'ಯೋಜನೆಗಳು ಸದುಪಯೋಗವಾಗಲಿ'
ಕೆಜಿಎಫ್: ಕೇಂದ್ರ ಸರ್ಕಾರ ಬಡಕುಟುಂಬಗಳಿಗೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ್ದು ಅರ್ಹಪಲಾನುಭವಿಗಳು ಇಂತಹ ಯೋಜನೆಗಳ ಸದುಪಯೋಗ ಮಾಡಿಕೊಳ್ಳಬೇಕು ಎಂದು ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.
ಬಾಬು ಜಗಜೀವನ್ರಾಮಜೀ ತೆಲುಗು ಮಹಾ ಸಭಾ ವತಿಯಿಂದ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯರು ಮತ್ತು ಜಿಲ್ಲಾ ಸಫಾಯಿ ಕರ್ಮಚಾರಿ ಉಪಾಧ್ಯಕ್ಷ ಒ.ವಿ. ಡೇವಿಡ್ ಅಧ್ಯಕ್ಷತೆಯಲ್ಲಿ ಕೆಜಿಎಫ್ ನೆಹರು ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಬಡವರಿಗೆ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ವೇಳೆ ಸುಮಾರು 58 ಮಂದಿ ಸಫಾಯಿ ಕರ್ಮಚಾರಿ ಕುಟುಂಬಗಳಿಗೆ ಮಂಜೂರಾತಿ ಅದೇಶ ಪತ್ರಗಳನ್ನು ಕೇಂದ್ರ ಸಚಿವರು ವಿತರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಒ.ವಿ. ಡೇವಿಡ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದುಳಿದ ಬಡಕುಟುಂಬಗಳಿಗೆ ಮತ್ತು ಸಫಾಯಿ ಕರ್ಮಚಾರಿಗಳಿಗೆ ಮುಂದಿನ ಉದ್ಯೋಗವನ್ನು ಕಲ್ಪಿಸಿಕೊಳ್ಳಲು ಹಾಗೂ ಜೀವನೋಪಯಕ್ಕೆ ವಿವಿಧ ರೀತಿಯ ಸಾಲ ಸೌಲಭ್ಯ ಜಾರಿಗೊಳಿಸಿದ್ದು ಮಾದಿಗ ಸಮುದಾಯದ ಮತ್ತು ಸಫಾಯಿ ಕರ್ಮಚಾರಿಗಳಿಗೆ ಹೆಚ್ಚಿನ ಅನುಕೂಲಗಳನ್ನು ಮಾಡಿದೆ ಎಂದರು.
ರಾಜ್ಯ ಕಾಂಗ್ರೆಸ್ ಮಹಿಳಾ ಉಪಾಧ್ಯಕ್ಷೆ ರೂಪಾಶಶಿಧರ್, ಜಿಪಂ ಸದಸ್ಯ ಆ.ಮು. ಲಕ್ಷ್ಮೀನಾರಾಯಣ, ನಾರಾಯಣರೆಡಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

