ಶೀಘ್ರವೇ ಟೊಮೆಟೋ ಕ್ರೇಟ್ ಕಳ್ಳರ ಬಂಧನ
ಚಿಂತಾಮಣಿ: ಎಪಿಎಂಸಿ ಯಾರ್ಡ್ನಲ್ಲಿ ಕಳೆದ ಹಲವು ದಿನಗಳಿಂದ ಟೊಮೆಟೋ ಕ್ರೇಟ್ಗಳನ್ನು ಕಳ್ಳತನ ಮಾಡಿದ್ದ ಗುಂಪನ್ನು ಶೀಘ್ರವೇ ಬಂಧಿಸಲಾಗುವುದೆಂದು ಡಿವೈಎಸ್ಪಿ ಸಣ್ಣತಿಮ್ಮಪ್ಪ ತಿಳಿಸಿದರು.
ನಗರದ ಎಪಿಎಂಸಿ ಯಾರ್ಡ್ನಲ್ಲಿ ವರ್ತಕರಾದ ಚಂದ್ರಪ್ಪ, ಚರಣ್ ಟ್ರೇಡರ್ಸ್, ಸೈಯದ್ ಶಬೀರ್ ಎಂಬವರಿಗೆ ಸೇರಿದ ಟೊಮೆಟೋ ಕ್ರೇಟ್ಗಳನ್ನು ಕಳೆದ 2 ದಿನಗಳ ಹಿಂದೆ ಸುಮಾರು 1 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ 600ಕ್ಕೂ ಹೆಚ್ಚು ಕ್ರೇಟ್ಗಳನ್ನು ಕಳ್ಳತನ ಮಾಡುವ ಸಂದರ್ಭದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಈ ದಂಧೆಯಲ್ಲಿ ಪ್ರಮುಖ ಆರೋಪಿಗಳಾದ ನಗರದ ವೆಂಕಟಗಿರಿಕೋಟೆ ಮೂರ್ತಿ ಹಾಗೂ ಇತರೆ ಇಬ್ಬರು ಆರೋಪಿಗಳು ಸೇರಿ ತುಮಕೂರಿನ ಮಂಡಿಪೇಟೆಯಲ್ಲಿ ಹಣ್ಣಿನ ವ್ಯಾಪಾರಿಯೊಬ್ಬರಿಗೆ ಮಾರಾಟ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಕಳ್ಳತನ ಆರೋಪಿಗಳನ್ನು ಕಾರ್ಯಾಚರಣೆ ನಡೆಸಿ ಬಂಧಿಸಲಾಗುವುದೆಂದು ಹೇಳಿದರು.
ನಾಳೆ ಚಿತ್ರದುರ್ಗದಲ್ಲಿ ವಾಲ್ಮೀಕಿ ಸಮುದಾಯ ಸಮಾವೇಶ
ಚಿಂತಾಮಣಿ: ವಾಲ್ಮೀಕಿ ಸಮುದಾಯಕ್ಕೆ ಶೇ.7.5ರ ಮೀಸಲು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಜ.11ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಜನಾಂಗದ ಬೃಹತ್ ಸಮುದಾಯದಲ್ಲಿ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ತಾಲೂಕು ಅಧ್ಯಕ್ಷ ಅಗ್ರಹಾರ ಮುರಳಿ ತಿಳಿಸಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ದೊಡ್ಡ ಸಮುದಾಯವಾಗಿದ್ದು, ಪ್ರಸ್ತುತ 3ರ ಮೀಸಲಾತಿಯನ್ನು ಶೇ.7.5ಕ್ಕೇರಿಸಬೇಕೆಂದು ಆಗ್ರಹಿಸಲಾಗುವುದು. ಸಮಾವೇಶಕ್ಕೆ ವಾಲ್ಮೀಕಿ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾವೇಶ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
11ರಂದು ನಗರದ ಪ್ರವಾಸಿ ಮಂದಿರದಿಂದ ಸುಮಾರು 25ಕ್ಕೂ ಹೆಚ್ಚಿನ ಬಸ್ಸುಗಳು ವ್ಯವಸ್ಥೆಯನ್ನು ಕಲ್ಪಿಸಲಾಗಿದೆಯೆಂದು ಮುರಳಿ ತಿಳಿಸಿದ್ದಾರೆ.
