ಕೋಲಾರ

ಅಧಿಕಾರಿಗಳ ಬೇಜವಾಬ್ದಾರಿಗೆ ತಾಪಂ ಅಧ್ಯಕ್ಷೆ ತರಾಟೆ

Published On :

ಚಿಂತಾಮಣಿ: ಸರ್ಕಾರದಿಂದ ದೊರೆಯುವ ಸೌಲತ್ತುಗಳ ಬಗ್ಗೆ ಅರಿವು ಮೂಡಿಸದೆ ಕಾಲಹರಣ ಮಾಡುತ್ತಿದ್ದಾರೆ ಎಂದು ತಾಪಂ ಸದಸ್ಯರು ಅಧಿಕಾರಿಗಳ ಬೇಜವಾಬ್ದಾರಿ ಬಗ್ಗೆ ಸಭೆಯಲ್ಲಿ ತರಾಟೆಗೆ ತೆಗೆದುಕೊಂಡರು.
ನಗರದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ತಾಪಂ ಅಧ್ಯಕ್ಷೆ ಗೌರಮ್ಮನಾಗೇಶ್ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯರಾದ ಸ್ಕೂಲ್ ಸುಬ್ಬಾರೆಡ್ಡಿ, ಶೇಖರ್ ಬಾಬು, ರೆಡ್ಡಪ್ಪ ಸೇರಿದಂತೆ ಇನ್ನೂ ಹಲವಾರು ಸೇರಿ ಸ್ಥಳೀಯ ಕೃಷಿ ಸಹಾಯಕ ಅಧಿಕಾರಿ ನಹೀಂ ಪಾಷ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಶಿವಕುಮಾರಿ, ಅಧಿಕಾರಿಗಳ ವಿರುದ್ಧ ಗರಂ ಆದರು. ತಾಲೂಕಿನಲ್ಲಿ ರೈತರು ಬರ ಪರಿಸ್ಥಿತಿ ಎದುರಿಸುತ್ತಿದ್ದರೂ ಸ್ಥಳೀಯ ಕೃಷಿ ಮತ್ತು ತೋಟಗಾರಿಕೆ ಅಧಿಕಾರಿಗಳು ರೈತರಿಗೆ ಸರ್ಕಾರದಿಂದ ಸೌಲತ್ತು ಮತ್ತು ಅರಿವು ಮೂಡಿಸದೆ ರೈತರನ್ನು ದಿನ ನಿತ್ಯ ಕಚೇರಿಗಳಿಗೆ ಪರದಾಡಿಸುತ್ತಿರುವ ಕಾರ್ಯವೈಖರಿ ಬಗ್ಗೆ ತೀವ್ರ ಅಸಮದಾನ ವ್ಯಕ್ತಪಡಿಸಿದರು.ಬಂದಿರುವ ಅನುದಾನವು ರೈತರಿಗೆ ಸರಿಯಾಗಿ ಅರ್ಹ ಫಲಾನುಭವಿಗಳಿಗೆ ತಲುಪದೇ ಇರುವುದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವೆಂದು ಸಭೆಯಲ್ಲಿ ವಾಗ್ವಾದಕ್ಕಿಳಿದರು.
ಗ್ರಾಮೀಣ ಪ್ರದೇಶದ ಹಳ್ಳಿಗಳಲ್ಲಿ ರಾಜಾರೋಷವಾಗಿ ಮದ್ಯ ಮಾರಾಟ ನಡೆಯುತ್ತಿರುವ ಬಗ್ಗೆ ಅಧ್ಯಕ್ಷೆ ಗೌರಮ್ಮ ನಾಗೇಶ್ ಸ್ಥಳೀಯ ಅಬಕಾರಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಗ್ರಾಮದ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ದಂಧೆ ನಡೆಯುತ್ತಿದೆ. ಇದಕ್ಕೆ ಹಲವು ಅಬಕಾರಿ ಅಧಿಕಾರಿಗಳ ಕುಮ್ಮಕ್ಕಿನಿಂದ ಮದ್ಯ ಮಾರಾಟ ದಂಧೆಗೆ ಕಡಿವಾಣ ಹಾಕುವಲ್ಲಿ ವಿಫಲಗೊಂಡಿದ್ದಾರೆಂದು ಸಭೆಯಲ್ಲಿ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು.
ಅಧಿಕಾರಿಗಳ ವಿರುದ್ಧ ಕಿಡಿ: ಹಳ್ಳಿಯಲ್ಲಿ ಬಡಜನರು ಕೂಲಿಯಿಂದ ಜೀವನ ಮಾಡಿ ಬಂದ ಹಣವನ್ನು ಕುಟುಂಬ ನಿವಾರಣೆಗೆ ಖರ್ಚು ಮಾಡದೆ ಮದ್ಯದ ಅಮಲಿನಲ್ಲಿ ತೇಲುತ್ತಿದ್ದಾರೆ. ಈ ಪರಿಸ್ಥಿತಿಗೆ ಅಬಕಾರಿ ಮತ್ತು ಪೊಲೀಸರ ಪರೋಕ್ಷ ಬೆಂಬಲದಿಂದ ನಗರ ಪ್ರದೇಶದಿಂದ ಗ್ರಾಮಗಳ ಅಂಗಡಿಗಳಲ್ಲಿ ಮದ್ಯ ಮಾರಾಟವು ಭರ್ಜರಿಯಾಗಿ ವ್ಯಾಪಾರ ವಹಿವಾಟು ನಡೆಯುತ್ತಿದೆ ಎಂದು ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ಕಿಡಿ ಕಾರಿದರು. ಗ್ರಾಮಾಂತರ ಪ್ರದೇಶಗಳಲ್ಲಿ ನೀರಿನ ಸಮಸ್ಯೆ, ವಿದ್ಯುತ್ ಸಮಸ್ಯೆ, ಪಡಿತರ ಚೀಟಿದಾರರಿಗೆ ಸಮರ್ಪಕ ಆಹಾರ ವಿತರಣೆ ಮತ್ತು ಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ, ಗ್ಯಾಸ್ ಕಿರಿಕಿರಿ ಸೇರಿದಂತೆ ಇನ್ನೂ ಹಲವು ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ತಾಪಂ ಇಒ ವಸಂತ್‌ಕುಮಾರ್, ತಾಪಂ ಉಪಾಧ್ಯಕ್ಷ ನಾಗರಾಜ್, ಸದಸ್ಯರಾದ ಸವಿತಾ ಮಂಜುನಾಥ್, ಸುಲ್ತಾನ್ ಷರೀಪ್, ರವಿ, ಹಾದಿಗೆರೆ ಚೌಡರೆಡ್ಡಿ, ರೆಡ್ಡಮ್ಮ, ಮೀನಾಶ್ರೀರಾಮರೆಡ್ಡಿ ಸೇರಿದಂತೆ ವಿವಿಧ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.