28 ರಂದು ಜಿಲ್ಲಾ ಕೇಂದ್ರಗಳ ಮುಂದೆ ಸಿಪಿಎಂ ಪ್ರತಿಭಟನೆ
ಚಿಂತಾಮಣಿ: ನಿತ್ಯ ಬಳಕೆ ಪದಾರ್ಥಗಳ ಬೆಲೆ ಏರಿಕೆ ಹಾಗೂ ದಲಿತರ ಮೇಲೆ ದಬ್ಬಾಳಿಕೆ ಖಂಡಿಸಿ ಜ.28 ರಂದು ರಾಜ್ಯದ ಜಿಲ್ಲಾ ಕೇಂದ್ರ ಕಚೇರಿಗಳ ಮುಂಭಾಗದಲ್ಲಿ ಸಿಪಿಎಂ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಗುವುದೆಂದು ಮಾಜಿ ಶಾಸಕ ಹಾಗೂ ರಾಜ್ಯ ಕಾರ್ಯದರ್ಶಿ ಜಿ.ವಿ. ಶ್ರೀರಾಮರೆಡ್ಡಿ ಹೇಳಿದರು.
ನಗರದ ಕಿಸಾನ್ ಪಂಕ್ಷನ್ ಹಾಲ್ನಲ್ಲಿ ನಡೆದ ತಾಲೂಕು ಸಿಪಿಎಂ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿ, ಕುರ್ಚಿ ಮೇಲಿನ ಆಸೆಯಿಂದ ದೌರ್ಜನ್ಯಗಳನ್ನು ನಿಯಂತ್ರಿಸುವಲ್ಲಿ ವಿಫಲವಾಗಿರುವುದಕ್ಕೆ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳೇ ಕಾರಣ ಎಂದು ಜಿ.ವಿ. ಶ್ರೀರಾಮರೆಡ್ಡಿ ಕಿಡಿ ಕಾರಿದರು.
ಶಾಶ್ವತ ನೀರಾವರಿಗೆ ರಾಜಕೀಯ ಪಕ್ಷಗಳ ಬಳಕೆ ಬೇಡ: 9 ಜಿಲ್ಲೆಗಳಲ್ಲಿ ಶಾಶ್ವತ ನೀರಾವರಿ ಯೋಜನೆ ಮತ್ತು ಡಾ. ಪರಮಶಿವಯ್ಯ ವರದಿ ಜಾರಿಗೆ ತರಲು ರಾಜಕೀಯ ಪಕ್ಷಗಳು ನೀರಿನ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವುದು ಸರಿಯಿಲ್ಲವೆಂದು ಜಿ.ವಿ.ಶ್ರೀರಾಮರೆಡ್ಡಿ ಅಸಮದಾನ ವ್ಯಕ್ತಪಡಿಸಿದರು.
ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಶಾಶ್ವತ ನೀರಾವರಿಗೆ ಆಗ್ರಹಿಸಿ 2002 ರಲ್ಲಿ ಪ್ರಥಮ ಬಾರಿಗೆ ಸಿಪಿಎಂ ಪಕ್ಷದ ವತಿಯಿಂದ ಪಾದಯಾತ್ರೆ ಮಾಡಿದಾಗ ಹಲವು ರಾಜಕೀಯ ಪಕ್ಷದ ಮುಖಂಡರು ಲೇವಡಿ ಮಾಡಿದ್ದರು.
ಆದರೆ ಇದೀಗ ಲೋಕಸಭಾ ಚುನಾವಣೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷದ ಹಲವರು ಶಾಶ್ವತ ನೀರಾವರಿ ಯೋಜನೆಯನ್ನು ಬಳಸಿಕೊಂಡು ಎತ್ತಿನಹೊಳೆಗೆ ಚಾಲನೆ ನೀಡಲಾಗುವುದೆಂದು ಕಣ್ಣೊರಿಸುವ ಕೆಲಸಕ್ಕೆ ಮುಂದಾಗಿದ್ದಾರೆಂದು ಲೇವಡಿ ಮಾಡಿದರು.
ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎಂ. ಗೋಪಿನಾಥ್ ಪ್ರಾಸ್ತಾವಿಕ ಭಾಷಣ ಮಾಡಿದರು. ಗೋಪಸಂದ್ರ ಶ್ರೀನಿವಾಸರೆಡ್ಡಿ, ಚನ್ನರಾಯಪ್ಪ, ಲಕ್ಷ್ಮಿನಾರಾಯಣರೆಡ್ಡಿ, ಬಾಬಾಜಾನ್, ಡಿವೈಎಫ್ಐ ಕೃಷ್ಣಾರೆಡ್ಡಿ, ಬಾಬುರೆಡ್ಡಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

