ಮಕ್ಕಳ ಪ್ರಾಯೋಗಿಕ ಚಟುವಟಿಕೆ ಪ್ರೋತ್ಸಾಹಿಸಿ
ಕೋಲಾರ: ಮಕ್ಕಳಲ್ಲಿ ಹುದುಗಿರುವ ಕ್ರಿಯಾತ್ಮಕ ಪ್ರಾಯೋಗಿಕ ಚಟುವಟಿಕೆಗಳನ್ನು ಹೊರಗೆಡವಲು ವಸ್ತು ಪ್ರದರ್ಶನಗಳು ಸಹಕಾರಿಯಾಗುತ್ತವೆ ಎಂದು, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ಸಿ.ಆರ್. ಅಶೋಕ್ ತಿಳಿಸಿದರು.
ನಗರದ ಖಾದ್ರಿಪುರದ ಅಮರಜ್ಯೋತಿ ಪಬ್ಲಿಕ್ ಸ್ಕೂಲ್‌ನಲ್ಲಿ ಹಮ್ಮಿಕೊಂಡಿದ್ದ ವಿಜ್ಞಾನ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಶಾಲೆಯಲ್ಲಿ ಕಲಿಯುವ ಪಠ್ಯದ ವಿಷಯಗಳನ್ನು ಪ್ರಾಯೋಗಿಕವಾಗಿ ಸಿದ್ಧಪಡಿಸಿ ಅದನ್ನು ಪ್ರದರ್ಶಿಸಿ ಮತ್ತೊಬ್ಬರಿಗೆ ವಿವರಿಸುವ ಮೂಲಕ, ಆ ವಿಷಯದ ಬಗ್ಗೆ ಆಳವಾದ ಆಸಕ್ತಿ ಮೂಡುವಂತಾಗುತ್ತದೆ. ಇದಕ್ಕೆ ಪೂರಕವಾಗಿ ಶಾಲಾ ಸಂಸ್ಥೆಯವರು ಇಂತಹ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ಹಾಗೂ ಅವಕಾಶವನ್ನು ಕಲ್ಪಿಸುವಂತಾಗಬೇಕು ಎಂದು ಹೇಳಿದರು.
ಸಂಸ್ಥೆಯ ಸಂಸ್ಥಾಪಕ ಡಿ.ಮುನಿಯಪ್ಪ ಅಧ್ಯಕ್ಷತೆಯಲ್ಲಿ, ಕಾರ್ಯದರ್ಶಿ ಕೆ.ಎನ್. ಅಮರಾವತಿ, ರೋಟರಿ ಸೆಂಟ್ರಲ್‌ನ ಅಧ್ಯಕ್ಷ ಗೋಪಾಲ ಕೃಷ್ಣ, ಸದಸ್ಯ ರಮೇಶ್‌ಬಾಬು, ಮುಖ್ಯೋಪಾಧ್ಯಾಯ ರಾಮಾಂಜನಪ್ಪ, ಎನ್. ಶ್ರೀನಿವಾಸರೆಡ್ಡಿ, ಆಡಳಿತಾಧಿಕಾರಿ ಕೆ.ಎಂ.ಮೋಹನ್, ಗೋವರ್ಧನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಈ ವಸ್ತು ಪ್ರದರ್ಶನದಲ್ಲಿ 120 ವಿದ್ಯಾರ್ಥಿಗಳು ವಿವಿಧ ವಿಷಯಗಳ ಕುರಿತ ಮಾದರಿಗಳನ್ನು ಪ್ರದರ್ಶಿಸಿದರು. ಈ ವೇಳೆ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಶಸ್ತಿ ಪಡೆದ ಶಾಲೆಯ ವಿದ್ಯಾರ್ಥಿಗಳಾದ ವಿ.ವೀಣಾ, ಬಿ.ಎನ್. ಕವನ, ಜಯಶ್ರೀ ಅವರಿಗೆ ನಗದು ಬಹುಮಾನದೊಂದಿಗೆ ಪ್ರಶಂಸನಾ ಪತ್ರಗಳನ್ನು ವಿತರಿಸಲಾಯಿತು. ಸುಮಂಗಳಿ ಪ್ರಾರ್ಥಿಸಿ, ತೇಜಸ್ವಿನಿ ಸ್ವಾಗತಿಸಿ, ಹಂಸವೇಣಿ ನಿರೂಪಿಸಿ, ಕೆ.ಎನ್. ಆಶಾ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

