ಕೊನೆ ಭಾಗಗಳಿಗೆ ನೀರು ಹರಿಸಲು ಆಗ್ರಹಿಸಿ ಪ್ರತಿಭಟನೆ
ನಾಗಮಂಗಲ: ತಾಲೂಕಿನ ಕೊನೆ ಭಾಗಗಳಿಗೆ ಹೇಮಾವತಿ ನದಿಯಿಂದ ನೀರು ಹರಿಸಬೇಕು ಎಂದು ಒತ್ತಾಯಿಸಿ ವಿವಿಧ ಗ್ರಾಮಗಳ ಗ್ರಾಮಸ್ಥರು ಗುರುವಾರ ಪಟ್ಟಣದ ಕಾವೇರಿ ನೀರಾವರಿ ನಿಗಮದ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ತಾಲೂಕಿನ ಚಿಕ್ಕಯಗಟಿ ಕೆರೆ ವ್ಯಾಪ್ತಿಯ ಕರಡಹಳ್ಳಿ, ಚಿಕ್ಕಯಗಟಿ, ದೊಡ್ಡಯಗಟಿ, ಕಲ್ಲಿನಾಥಪುರ ಗ್ರಾಮಸ್ಥರು, ನಿಗಮದ ಕಚೇರಿ ಮುಂಭಾಗ ಧರಣಿ ಕುಳಿತು ಬೇಸಿಗೆ ಸಮೀಸುತ್ತಿದೆ. ತಾಲೂಕಿನ ಕೊನೆ ಭಾಗಗಳ ಕೆರೆ ಕಟ್ಟೆಗಳಿಗೆ ಹೇಮಾವತಿ ನದಿಯಿಂದ ನೀರು ತುಂಬಿಸಲು ಅಧಿಕಾರಿಗಳು ವಿಫಲರಾಗಿದ್ದಾರೆ. ತಕ್ಷಣ ಕೆರೆಗೆ ನೀರು ತುಂಬಿಸುವಂತೆ ಒತ್ತಾಯಿಸಿದರು.
ಹಳ್ಳಿಗಳಲ್ಲಿ ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿರುವ ಹಿನ್ನಲೆಯಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಹೇಳತೀರದಾಗಿದೆ. ಕೆರೆ ಕಟ್ಟೆಗಳಲ್ಲಿ ಅಲ್ಪ ಸ್ವಲ್ಪ ನೀರಿದ್ದರೆ ಜಾನುವಾರುಗಳಿಗಾದರೂ ಅನುಕೂಲವಾಗಲಿದೆ. ಆದ್ದರಿಂದ ನೀರಾವರಿ ಇಲಾಖೆ ಅಧಿಕಾರಿಗಳು ಚಿಕ್ಕಯಗಟಿ ಕೆರೆಗೆ ನೀರು ತುಂಬಿಸಲು ಮುಂದಾಗಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಮನವಿ ಸ್ವೀಕರಿಸಿದ ಕಾವೇರಿ ನೀರಾವರಿ ನಿಗಮದ ಎ.ಇ.ಇ. ಶ್ರೀನಿವಾಸ್, ಅಣೆಕಟ್ಟೆಯಲ್ಲಿ ನೀರಿನ ಪ್ರಮಾಣ ಕಡಿಮೆ ಇರುವ ಕಾರಣ ಕೊನೆ ಭಾಗಕ್ಕೆ ನೀರು ಬರುತ್ತಿಲ್ಲ. ತಕ್ಷಣ ನೀರು ಹರಿಸಿ ಗ್ರಾಮಗಳ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವುದಾಗಿ ತಿಳಿಸಿದರು.
ಪ್ರತಿಭಟನೆಯಲ್ಲಿ ಕರಡಹಳ್ಳಿ ಗ್ರಾಮದ ಕೆ.ಎಂ. ರಾಮಚಂದ್ರಪ್ಪ, ಕೆ.ಜೆ. ಹರೀಶ್, ಕೆ.ಎಂ. ಭದ್ರೇಗೌಡ, ಗ್ರಾಪಂ ಸದಸ್ಯ ಸಿಂಗಾರಿಗೌಡ, ಎಸ್. ಗೋವಿಂದಯ್ಯ, ಕೆ.ಎಸ್. ಕೆಂಚೇಗೌಡ, ಕೆ.ಎಸ್. ರವೀಂದ್ರ, ಆನಂದ್, ಚಿಕ್ಕಯಗಟಿ ನಾಗರಾಜು, ರಾಮೇಗೌಡ, ನಾರಾಯಣಗೌಡ, ಕಲ್ಲಿನಾಥಪುರ ಗ್ರಾಮದ ಮೂರ್ತಿ ಬಸವರಾಜು ಭಾಗವಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