ಟೇಕಲ್: ಉಚಿತ ನೇತ್ರ ಶಿಬಿರ
ಟೇಕಲ್: ಕಣ್ಣು ಮನುಷ್ಯನಿಗೆ ಮುಖ್ಯವಾದ ಅಂಗ. ಎಲ್ಲ ಕಾರ್ಯಗಳಿಗೂ ಪ್ರಧಾನವಾಗಿ ಕಣ್ಣಿರಬೇಕು ಎಂದು ಪಟ್ಟಣದ ಆರೋಗ್ಯ ಕೇಂದ್ರದ ವೈದ್ಯ ಡಾ. ಪ್ರಕಾಶ್ ಅಭಿಪ್ರಾಯಪಟ್ಟರು.
ಸರ್ಕಾರಿ ಆಸ್ಪತ್ರೆ, ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಉಚಿತ ಕಣ್ಣಿನ ಶಸ್ತ್ರಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರತಿ ಬಾರಿಯು ಟೇಕಲ್ನ ಆರೋಗ್ಯ ಕೇಂದ್ರದಲ್ಲಿ ಕೆಲವು ಸೇವಾ ಸಂಸ್ಥೆಗಳು ಪ್ರತಿಷ್ಠಿತ ಆರೋಗ್ಯ ಸಂಸ್ಥೆಗಳು ಇಂತಹ ಶಿಬಿರಗಳನ್ನು ಏರ್ಪಡಿಸುತ್ತಿದ್ದು, ಇದರಿಂದ ಅರ್ಹ ಫಲಾನುಭವಿಗಳಿಗೆ ಉಪಯುಕ್ತವಾಗುತ್ತಿದೆ ಎಂದರು. ಎಂ.ಎಸ್. ರಾಮಯ್ಯ ಆಸ್ಪತ್ರೆಯ ಡಾ. ಪೂಜಾ ಮತ್ತು ಡಾ. ಸ್ನೇಹಾ ಶಿಬಿರದಲ್ಲಿ ಬಂದ ಫಲಾನುಭವಿಗಳನ್ನು ಪರೀಕ್ಷಿಸಿದರು. ಈ ಸಂದರ್ಭದಲ್ಲಿ ಹಿರಿಯ ಆರೋಗ್ಯ ಸಹಾಯಕ ಎಸ್. ರಾಜು ಮತ್ತು ಟೇಕಲ್ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಒಟ್ಟು 14 ಮಂದಿ ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಆಯ್ಕೆಯಾಗಿದ್ದು, ಅವರನ್ನು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಪ್ರಾಯೋಗಿಕ ತರಬೇತಿಗೆ ಅರ್ಜಿ
ಚಿಕ್ಕಬಳ್ಳಾಪುರ: ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಆಯ್ಕೆ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಭರ್ತಿ ಮಾಡಿದ ಅರ್ಜಿಗಳನ್ನು ಜ.16 ರೊಳಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.ಈ ಹಿಂದೆ 2012-13ನೇ ಸಾಲಿಗೆ ಅರ್ಜಿಗಳನ್ನು ಪಡೆಯಲಾಗಿತ್ತಾದರೂ ನಿಗದಿತ ಅವಧಿಯೊಳಗಾಗಿ ಅನುದಾನ ಬಿಡುಗಡೆಯಾಗದ ಕಾರಣ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಈಗ ಸದರಿ ಅಭ್ಯರ್ಥಿಗಳಿಗೂ ಅವಕಾಶ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ. 08156-277116 ಸಂಪರ್ಕಿಸಿ.
