ಕೋಲಾರ

ಶಿಕ್ಷಣ ಪಡೆದು ಉತ್ತಮ ಪ್ರಜೆಗಳಾಗಿ: ಶಾಸಕ ಕೃಷ್ಣಾರೆಡ್ಡಿ

Published On :

ಚಿಂತಾಮಣಿ: ವಿದ್ಯಾರ್ಥಿಗಳು ಗುಣಮಟ್ಟ ಶಿಕ್ಷಣ ಪಡೆದು ಉತ್ತಮ ಪ್ರಜೆಗಳಾಗುವಂತೆ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಸಲಹೆ ನೀಡಿದರು. ತಾಲೂಕಿನ ಕೈವಾರ ಗ್ರಾಮದಲ್ಲಿನ ಸರ್ಕಾರಿ ಮಾದರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.  ಸರ್ಕಾರ ಬಡಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಬಿಸಿಯೂಟ, ಸಮವಸ್ತ್ರ, ವಿದ್ಯಾರ್ಥಿ ವೇತನ, ಕ್ಷೀರಭಾಗ್ಯ, ಬೈಸಿಕಲ್ ಹಾಗೂ ಇನ್ನಿತರೆ ಯೋಜನೆಗಳನ್ನು ಮಕ್ಕಳು ಸದುಪಯೋಗಪಡಿಸಿಕೊಂಡು ಉತ್ತಮ ಮಾನವೀಯತೆ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು ಎಂದ ಅವರು, ತಕ್ಷಣವೇ ಶಾಲೆಗೆ ಕೊಳವೆ ಬಾವಿ ಕೊರೆಸಿ ನೀರಿನ ಸಮಸ್ಯೆ ನೀಗಿಸಲು ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಿದರು.  ನಂತರ ಶಾಲಾ ಶ್ರದ್ಧಾವಾಚನಾಲಯ ಉದ್ಘಾಟಿಸಿದ ಕೋಚಿಮುಲ್ ನಿರ್ದೇಶಕ ಹಾಗೂ ನಂದಿನಿ ಹಾಲು ಉತ್ಪಾದಕರ ಸಹಕಾರ ಸಂಘದ ತಾಲೂಕು ಅಧ್ಯಕ್ಷ ಟ.ಎನ್. ರಾಜಗೋಪಾಲ್ ಮಾತನಾಡಿದರು. ನಂತರ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸ್ಥಳೀಯ ಎಪಿಎಂಸಿ ಸದಸ್ಯರಾದ ಸುಬ್ಬಾರೆಡ್ಡಿ ವಿಜ್ಞಾನ ಪ್ರಯೋಗಾಲಯ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸವಿತಾ ಮಂಜುನಾಥರೆಡ್ಡಿ, ಮುಬೀನಾ ತಾಜ್, ಡಾ. ಜಿ. ಮಾಧವ, ಹನುಮಂತರಾವ್, ಕೃಷ್ಣಮೂರ್ತಿ, ಕೆ.ಎನ್. ಶ್ರೀನಿವಾಸಪ್ಪ,ನಾರಾಯಣಸ್ವಾಮಿ, ಸಿ.ಆರ್.ಪಿ ಶಂಕರಮೂರ್ತಿ, ಯನುಮಲಪಾಡಿ ಚಂದ್ರಾರೆಡ್ಡಿ,ದೊಡ್ಡಬೊಮ್ಮನಹಳ್ಳಿ ವೆಂಕಟರೆಡ್ಡಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.