ದೇಗುಲ ಅಭಿವೃದ್ಧಿ; ಡಿಸಿ ಮೆಚ್ಚುಗೆ
ಮಾಲೂರು: ಚೋಳರ ಕಾಲದ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಿ.ಕೆ. ರವಿ ಹೇಳಿದರು.
ತಾಲೂಕಿನ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಗ್ರಾಮಸ್ಥರ ಸಹಕಾರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗೆ ಮೆಚ್ಚಿಗೆ ಸೂಚಿಸಿ ಮಾತನಾಡಿ, ಅತಿ ಪ್ರಾಚೀನ ದೇವಾಲಯಗಳಲ್ಲಿ ಒಂದಾಗಿರುವ ಇಲ್ಲಿನ ದೇವಾಲಯಕ್ಕೆ ರಾಜ್ಯ ಸೇರಿದಂತೆ ಪಕ್ಕದ ರಾಜ್ಯಗಳಿಂದ ಸಾವಿರಾರು ಭಕ್ತರು ಭೇಟಿ ನೀಡುತ್ತಿದ್ದಾರೆ. ಆದರೆ ಇಲ್ಲಿ ಮೂಲ ಸೌಕರ್ಯದ ಕೊರತೆ ಇದ್ದು, ಗ್ರಾಮಸ್ಥರೇ ಮುಂದಾಗಿ ದೇವಾಲಯ ಸಂಬಂಧ ಕೋರ್ಟ್ನಲ್ಲಿ ಹೂಡಿದ್ದ ವ್ಯಾಜ್ಯಗಳನ್ನು ತೆರವುಗೊಳಿಸಿ ದೇವಾಲಯದ ಅಭಿವೃದ್ಧಿಗೆ ಮುಂದಾಗಿರುವುದು ಸಂತಸದ ವಿಷಯ ಎಂದರು.
ಶಾಸಕ ಕೆ.ಎಸ್. ಮಂಜುನಾಥ್ ಮಾತನಾಡಿ, ಮುಜರಾಯಿ ಇಲಾಖೆ ಹಾಗೂ ಸಾರ್ವಜನಿಕರ ಸಹಕಾರದಲ್ಲಿ ದೇವಾಲಯದ ಪುನರ್ ನಿರ್ಮಾಣಕ್ಕೆ ಪ್ರತಿಯೊಬ್ಬರ ಸಹಕಾರ ಬೇಕಾಗಿದೆ. ಈಗಾಗಲೇ ದೇವಾಲಯದ ಬಳಿಯ ರಸ್ತೆಯ ಅಗಲೀಕರಣ ಸೇರಿದಂತೆ ಹಲವು ಕಾಮಗಾರಿಗಳು ಪ್ರಗತಿಯಲ್ಲಿದೆ ಎಂದರು. ಅಧಿಕಾರವಹಿಸಿಕೊಂಡ ನಂತರ ಪ್ರಥಮ ಬಾರಿಗೆ ಚಿಕ್ಕತಿರುಪತಿಯ ಈ ದೇವಾಲಯಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ದಂಪತಿಗಳಿಗೆ ದೇವಾಲಯ ಸಮಿತಿಯವರು ಪೂರ್ಣ ಕುಂಭ ಸ್ವಾಗತ ನೀಡಿದರು. ದೇವಾಲಯದ ಇಒ ಹಿರೇಮಠ್, ಶಾಸಕರ ಪತ್ನಿ ಅರಿದ್ರಾ ಮಂಜುನಾಥ್ ಕೃಷ್ಣಾರೆಡ್ಡಿ, ಸುರೇಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

