ಕೋಲಾರ

ಡಿವೈಎಫ್‌ಐ ಮುಖಂಡನ ಮೇಲೆ ಹಲ್ಲೆ: ಪ್ರತಿಭಟನೆ

Published On :

ಕೋಲಾರ: ಕುಡಿದ ಅಮಲಿನಲ್ಲಿ ಮೈ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದನ್ನು ಪ್ರಶ್ನಿಸಿದ ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ವಿಜಯಕೃಷ್ಣನ ಮೇಲೆ ಜೆಡಿಎಸ್ ಕಾರ್ಯಕರ್ತರೆನ್ನಲಾದ ಇಬ್ಬರು ಹಲ್ಲೆ ನಡೆಸಿರುವ ಘಟನೆ ಭಾನುವಾರ ಪತ್ರಕರ್ತರ ಸಂಘದ ಆವರಣದಲ್ಲಿ ನಡೆದಿದೆ.
ತೀವ್ರವಾಗಿ ಗಾಯಗೊಂಡ ವಿಜಯಕೃಷ್ಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು ಆರೋಪಿಗಳಾದ ಕೋತಿ ಮಂಜು ಮತ್ತು ರಮೇಶ್ ಎಂಬುವರ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
ಪತ್ರಕರ್ತರ ಭವನದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಡಿವೈಎಫ್‌ಐ ತಾಲೂಕು ಸಮ್ಮೇಳನದಲ್ಲಿ ಭಾಗವಹಿಸಿದ್ದ ಜಿಲ್ಲಾ ಕಾರ್ಯದರ್ಶಿ ವಿಜಯಕೃಷ್ಣ ಮೂತ್ರ ವಿಸರ್ಜನೆಗಾಗಿ ಶೌಚಾಲಯಕ್ಕೆ ಹೋಗಿದ್ದಾಗ, ಅದೇ ಸಮಯಕ್ಕೆ ಅಲ್ಲಿಗೆ ಹೋದ ಕೋತಿ ಮಂಜು ವಿಜಯಕೃಷ್ಣ ಮೈ ಮೇಲೆ ಹಾರುವ ರೀತಿಯಲ್ಲಿ ಹಿಂದಿನಿಂದ ಮೂತ್ರ ವಿಸರ್ಜನೆ ಮಾಡಿದ್ದಾನೆ.
ಇದರಿಂದ ಕುಪಿತರಾದ ವಿಜಯಕೃಷ್ಣ, ಪ್ರಶ್ನಿಸಿದಾಗ ಕೋತಿ ಮಂಜು ಜಗಳ ತೆಗೆದು ಹಲ್ಲೆ ಮಾಡಿದ್ದಾನೆ, ಇವನೊಂದಿಗೆ ಇದ್ದ ರಮೇಶ್ ಎಂಬುವ ಕೋತಿ ಮಂಜುಗೆ ಬೆಂಬಲವಾಗಿ ವಿಜಿ ಮೇಲೆ ಹಲ್ಲೆ ನಡೆಸಿದ್ದರಿಂದ ವಿಜಿ ಬಾಯಿಲ್ಲಿ ರಕ್ತ ಸೋರಿದೆ.
ವಿಷಯ ತಿಳಿದು ತಾಲೂಕು ಸಮ್ಮೇಳನದಲ್ಲಿದ್ದ ಡಿವೈಎಫ್‌ಐ ಕಾರ್ಯಕರ್ತರು ಆರೋಪಿಗಳ ಮೇಲೆ ಹಲ್ಲೆ ಮಾಡಿದ್ದಾರೆ, ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಬರುವ ವೇಳೆಗೆ ಆರೋಪಿಗಳು ಗೋಡೆ ಹಾರಿ ಪರಾರಿಯಾಗಿದ್ದಾರೆ. ಕುಡಿದ ಅಮಲಿನಲ್ಲಿ ನಮ್ಮ ಮುಖಂಡರ ಮೇಲೆ ಹಲ್ಲೆ ಮಾಡಿರುವ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಬೇಕೆಂದು ಡಿವೈಎಫ್‌ಐ ಮುಖಂಡರು, ಜನವಾದಿ ಮಹಿಳಾ ಸಂಘಟನೆಯ ಗೀತಾ ಇತರರು ಒತ್ತಾಯಿಸಿದರು, ಜೆಡಿಎಸ್ ಸಭೆ ಪತ್ರಕರ್ತರ ಸಂಘದಲ್ಲಿ ನಡೆಯುತ್ತಿದ್ದರಿಂದ ಹೊರಗೆ ಗಲಾಟೆ ಕೇಳಿ ಹೊರ ಬಂದ ಜೆಡಿಎಸ್ ಮುಖಂಡರು ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಿದರು. ಹಲ್ಲೆ ಮಾಡಿರುವವವರು ನಮ್ಮ ಪಕ್ಷದವರಲ್ಲವೆಂದು ಸ್ಪಷ್ಟನೆ ನೀಡಿದರು. ಪೊಲೀಸರು ಬಂದು ಪರಿಸ್ಥಿತಿ ತಹಬದಿಗೆ ತಂದ ಮೇಲೆ ಎರಡೂ ಕಡೆ ಸಭೆಗಳು ಸುಸೂತ್ರವಾಗಿ ನಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.