ಕೋಲಾರ

'ಅತಿಥಿ'ಗಳ ಬೇಡಿಕೆ ಈಡೇರಿಕೆಗೆ 27ಕ್ಕೆ ಸಿಎಂ ಮನೆ ಮುಂದೆ ಧರಣಿ

Published On :

ಚಿಕ್ಕಬಳ್ಳಾಪುರ: ತಮ್ಮ ನ್ಯಾಯಯುತ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಅನೇಕ ಹೋರಾಟಗಳನ್ನು ಮಾಡಿಕೊಂಡು ಬಂದಿದ್ದರೂ ಸ್ಪಂದಿಸದ ಸರ್ಕಾರದ ಧೋರಣೆಯನ್ನು ಖಂಡಿಸಿ ಜ.27ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆ ಮುಂದೆ ಧರಣಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಎನ್.ಶ್ರೀನಿವಾಸಚಾರ್ ತಿಳಿಸಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರೂ ರಾಜ್ಯದಲ್ಲಿ ಅತಿಥಿ ಉಪನ್ಯಾಸಕರಿಗೆ ಸಮರ್ಪಕವಾಗಿ ವೇತನ ಸಿಗುತ್ತಿಲ್ಲ. ಆರು ತಿಂಗಳಿಗೊಮ್ಮೆ ವೇತನ ನೀಡುವುದು, ಇಲ್ಲವೇ ವರ್ಷಾನುಗಟ್ಟಲೇ ಸಂಬಳವನ್ನು ಬಾಕಿ ಉಳಿಸಿಕೊಳ್ಳಲಾಗುತ್ತಿದೆ. ಅಲ್ಲದೇ ಉದ್ಯೋಗ ಭದ್ರತೆಯಿಲ್ಲದೆ ಜೀವನ ನಡೆಸಲು ತೊಂದರೆಯನ್ನು ಅನುಭವಿಸಬೇಕಾದ ಪರಿಸ್ಥಿತಿ ಅತಿಥಿ ಉಪನ್ಯಾಸಕರದ್ದಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಸಂಘದ ಗೌರವಾಧ್ಯಕ್ಷ ಬಿ.ರಾಜಶೇಖರ್ ಮೂರ್ತಿ ಮಾತನಾಡಿ, ಅತಿಥಿ ಉಪನ್ಯಾಸಕರಿಗೆ ಸಿಗಬೇಕಾದ ಸವಲತ್ತುಗಳು ದೊರೆಯುತ್ತಿಲ್ಲ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಇಲ್ಲದಿದ್ದಲ್ಲಿ ನಮ್ಮ ಬೇಡಿಕೆ ಈಡೇರುವವರೆಗೂ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.  ಹೇಮಲತಾ, ಶಿವಪ್ಪ, ಫೈಯಾಜ್ ಖಾನ್, ರಮೇಶ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.