ವಿಕಲಚೇತನರಿಗೆ ರಿಯಾಯ್ತಿ ಬಸ್ಪಾಸ್
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ 2014 ನೇ ಸಾಲಿಗೆ ರಿಯಾಯಿತಿ ಪಾಸ್ಗಳನ್ನು ವಿಕಲಚೇತನರಿಗೆ ವಿತರಿಸಲಾಗುತ್ತಿದೆ.ವಿಕಲಚೇತನರು ಹಳೆಯ ಪಾಸನ್ನು ಹಿಂದಿರುಗಿಸುವುದರ ಜೊತೆಗೆ 660 ರು. ನಗದನ್ನು ಪಾವತಿಸಿ ಹೊಸ ಪಾಸನ್ನು ಪಡೆಯಬಹುದು. ಹಳೆಯ ಪಾಸ್ಗಳ ಅವಧಿಯು ಫೆ. 28 ರವರೆಗೆ ಚಾಲ್ತಿಯಲ್ಲಿ ಇರುತ್ತದೆ. ಈ ಅವಧಿಯೊಳಗೆ ಚಿಂತಾಮಣಿ ಹಾಗೂ ಶಿಡ್ಲಘಟ್ಟ ತಾಲೂಕುಗಳ ವಿಕಲಚೇತನರು ಚಿಂತಾಮಣಿ ಬಸ್ ನಿಲ್ದಾಣದಲ್ಲಿ, ಬಾಗೇಪಲ್ಲಿ, ಗುಡಿಬಂಡೆ ತಾ. ನಿವಾಸಿಗಳು ಬಾಗೇಪಲ್ಲಿ ಬಸ್ನಿಲ್ದಾಣದಲ್ಲಿ, ಉಳಿದಂತೆ ಆಯಾ ಘಟಕದಲ್ಲಿ ಅರ್ಹ ದಾಖಲೆಗಳನ್ನು ಒದಗಿಸಿ ಹೊಸ ಪಾಸ್ ಗಳನ್ನು ಪಡೆಯಬಹುದೆಂದು ತಿಳಿಸಿದ್ದಾರೆ.
ರಾಜ್ಯ ಮಟ್ಟದ ತರಬೇತಿ ಶಿಬಿರ
ಚಿಕ್ಕಬಳ್ಳಾಪುರ: ಬಾಗಲಕೋಟೆಯ ರಾಜ್ಯ ಕಣಷಿಕರ ಸಂಪನ್ಮೂಲ ಕೇಂದ್ರದ ವತಿಯಿಂದ ತರಕಾರಿ ಮತ್ತು ಪುಷ್ಪಬೆಳೆಗಳ ಸಂರಕ್ಷಿತ ಬೇಸಾಯ ಕ್ರಮಗಳ ಬಗ್ಗೆ ಮೂರು ದಿನಗಳ ರಾಜ್ಯ ಮಟ್ಟದ ತರಬೇತಿ ಶಿಬಿರವನ್ನು ಹಮ್ಮಿಕೊಂಡಿದ್ದು ಶಿಬಿರದಲ್ಲಿ ವಿವಿಧ ತರಕಾರಿ ಮತ್ತು ಪುಷ್ಪಬೆಳೆಗಳಲ್ಲಿ ಅಧಿಕ ಇಳುವರಿಗೆ ಅನುಸರಿಸಬೇಕಾದ ಆಧುನಿಕ ಸಂರಕ್ಷಿತ ಬೇಸಾಯ ಕ್ರಮಗಳು,ಸಾವಯವ ಕೃಷಿ ತಂತ್ರಜ್ಞಾನ, ಸೂಕ್ತ ನೀರಾವರಿ ಪದ್ಧತಿಗಳು, ಕೊಯ್ಲೋತ್ತರ ಹಾಗೂ ಸಂಸ್ಕರಣಾ ಕ್ರಮಗಳು, ಮಾರುಕಟ್ಟೆ ವಿಧಾನಗಳು, ಹಣಕಾಸಿನ ನಿರ್ವಹಣೆ ಇತ್ಯಾದಿ ವಿಷಯಗಳ ಬಗ್ಗೆ ತರಬೇತಿ ನೀಡಲಾಗುವುದು. ಮಾಹಿತಿಗಾಗಿ ಕಾರ್ಯ ನಿರ್ವಾಹಕ ನಿರ್ದೇಶಕರು, ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ, ಬಿವಿವಿ ಸಂಘದ ಸ್ಪಿನ್ನಿಂಗ್ ಮಿಲ್ ಆವರಣ, ಗದ್ದನಕೇರಿ ರೋಡ್, ಬಾಗಲಕೋಟೆ-587103,ದೂ.ಸಂ.0835424402848, ಅನ್ನು ಸಂಪರ್ಕಿಸಬಹುದೆಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಮಹಿಳೆಯರಿಗೆ ಆಟೋಟ ಸ್ಪರ್ಧೆ
ಚಿಂತಾಮಣಿ: ಮಹಿಳೆಯರು ಅಡುಗೆ ಮನೆಗೆ ಮಾತ್ರ ಸೀಮಿತವಾಗದೆ ಮಾನಸಿಕವಾಗಿ, ದೈಹಿಕವಾಗಿ ಆರೋಗ್ಯವಂತರಾಗಿರಲು ಕ್ರೀಡೆಗಳು ಬಹಳ ಅಗತ್ಯವೆಂದು ಶ್ರೀ ವಾಸವಿ ಮಹಿಳಾ ಮಂಡಳಿ ಅಧ್ಯಕ್ಷೆ ಎನ್. ಧನಲಕ್ಷ್ಮಮ್ಮ ಹೇಳಿದರು.
