ಪ್ರತಿಭೆ ಸಾಧಕರ ಸ್ವತ್ತು: ಕಂಬಾರ ಅಭಿಮತ
ಶಿಡ್ಲಘಟ್ಟ: ಪ್ರತಿಭೆ ಸೋಮಾರಿಗಳ ಸ್ವತ್ತಲ್ಲ, ಪ್ರತಿಭೆ ಸಾಧಕರ ಸ್ವತ್ತು. ಸತತ ಪರಿಶ್ರಮದಿಂದ ಮಾತ್ರ ಪ್ರತಿಭಾವಂತರು ಹೊರಹೊಮ್ಮಲು ಸಾಧ್ಯ ಎಂದು ಜ್ಞಾನಪೀಠ ಪ್ರಶಸ್ತಿ ವಿಜೇತ ನಾಡೋಜ ಡಾ. ಚಂದ್ರಶೇಖರ ಕಂಬಾರ ತಿಳಿಸಿದರು.
ಮಳ್ಳೂರಿನ ವಿವೇಕಾನಂದ ವಿದ್ಯಾ ಸಂಸ್ಥೆಯಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ಸ್ವಾಮಿ ವಿವೇಕಾನಂದರ 150ನೇ ಜನ್ಮದಿನೋತ್ಸವ ಉದ್ಘಾಟಿಸಿ ಮಾತನಾಡುತ್ತಿದ್ದರು.
ಪ್ರತಿಭಾವಂತ ವಿದ್ಯಾರ್ಥಿಗಳನ್ನು ಬೆಳೆಸಿ ರಾಷ್ಟ್ರದ ಅಭಿವೃದ್ಧಿಗೆ ಪೂರಕವಾದ ಶಿಕ್ಷಣವನ್ನು ನೀಡುವ ಕಾರ್ಯಕ್ಕೆ ಶಿಕ್ಷಣ ಸಂಸ್ಥೆಗಳು ಆದ್ಯತೆ ನೀಡಬೇಕೆಂದರು.
ಕೇವಲ ಅಂಕಗಳಿಗಾಗಿ ಮಾತ್ರ ಶಿಕ್ಷಣ ನೀಡದೆ ವಿದ್ಯಾರ್ಥಿಗಳಲ್ಲಿ ಸೃಜನ ಶೀಲತೆ ಬೆಳೆಸುವತ್ತ ಶಿಕ್ಷಕರು ಗಮನ ಹರಿಸಬೇಕೆಂದರು. ಸ್ವಾಮಿ ವಿವೇಕಾನಂದರು ರಾಷ್ಟ್ರದ ಭವಿಷ್ಯ ಯುವಜನತೆಯ ಕೈಯಲ್ಲಿದೆ ಎಂದು ಅರಿತು ಬಲಿಷ್ಠ ಭಾರತವನ್ನು ಕಟ್ಟುವ ಶಕ್ತಿ ಯುವಕರಲ್ಲಿ ಇದೆ ಎಂಬುದನ್ನು ಗುರುತಿಸಿ ದೇಶದ ಸಂಸ್ಕೃತಿ ಪ್ರಾಚೀನತೆಯನ್ನು ಅರಿಯಬೇಕೆಂದರು. ವಿವಿಧ ಧರ್ಮ ಮತ ಭಾಷೆ ಹಾಗೂ ವಿವಿಧ ಸಂಸ್ಕೃತಿಗಳ ನೆಲೆವೀಡಾದ ಭಾರತದಲ್ಲಿನ ಅನೇಕತೆಯಲ್ಲಿ ಏಕತೆಯನ್ನು ಕಾಣಲು ಸ್ವಾಮಿ ವಿವೇಕಾನಂದರ ದೂರದೃಷ್ಟಿಯೇ ಕಾರಣವೆಂದರು.
ಮುಖ್ಯ ಅತಿಥಿಗಳಾಗಿ ಮಾತನಾಡಿದ ನಗರಾಭಿವೃದ್ಧಿ ಇಲಾಖೆಯ ಪ್ರದಾನ ಕಾರ್ಯದರ್ಶಿ ಪಿ.ಎನ್.ಶ್ರೀನಿವಾಸಾಚಾರಿ ಬದುಕಿನ ಮಾರ್ಗ ಬದಲಾವಣೆ ಮಾಡುವಂತಹ ಶಿಕ್ಷಣ ಇಂದಿನ ಅಗತ್ಯವಾಗಿದ್ದು ಉತ್ತಮ ಸಂಸ್ಕೃತಿಯಿಂದ ಮಾತ್ರ ಇದು ಸಾಧ್ಯವೆಂದರು, ವಿದ್ಯಾರ್ಥಿಗಳು ವಿದ್ಯಾರ್ಜನೆಯತ್ತ ಮಾತ್ರ ಗಮನ ಹರಿಸಿ ಸ್ಪಷ್ಟವಾದ ಗುರಿಯನ್ನು ಹೊಂದಬೇಕೆಂದರು.
ಮತೊಬ್ಬ ಮುಖ್ಯ ಅತಿಥಿ ರಾಜ್ಯದ ನಿವೃತ್ತ ಕಾರ್ಯದರ್ಶಿ ಜಿ.ಎಸ್. ನಾರಾಯಣಸ್ವಾಮಿ ಮಾತನಾಡಿ ರಾಷ್ಟ್ರದಲ್ಲಿ ಮಾನವ ಸಂಪನ್ಮೂಲ ಯತೇಚ್ಚವಾಗಿದ್ದು ಭಾರತೀಯ ಯುವಕರಲ್ಲಿ ಕೌಶಲ್ಯದ ಕೊರತೆ ಇದ್ದು ಕೌಶಲ್ಯದ ಉನ್ನತೀಕರಣಕ್ಕೆ ಶಿಕ್ಷಣ ಸಂಸ್ಥೆಗಳು ಆದ್ಯತೆ ನೀಡಬೇಕೆಂದರು.
ವಿವೇಕಾನಂದ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ.ಎನ್. ರಾಮಾಂಜಿನಪ್ಪ ಅಧ್ಯಕ್ಷತೆ ವಹಿಸಿದ್ದು ಎಂ.ಆರ್. ಶಿವಣ್ಣ ವಾರ್ಷಿಕ ವರದಿ ಓದಿದರು. ಇದೇ ವೇಳೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು. ಜ್ಞಾನಪೀಠ ಪ್ರಶಸ್ತಿ ವಿಜೇತ ಡಾ. ಚಂದ್ರಶೇಖರ ಕಂಬಾರರನ್ನು ಶಾಲು ಹೊದಿಸಿ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜೆ.ಪಿ. ಲಕ್ಷೀಪತಿ, ಎಂ.ಎನ್. ಗೋಪಾಲಪ್ಪ, ಎಂ. ನಾಗರಾಜ್, ಸಿ. ನಾರಾಯಣಸ್ವಾಮಿ, ಸಿ.ಎಂ. ದೇವರಾಜ್, ಎಂ.ಕೆ. ಚಂದ್ರಶೇಖರ್ ಮುಂತಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

