ಯುವಶಕ್ತಿ ಸಂಘಟನೆಗೆ ಬಿಜೆಪಿ ಸಂಕಲ್ಪ
ಕೋಲಾರ: ದೇಶದ ರಕ್ಷಣೆ ಮತ್ತು ಅಭಿವೃದ್ಧಿಗೆ ಯುವ ಶಕ್ತಿಯ ಪಾತ್ರ ಅತಿಮುಖ್ಯ, ಸ್ವಾಮಿ ವಿವೇಕಾನಂದರು ಯುವಕರಲ್ಲಿ ಚೇತನ್ಯ ಮೂಡಿಸುವ ಹತ್ತು ಹಲವು ಕಾರ್ಯಕ್ರಮಗಳ ಜತೆಗೆ ದೇಶ ಕಟ್ಟುವ ಕೆಲಸವನ್ನು ಮಾಡಿದ್ದಾರೆ. ಅದೇ ರೀತಿ ಬಿಜೆಯು ಸಹ ಯುವಕರನ್ನು ಒಗ್ಗೂಟಿಸಿ ಉತ್ತಮ ಸಮಾಜ ನಿರ್ಮಾಣ ಮಾಡಲು ಬಯಸಿದೆ ಎಂದು ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪಿ. ಮುನಿರಾಜು ತಿಳಿಸಿದರು.
ನಗರದ ಪವನ್ ಕಾಲೇಜು ಮೈದಾನದಲ್ಲಿ ಶನಿವಾರ ಅವರು ವಿವೇಕಾನಂದರ 150ನೇ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಖೇಲೇಗಾ ಯುವ ಜೀತೇಗಾ ಭಾರತ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.
ಯುವಕರಿಗೆ ಹೆಚ್ಚು ಪ್ರಿಯವಾದ ಕ್ರಿಕೆಟ್ ಮೂಲಕ ಯುವ ಶಕ್ತಿಯನ್ನು ಒಂದುಗೂಡಿಸಲು ಪಕ್ಷದ ನಿರ್ಧರಿಸಿದೆ. ರಾಜ್ಯದ 30 ಜಿಲ್ಲೆಗಳಲ್ಲಿ ಈ ಕ್ರಿಕೆಟ್ ಪಂದ್ಯಾವಳಿಗಳು ನಡೆಯುತ್ತಿದ್ದು, ಸುಮಾರು 40 ರಿಂದ 50 ಸಾವಿರ ಯುವಕರನ್ನು ಸಂಘಟಿಸುವ ಮೂಲಕ ಸುಭದ್ರ ರಾಷ್ಟ ನಿರ್ಮಾಣಕ್ಕೆ ಯುವಕರನ್ನು ಸಜ್ಜುಗೊಳಿಸುವುದಾಗಿ ತಿಳಿಸಿದರು.
ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಮಾತನಾಡಿ, ವಿವೇಕಾನಂದರು ದೇಶದ ಯುವಕರ ಆಶಾಕಿರಣರಾಗಿದ್ದಾರೆ. ನರೇಂದ್ರ ಕೋ ನಮನ್ ಕಾರ್ಯಕ್ರಮದ ಮೂಲಕ ಯುವಕರಲ್ಲಿ ರಾಷ್ಟ್ರ ಪ್ರೇಮ ಮೂಡಿಸಲು ಕ್ರಿಕೆಟ್ ಅನ್ನು ಆಡಿಸುತ್ತಿದ್ದೇವೆಂದರು.
ಉತ್ತಮ ಕಾರ್ಯ: ಪತ್ರಕರ್ತ ಕೆ.ಎಸ್. ಗಣೇಶ್ ಮಾತನಾಡಿ, ಕಾಶ್ಮೀರದಿಂದ ಹಿಡಿದು ಕನ್ಯಾಕುಮಾರಿಯವರೆಗೂ ಯುವಕರು ಕ್ರಿಕೆಟ್ ಮೇಲೆ ಹೆಚ್ಚಿನ ಆಸಕ್ತಿಯನ್ನು ತೋರುತ್ತಿರುವುದು ಕಾಣಬಹುದಾಗಿದೆ. ಭಾರತೀಯರನ್ನು ಇಂದು ಕ್ರಿಕೆಟ್ ಆಟದ ವಿಚಾರದಲ್ಲಿ ಒಂದಾಗಿಸಿ ಅಖಂಡ ಭಾರತವನ್ನು ಕಾಣುವ ಪ್ರಯತ್ನ ನಡೆಯುತ್ತಿದ್ದು, ಇದಕ್ಕೆ ಬಿಜೆಪಿ ಕೈಜೋಡಿಸಿರುವುದು ಉತ್ತಮ ಎಂದು ಹೇಳಿದರು. ಬಿಜೆಪಿ ಜಿಲ್ಲಾಧ್ಯಕ್ಷ ಕೃಷ್ಣಾರೆಡ್ಡಿ, ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಓಂಶಕ್ತಿ ಚಲಪತಿ ಮಾತನಾಡಿದರು.
ಬಿಜೆಪಿ ನಗರ ಅಧ್ಯಕ್ಷ ಜಯಂತಿ ಲಾಲ್, ಗ್ರಾಮಾಂತರ ಅಧ್ಯಕ್ಷ ನಾರಾಯಣಸ್ವಾಮಿ, ನೀಲಿ ಜಯಶಂಕರ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರಮೋದ್, ಸಂಚಾಲಕ ಶ್ರೀನಾಥ್, ವಿಜಿಯಕುಮಾರ್, ಮುನಿಸ್ವಾಮಿರೆಡ್ಡಿ, ಡಾ. ಶಿವಣ್ಣ, ಉಪಸ್ಥಿತರಿದ್ದರು.
ಬಿಜೆಪಿ ಯುವ ಮೋರ್ಚಾ ಗ್ರಾಮಾಂತರ ಅಧ್ಯಕ್ಷ ಪುನೀತ್ ಸ್ವಾಗತಿಸಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರೇಶ್ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

