸರ್ಕಾರಿ ಶಾಲೆ ಮಕ್ಕಳಿಗೆ ಸರ್ಕಾರದ ಹಲವು ರೀತಿಯ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಮಕ್ಕಳು ಆಸಕ್ತಿಯಿಂದ ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರಲ್ಲಿರುವ ಪ್ರತಿಭೆಯನ್ನು ಮತ್ತು ಮಾಹಿತಿ ತಂತ್ರಜ್ಞಾನ ಯುಗದಲ್ಲಿ ಸರ್ಕಾರಿ ಶಾಲೆಯ ಮಕ್ಕಳು ಸಹ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಲು ಇಂತಹ ಕಾರ್ಯಕ್ರಮಗಳು ಹೆಚ್ಚು ಸಹಾಯಕಾರಿಯಾಗಲಿದೆ ಎಂದರು.
ತಾಲೂಕಿನ ವಿವಿಧ ಶಾಲೆಗಳಿಂದ 1ನೇ ತರಗತಿಯಿಂದ 8ನೇ ತರಗತಿಯ ಸುಮಾರು 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ಪಠ್ಯ ವಿಷಯಗಳಿಗೆ ಸಂಬಂಧಿಸಿ ಕಲಿಕಾ ವಿಷಯದ ಬಗ್ಗೆ ಹಾಗೂ ವಿವಿಧ ನಾಟಕ ಪ್ರದರ್ಶಿಸಿದರು.
ನಗರಸಭಾ ಸದಸ್ಯೆ ಉಮಾಮಹಂತೇಶ್, ಸಂಪನ್ಮೂಲ ಕೇಂದ್ರದ ಮಂಜುನಾಥಾಚಾರಿ, ನಾಗರಾಜಾಚಾರಿ, ನಾಟೀಕರ್, ರುಕ್ಮಣಮ್ಮ, ಗೋವಿಂದರಾಜು, ನಾರಾಯಣಸ್ವಾಮಿ, ಕೆ.ಜಿ. ಶ್ರೀನಿವಾಸ್, ಶ್ರೀದೇವಿ, ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.