ಟೇಕಲ್ ಕಾಲೇಜು ಮಾದರಿಯಾಗಿ ಪರಿವರ್ತನೆ: ಭರವಸೆ
ಟೇಕಲ್: ಮಾಲೂರು ತಾಲೂಕಿನಲ್ಲಿಯೆ ಟೇಕಲ್ ಸರ್ಕಾರಿ ಪದವಿ ಪೂರ್ವ ಕಾಲೇಜನ್ನು ಮಾದರಿ ಕಾಲೇಜನ್ನಾಗಿ ಮಾಡುವುದಾಗಿ ತಾಪಂ ಮಾಜಿ ಅಧ್ಯಕ್ಷ ಕೆ.ವೈ.ನಂಜೇಗೌಡ ತಿಳಿಸಿದರು.
ಟೇಕಲ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ 20ನೇ ವಾರ್ಷಿಕೋತ್ಸವದಲ್ಲಿ ಮಾತನಾಡಿ, ಹಿಂದೆ ಇದೇ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗದಲ್ಲಿ ಓದಿ ಉನ್ನತ ವ್ಯಾಸಂಗದಲ್ಲಿರುವ ವೈದ್ಯರು, ಎಂಜಿನಿಯರ್, ರಾಜಕಾರಣಿ, ವಿದೇಶದಲ್ಲಿರುವವರನ್ನು ಗುರ್ತಿಸಿ ಸನ್ಮಾನಿಸಿದರೆ ಉತ್ತಮವಾಗಿರುತ್ತದೆ ಎಂದರು.
ಟೇಕಲ್ ಕಾಲೇಜಿನಲ್ಲಿ ಮುಂದಿನ ವ್ಯಾಸಂಗ ಮಾಡಲು ಆರ್ಥಿಕ ತೊಂದರೆ ಉಂಟಾದರೆ ಅಂತಹವರು ನೇರ ನನ್ನ ಬಳಿ ಬಂದರೆ ಸಹಾಯ ನೀಡುವುದಾಗಿ ತಿಳಿಸಿದರು. ತಾಪಂ ಸದಸ್ಯೆ ನಿರ್ಮಲಾಆಂಜಿನಪ್ಪ ಮಾತನಾಡಿ, ಕಾಲೇಜಿಗೆ ಕುಡಿಯುವ ನೀರಿನ ವ್ಯವಸ್ಥೆಗಾಗಿ ತಾಪಂನಿಂದ ಪಂಪು, ಮೋಟರ್ ನೀಡಲಾಗುತ್ತಿದೆ. ಕಾಂಪೌಂಡ್ ವ್ಯವಸ್ಥೆ ಮಾಡಲಾಗುವುದೆಂದು ತಿಳಿಸಿದರು.
ಪ್ರಾಂಶುಪಾಲ ಎ.ಕೆ. ಪಾಪಣ್ಣನವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಎಸ್.ಬಿ.ಸಿ ಸಮಿತಿಯ ಅಧ್ಯಕ್ಷ ಕೆ.ಬಿ. ನಾರಾಯಣಸ್ವಾಮಿ ಮಾತನಾಡಿ, ಕಾಲೇಜಿಗೆ ಉತ್ತಮ ರೀತಿಯಿಂದ ಫಲಿತಾಂಶ ಬರುತ್ತಿದೆ. ಕಾಲೇಜಿನ ಹಿಂಭಾಗದಲ್ಲಿರುವ ಸರ್ಕಾರಿ ಜಾಗವನ್ನು ಸಮಿತಿಯಲ್ಲಿ ಚರ್ಚಿಸಿ ಕಾಲೇಜು ಆಟದ ಮೈದಾನವನ್ನಾಗಿ ಮಾಡುವುದಾಗಿ ಹೇಳಿದರು. ಕಾರ್ಯಕ್ರಮದಲ್ಲಿ 2013ನೇ ಸಾಲಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ಕಾಲೇಜಿಗೆ ಅತೀ ಹೆಚ್ಚು ಅಂಕ ಗಳಿಸಿದ ಎಸ್. ರೂಪ ಅವರಿಗೆ ಬಹುಮಾನ ನೀಡಲಾಯಿತು. ತಾಲೂಕು ಮಟ್ಟದಲ್ಲಿ ನಡೆದ ಕ್ರೀಡಾಕೂಟದಲ್ಲಿ ಪ್ರಥಮ, ದ್ವಿತೀಯ ಸ್ಥಾನಗಳಿಸಿದ ವಿದ್ಯಾರ್ಥಿಗಳಿಗೆ ಕಾಲೇಜು ವತಿಯಿಂದ ಬಹುಮಾನ ವಿತರಿಸಲಾಯಿತು.
ತಾಪಂ ಸದಸ್ಯೆ ಮಂಜುಳಾವೆಂಕಟೇಶ್, ಎ.ಕೆ. ವೆಂಕಟೇಶ್, ಹನುಮಪ್ಪ, ಚಂದ್ರಶೇಖರ್, ಈರಪ್ಪ, ಸೋಮಶೇಖರ್, ಪುಟ್ಟಮ್ಮ, ಗ್ರಾಪಂ ಸದಸ್ಯರಾದ ಶ್ರೀನಿವಾಸ್, ವೆಂಕಟೇಶಪ್ಪ, ಉಪನ್ಯಾಸಕರಾದ ರವಿಂದ್ರ, ವಿವೇಕಾನಂದ, ಅರುಣ್ಕುಮಾರ್, ನಾಗರತ್ನ, ಮುಜಾಮಿಲ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

