ಕೋಲಾರ

'ಸ್ವಾಮಿ ವಿವೇಕಾನಂದರ ಆದರ್ಶ ಪಾಲಿಸಿ'

Published On :

ಶಿಡ್ಲಘಟ್ಟ; ಗ್ರಾಮೀಣ ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಅಳವಡಿಸಿಕೊಂಡು ಭವ್ಯ ಭಾರತ ನಿರ್ಮಾಣ ಮಾಡಬೇಕು ಎಂದು ಶಾಸಕ ಎಂ. ರಾಜಣ್ಣ ಕರೆ ನೀಡಿದರು.
ತಾಲೂಕಿನ ಮಳ್ಳೂರು ಗ್ರಾಮದ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ಆವರಣದಲ್ಲಿ ಏರ್ಪಡಿಸಿದ್ದ ಸ್ವಾಮಿ ವಿವೇಕಾನಂದರ 151 ನೇ ಜನ್ಮದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಶಾಲಾ ವಾರ್ಷಿಕೋತ್ಸವದಲ್ಲಿ ಮಾತನಾಡಿ, ಶ್ರಮವಹಿಸಿ ಅಬ್ಯಾಸ ಮಾಡಿದಾಗ ಮಾತ್ರ ಉತ್ತಮ ಭವಿಷ್ಯ ಸಾಧ್ಯ ಎಂದರು.
ಶಿಕ್ಷಣ ತಜ್ಞ ವೀರಭದ್ರಯ್ಯ ಮಾತನಾಡಿ, ಗ್ರಾಮೀಣ ವಿದ್ಯಾರ್ಥಿಗಳು ಕೀಳರಿಮೆ ಬಿಟ್ಟು ಎಲ್ಲಾ ಕ್ಷೇತ್ರಗಳಲ್ಲಿ ಮುನ್ನುಗ್ಗಿದ್ದಾಗ ಮಾತ್ರ ಉನ್ನತ ಸ್ಥಾನ ಸಾಧಿಸಬಹುದು.
 ಸ್ವಾಮಿ ವಿವೇಕಾನಂದರು ಹೇಳುವಂತೆ ದೈರ್ಯಂ ಸರ್ವಸ್ವ ಸಾಧನಂ ಎಂಬ ಮಂತ್ರವನ್ನು ಪ್ರತಿಯೊಬ್ಬರೂ ಜಪಿಸಿದಾಗ ಜಯ ಸಾಧಿಸಬಹುದೆಂದರು. ಚಿಕ್ಕಬಳ್ಳಾಪುರ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ. ಪುಟ್ಟಮಾದಯ್ಯ ಮಾತನಾಡಿ, ಗ್ರಾಮೀಣ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕೆಂದರು. ಕೆ.ಅರ್. ವಿಶ್ವನಾಥ್ ಮಾತನಾಡಿದರು. ಇದೇ ಸಂದರ್ಭದಲ್ಲಿ 2012-13 ನೇ ಸಾಲಿನಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯ ಅಧ್ಯಕ್ಷ ಕೆ.ಎನ್. ರಾಮಾಂಜಿನಪ್ಪ ವಹಿಸಿದ್ದರು. ಪ್ರಾನ್ಸಿಪಾಲ ಚಂದ್ರಕುಮಾರ್, ಕಾರ್ಯದರ್ಶಿ ಎಂ.ಅರ್. ಶಿವಣ್ಣ, ಖಜಾಂಚಿ ಜಿ.ಪಿ. ಲಕ್ಷ್ಮೀಪತಿ, ನಿರ್ದೇಶಕ ಎಂ.ಎನ್. ಗೋಪಾಲ್, ಸಿ. ನಾರಾಯಣಸ್ವಾಮಿ, ಸಿ.ಎಂ. ದೇವರಾಜ್, ಎಂ.ಕೆ. ಚಂದ್ರಶೇಖರ್, ಉಪನ್ಯಾಸಕ ಸಿ.ಎಂ. ಸುರೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.