18 ರಂದು ಆದಿ ಶ್ರೀ 70ನೇ ಜಯಂತ್ಯುತ್ಸವ
ಚಿಕ್ಕಬಳ್ಳಾಪುರ: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ 71 ನೇ ಪೀಠಾಧ್ಯಕ್ಷ ಬಾಲ ಗಂಗಾಧರನಾಥ ಸ್ವಾಮೀಜಿರವರ 70 ನೇ ಜಯಂತ್ಯುತ್ಸವವನ್ನು ಜ.18 ರಂದು ಹಮ್ಮಿಕೊಳ್ಳಲಾಗಿದೆ ಎಂದು ಆದಿ ಚುಂಚನಗಿರಿ ಶಾಖಾ ಮಠದ ಮಂಗಳಾನಂದನಾಥ ಸ್ವಾಮೀಜಿ ತಿಳಿಸಿದರು.
ನಗರದ ಹೊರವಲಯದಲ್ಲಿರುವ ಆದಿಚುಂಚನಗಿರಿ ಶಾಖಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ.18 ರಂದು ಪದ್ಮಭೂಷಣ ಶ್ರೀ ಬಾಲ ಗಂಗಾಧರನಾಥ ಸ್ವಾಮೀಜಿಯವರ ಜನ್ಮ ದಿನೋತ್ಸವ ಕಾರ್ಯಕ್ರಮವು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದಲ್ಲಿ ನಡೆಯಲಿದೆ ಎಂದರು. ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳು ಭೈರವೈಕ್ಯರಾಗಿ ಒಂದು ವರ್ಷ ಕಳೆಯುತ್ತಿದೆ.ಜ.16 ರಂದು ಮಕ್ಕಳ ಆರಾಧಾನಾ ಕಾರ್ಯಕ್ರಮ, ಜ.17 ರಂದು ಪೂಜಾ ಕಾರ್ಯಕ್ರಮಗಳು,ಜ.18 ರಂದು ಗುರು ನಮನ ಕಾರ್ಯಕ್ರಮವು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯದಲ್ಲಿ ನಡೆಯಲಿದೆ ಎಂದರು. ಕಾರ್ಯಕ್ರಮಕ್ಕೆ ದೇಶ ಸೇರಿದಂತೆ ವಿದೇಶಗಳಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಜ.18 ರಂದು ಲಕ್ಷಾಂತರ ಮಂದಿ ಭಕ್ತಾಧಿಗಳು ಭಾಗವಹಿಸಲಿದ್ದಾರೆ. ಅಂದು ಗುರುಗಳ ಪಾದುಕೆ ಅಭಿಷೇಕ, ಸಮಾಧಿ ಪೂಜೆ ನಡೆಯಲಿದೆ. ಭಕ್ತಾಧಿಗಳಿಗಾಗಿ ವಸತಿ, ಊಟದ ವ್ಯವಸ್ಥೆ, ವೇದಿಕೆ ನಿರ್ಮಾಣ ಸೇರಿದಂತೆ ಕಾರ್ಯಕ್ರಮದ ಯಶಸ್ವಿಗಾಗಿ ಈಗಾಗಲೇ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದರು. ಎಸ್ಜೆ ಸಿಐಟಿ ಕಾಲೇಜಿನ ಪ್ರಾಂಶುಪಾಲ ಮುನಿಕೆಂಚೇಗೌಡ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

