ಬೀದಿನಾಯಿ: ಕಡಿವಾಣ ಹಾಕದ ನಗರಸಭೆ
ಚಿಂತಾಮಣಿ: ನಗರದಲ್ಲಿ ಬೀದಿನಾಯಿಗಳ ಹಾವಳಿಯಿಂದ ವೃದ್ಧರು, ಮಹಿಳೆ, ಮಕ್ಕಳು ಸುಗಮವಾಗಿ ಓಡಾಡಲು ಸಾಧ್ಯವಾಗುತ್ತಿಲ್ಲ. ನಾಯಿಗಳಿಂದ ಕಚ್ಚಿಸಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರಕರಣಗಳು ದಿನೇ ದಿನೆ ಹೆಚ್ಚಾಗುತ್ತಿದ್ದರೂ ನಾಯಿಗಳ ಸಂತತಿಗೆ ಕಡಿವಾಣ ಹಾಕಲು ನಗರಸಭೆ ಅಧಿಕಾರಿಗಳು ಮುಂದಾಗದಿರುವ ಬಗ್ಗೆ ನಾಗರಿಕರು ಶಾಪ ಹಾಕುತ್ತಿದ್ದಾರೆ.
ನಗರದ 31 ವಾರ್ಡ್ಗಳಲ್ಲಿ ಬೀದಿನಾಯಿಗಳ ಹಾವಳಿಯಿಂದ ನಾಗರಿಕರು ಸುಗಮವಾಗಿ ಸಂಚರಿಸಲು ಆಗದೇ ತುಂಬಾ ತೊಂದರೆ ಆಗುತ್ತಿದೆ. ಈಗಾಗಲೇ ಗಿರಿ ಎಂಬ ಯುವಕನಿಗೆ ಕಚ್ಚಿ ಮತ್ತೊಬ್ಬ ಬಾಲಕನ ಮೇಲೆ ನಾಯಿಗಳು ದಾಳಿ ನಡೆಸಿದ ಪರಿಣಾಮ ಇಲ್ಲಿನ ನಿವಾಸಿಗಳು ನಗರಸಭೆ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಆದರೂ ನಗರಸಭೆ ಸೂಕ್ತ ಗಮನ ಹರಿಸುತ್ತಿಲ್ಲವೆಂದು ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದ ವಿವಿಧ ಪ್ರದೇಶಗಳಲ್ಲಿ ಬೀದಿ ನಾಯಿಗಳ ಸಂತತಿ ಹೆಚ್ಚಾಗುತ್ತಿರುವುದರಿಂದ ನಾಗರಿಕರು ಆಹಾರ ಪದಾರ್ಥ ಅಥವಾ ಇತರೇ ವಸ್ತುಗಳನ್ನು ಕೈಚೀಲದಲ್ಲಿ ತೆಗೆದುಕೊಂಡು ಹೋಗುವಾಗ ದಾಳಿ ನಡೆಸುತ್ತಿರುವ ಪ್ರಕರಣಗಳು ನಗರದಲ್ಲಿ ನಿತ್ಯ ಸಾರ್ವಜನಿಕರ ಬಾಯಲ್ಲಿ ಕೇಳಿ ಬರುತ್ತದೆ.
ಇನ್ನು ಮುಂದಾದರೂ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ನಗರಸಭೆ ಅಧಿಕಾರಿಗಳು ಇತ್ತ ಗಮನ ಹರಿಸಿ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕೆಂದು ನಾಗರಿಕರು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

