ಕೋಲಾರ

'ಸವಾಲು ಎದುರಿಸಲು ವಿದ್ಯಾರ್ಥಿಗಳು ಸಜ್ಜಾಗಿ'

Published On :

ಕೋಲಾರ: ಸ್ಪರ್ಧಾತ್ಮಕ ಪ್ರಪಂಚದಲ್ಲಿ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಸಿದ್ಧರಾಗಿ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಕೆ. ಶ್ರೀನಿವಾಸ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕೋಲಾರ- ಬಂಗಾರಪೇಟೆ ರಸ್ತೆಯ ಹುದುಕುಳ ಸರ್ಕಾರಿ ಸಂಯುಕ್ತ ಪ್ರೌಢಶಾಲೆಯ ಶೈಕ್ಷಣಿಕ ವೃತ್ತಿ ಮಾರ್ಗದರ್ಶನ ಘಟಕ, ಆಪ್ತ ಸಲಹಾ ಕೇಂದ್ರದಡಿ ನಡೆದ ಶೈಕ್ಷಣಿಕ ವೃತ್ತಿ ಮಾರ್ಗದರ್ಶನದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಪಠ್ಯಕ್ಕೆ ಮಾತ್ರ ಶಿಕ್ಷಣ ಸೀಮಿತವಾಗದಿರಿ ಎಂದು ಸಲಹೆ ನೀಡಿದ ಅವರು, ಕೇವಲ ಅಂಕ ಗಳಿಕೆಯೊಂದೇ ಸಾಧನೆಯಲ್ಲ. ವಿವಿಧ ಕೌಶಲ್ಯ ಪಡೆಯಬೇಕು, ಸಮಾಜದಲ್ಲಿ ಬದುಕಿಗೂ ಆಸರೆ ಪಡೆಯಲು ಸನ್ನದ್ಧರಾಗಬೇಕೆಂದರು.
ನಗರದ ಪ್ರದೇಶದ ವಿದ್ಯಾರ್ಥಿಗಳ ಪೈಪೋಟಿಗೆ ಅನುಗುಣವಾಗಿ ಸಾಧನೆ ಮಾಡಲು ಹಳ್ಳಿ ಮಕ್ಕಳಿಗೆ ಶೈಕ್ಷಣಿಕ ಮತ್ತು ವೃತ್ತಿ ಮಾರ್ಗದರ್ಶನ ಅತ್ಯಗತ್ಯ ಎಂದ ಅವರು, ಆಡಳಿತಾತ್ಮಕ ಪರೀಕ್ಷೆಗಳನ್ನು ಗೆಲ್ಲಲು ಅರಿವು, ನಿರಂತರ ಅಧ್ಯಯನ ಅಗತ್ಯವೆಂದರು.
ಶಿಕ್ಷಕರು, ಪೋಷಕರ ಹೊಣೆ: ಎಸ್‌ಎಸ್‌ಎಲ್‌ಸಿ ನಂತರ ಮುಂದೇನು ಎಂಬ ಆಲೋಚನೆಯನ್ನು ಕಾಡುವ ಸಮಯದಲ್ಲಿ ಅವರಿಗೆ ಶೈಕ್ಷಣಿಕ ಮಾರ್ಗದರ್ಶನ ನೀಡುವ ಮೂಲಕ ಅವರಲ್ಲಿನ ಪ್ರತಿಭೆಗೆ ಅನುಗುಣವಾಗಿ ಮುನ್ನಡೆಸುವ ಕಾರ್ಯದಲ್ಲಿ ಶಿಕ್ಷಕರು ಮತ್ತು ಪೋಷಕರ ಹೊಣೆಯೂ ಇದೆ ಎಂದರು. ನರಸಾಪುರ ಕೈಗಾರಿಕಾ ವಲಯದಲ್ಲಿ ಬೃಹತ್ ಕೈಗಾರಿಕೆಗಳು ಬಂದಿವೆ, ಇಲ್ಲಿ ಈಗಾಗಲೇ 15 ಸಾವಿರಕ್ಕೂ ಹೆಚ್ಚು ಮಂದಿಗೆ ಉದ್ಯೋಗ ಲಭ್ಯವಿದೆ. ಸುಮಾರು 10 ಸಾವಿರಕ್ಕೂ ಹೆಚ್ಚು ಮಂದಿ ಐಟಿಐ ಮತ್ತು ಡಿಪ್ಲೊಮೋ ತರಬೇತಿ ಪಡೆದವರು ಮುಂದಿನ ದಿನಗಳಲ್ಲಿ ವೇಮಗಲ್ ಕೈಗಾರಿಕಾ ವಲಯವೂ ವಿಸ್ತಾರಗೊಳ್ಳಲಿದ್ದು, ಉದ್ಯೋಗಳ ಲಭ್ಯತೆಯೂ ಹೆಚ್ಚುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕಿ ಎಸ್.ಕೆ. ಸರೋಜ ವಹಿಸಿದ್ದರು. ಶಿಕ್ಷಕರಾದ ಕೆ.ವಿ. ಜಯಸುಧ, ವಿ.ಆರ್. ನಾಗರಾಜ್, ಕೆ.ಸಿ. ಶೋಭಾ, ಡಿ. ಅಗಿಲಾ, ಜಿ.ಕೆ. ಶಶಿಕಲಾ ಮತ್ತಿತರರು ಇದ್ದರು. ದಾಕ್ಷಾಯಿಣಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.