ಅಂಗನವಾಡಿ ಕಟ್ಟಡ ಬೇಕು
ಮುಳಬಾಗಿಲು ತಾಲೂಕಿನ ಆಂಬ್ಲಿಕಲ್ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ಇಲ್ಲದೆ ಮಕ್ಕಳು ಪರಿತಪ್ಪಿಸುವಂತಾಗಿದೆ. ಗ್ರಾಮೀಣ ಪ್ರದೇಶದ ಬಡ ಜನರ ಮಕ್ಕಳಿಗೆ ಉತ್ತಮ ಶಿಕ್ಷಣ, ಮೂಲ ಸೌಕರ್ಯ ಕಲ್ಪಿಸುವುದು ಜನಪ್ರತಿನಿಧಿಗಳ ಕರ್ತವ್ಯ. ಮುಳಬಾಗಿಲು ಶಾಸಕ ಕೊತ್ತೂರು ಮಂಜುನಾಥ್ ಅವರು ಅನೇಕರಿಗೆ ಧಾನ-ಧರ್ಮಗಳನ್ನು ಮಾಡುತ್ತಿದ್ದಾರೆ. ಅದೇ ರೀತಿ ತಮ್ಮ ಕ್ಷೇತ್ರಕ್ಕೆ ಸೇರಿದ ಆಂಬ್ಲಿಕಲ್ ಗ್ರಾಮದಲ್ಲಿ ಅಂಗನವಾಡಿ ಕೇಂದ್ರಕ್ಕೆ ಸ್ವಂತ ಕಟ್ಟಡ ನಿರ್ಮಿಸಿಕೊಡುವುದಕ್ಕೆ ಗಮನ ನೀಡಿದರೆ ಒಳ್ಳೆಯದಾಗುತ್ತದೆ. ಗ್ರಾಮದ ಮಕ್ಕಳು ಅಂಗನವಾಡಿ ಕಟ್ಟಡ ಇಲ್ಲದೆ ಪಾಳು ಕಟ್ಟಡದಲ್ಲಿ ಕಾಲ ಕಳೆಯುವಂತಾಗಿದೆ. ನೆಲದ ಮೇಲೆ ಕುಳಿತು ಪಾಠ ಕೇಳುತ್ತಿದ್ದಾರೆ. ಸಣ್ಣ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಶಾಸಕರು ಕೂಡಲೇ ಕಟ್ಟಡ ನಿರ್ಮಾಣಕ್ಕೆ ಮುಂದಾಗಬೇಕು.
ಟಿ ಕೆ. ಶ್ರೀನಿವಾಸಗೌಡ, ರೈತ ಸಂಘದ ಮುಖಂಡ, ಕೋಲಾರ
ಈ ಚರಂಡಿಗಳಿಗೆ ಮುಕ್ತಿ ಎಂದು?
ಕೋಲಾರ ನಗರದ ಮಹಾಲಕ್ಷ್ಮೀ ಬಡಾವಣೆಯಲ್ಲಿ ಚರಂಡಿಗಳು ಗಿಡ ಗಂಟೆಗಳಿಂದ ಮುಚ್ಚಿ ಹೋಗಿರುವುದರಿಂದ ಕೊಳಚೆ ನೀರು ಹರಿಯಲಾಗದೆ ಜನತೆ ಸೊಳ್ಳೆಗಳ ಕಾಟದಿಂದ ಹಾಗೂ ದುರ್ವಾಸನೆ ತಾಳಲಾರದೆ ಪರದಾಡುತ್ತಿದ್ದಾರೆ. ನಗರಸಭೆಯ ಅಧಿಕಾರಿಗಳು ಚರಂಡಿಗಳ ಸ್ವಚ್ಛತೆಗೆ ಗಮನ ನೀಡದಿದ್ದರೆ ಮಳೆಗಾಲದಲ್ಲಿ ಸಮಸ್ಯೆ ಆಗುತ್ತದೆ. ನಗರದ ಅನೇಕ ಕಡೆ ಚರಂಡಿಗಳು ಹಾಳಾಗಿವೆ. ಸಿಬ್ಬಂದಿಯ ಕೊರತೆಯಿಂದ ಸ್ವಚ್ಛತಾ ಕಾರ್ಯ ಸರಿಯಾಗಿ ಆಗುತ್ತಿಲ್ಲ. ಜಿಲ್ಲಾಧಿಕಾರಿಗಳು ನಗರಸಭೆಯ ಆಡಳಿತಾಧಿಕಾರಿಯು ಆಗಿದ್ದು ಶೀಘ್ರವೇ ನಗರಸಭೆಗೆ ಭೇಟೆ ನೀಡಿ ಸ್ವಚ್ಛತೆ ಬಗ್ಗೆ ಗಮನ ಹರಿಸದಿದ್ದರೆ ಬೇಸಿಗೆ ಕಾಲದಲ್ಲಿ ಸಾಂಕ್ರಾಮಿಕ ರೋಗಗಳಿಗೆ ಆಹ್ವಾನ ನೀಡಿದಂತಾಗುತ್ತದೆ.
ಟಿ ಬಾಲನ್, ಕೋಲಾರ
ಆಧಾರ್ ಕಾರ್ಡಿಗೆ ಪರದಾಟ ತಪ್ಪಿಸಿ
ಕೋಲಾರದಲ್ಲಿ ಆಧಾರ್ ಕಾರ್ಡು ಪಡೆಯಲು ಜನತೆ ಪರದಾಡುತ್ತಿದ್ದಾರೆ. ಮುಂಚೆ ನಗರದ ಅಂಚೆ ಕಚೇರಿ ಸೇರಿದಂತೆ ವಿವಿಧ ಕಡೆ ಕೇಂದ್ರಗಳನ್ನು ತೆರೆದು ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲೂ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗಿತ್ತು. ಆದರೆ, ಕೆಲವು ತಿಂಗಳಿಂದ ಅಂಚೆ ಕಚೇರಿಯಲ್ಲಿ ಆದಾರ್ ಕಾರ್ಡು ನೊಂದಣಿ ನಿಲ್ಲಿಸಲಾಗಿದೆ. ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ತೆರೆದಿರುವ ಕೇಂದ್ರದಲ್ಲಿ ಪ್ರತಿನಿತ್ಯ ನೂರರು ಜನರು ಬೆಳಿಗ್ಗೆ 10 ರಿಂದ ಸಂಜೆಯವರೆಗೆ ಕಾದು ಫೋಟೋ ತೆಗೆಸಿಕೊಳ್ಳುವಂತಾಗಿದೆ. ಜಿಲ್ಲಾಧಿಕಾರಿಗಳು ಜನತೆಯ ಕಷ್ಟ ಅರಿತು ಪರ್ಯಾಯ ವ್ಯವಸ್ಥೆ ಮಾಡಬೇಕು.
ಟಿ ಶ್ರೀಹರಿ, ಕೋಲಾರ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