ನಗರದ ಎನ್.ಆರ್. ಬಡಾವಣೆಯ ಶ್ರೀ ವಾಸವಿ ಮಂದಿರದಲ್ಲಿ ನೂತನ ಸಂವತ್ಸರ ಪ್ರಯುಕ್ತ ಶ್ರೀ ವಾಸವಿ ಮಹಿಳಾ ಮಂಡಳಿ ವತಿಯಿಂದ ಆಯೋಜಿಸಲಾಗಿದ್ದ ಸ್ಟಾರ್ ಮಹಿಳಾ ಸ್ಪರ್ಧೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕಾರ್ಯಕ್ರಮಕ್ಕೂ ಮುನ್ನ ಸ್ಟಾರ್ ಮಹಿಳಾ ಸ್ಪರ್ಧೆಯಲ್ಲಿ ಕುಂಟೆಬಿಲ್ಲೆ, ೋಲಿಗುಂಡು ಜೋಡಣೆ, ರಿಂಗ್ ಎಸೆತ, ರಂಗೋಲಿ ಸ್ಪರ್ಧೆಯಲ್ಲಿ ನಗರದ ನೂರಾರು ಮಹಿಳೆಯರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಹಿಳೆಯರು ತಯಾರಿಸಿದ ಶುಚಿ ಮತ್ತು ರುಚಿಯಾದ ತಿಂಡಿ ತಿನಿಸುಗಳು ಮಾರಾಟ ಮಾಡಿದರು. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಬಂತು. ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ಮಹಿಳೆಯರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಅನರ್ಹರಿಗೂ ಸಂಧ್ಯಾ ಸುರಕ್ಷಾ; ಕ್ರಮಕ್ಕೆ ಆಗ್ರಹ
ಶ್ರೀನಿವಾಸಪುರ: ತಾಲೂಕಿನ ಕಸಬಾ ಹೋಬಳಿಯ ಚಲ್ದಿಗಾನಹಳ್ಳಿ ಮತ್ತು ನಂಬಿಹಳ್ಳಿ ಕಂದಾಯ ವೃತ್ತದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮ ಲೆಕ್ಕಾಧಿಕಾರಿ ಆಡಳಿತ ಪಕ್ಷದ ಧುರೀಣರ ಮಾತಿಗೆ ಮಣಿದು ಸಂಧ್ಯಾ ಸುರಕ್ಷಾ ಯೋಜನೆ ಹಣವನ್ನು ಕೊಳ್ಳೆ ಹೊಡೆಯುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿದ್ದಾರೆ. 65 ವರ್ಷ ವಯಸ್ಸಾಗದಿದ್ದರೂ ಲಂಚ ಪಡೆದು ಮಾಸಾಶನ ಮಂಜೂರಾತಿ ಆದೇಶ ಪತ್ರಗಳನ್ನು ನೀಡಲಾಗುತ್ತಿದೆ. ಇದರಿಂದ ಅರ್ಹ ಫಲಾನುಭವಿಗಳು ಯೋಜನೆ ಉಪಯೋಗ ಪಡೆಯಲು ಸಾಧ್ಯವಾಗುತ್ತಿಲ್ಲ. ಕೂಡಲೇ ಲೆಕ್ಕಾಧಿಕಾರಿ ವಿರುದ್ಧ ತಹಸೀಲ್ದಾರರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಾಗರಿಕರು ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

